Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:56 - ಕನ್ನಡ ಸತ್ಯವೇದವು J.V. (BSI)

56 ಆದರೆ ಪ್ರವಾದಿಗಳು ಬರೆದ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

56 ಆದರೆ ಪ್ರವಾದಿಗಳು ಬರೆದ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು” ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

56 ಆದರೆ ಪವಿತ್ರಗ್ರಂಥದ ಪ್ರವಾದನೆಗಳು ಈಡೇರಲೆಂದೇ ಇದೆಲ್ಲಾ ಜರುಗಿದೆ,” ಎಂದರು. ಆಗ ಶಿಷ್ಯರೆಲ್ಲರೂ ಯೇಸುವನ್ನು ತೊರೆದು ಪಲಾಯನಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

56 ಆದರೆ ಪ್ರವಾದಿಗಳು ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಇದೆಲ್ಲಾ ಆಯಿತು” ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

56 ಆದರೆ ಪವಿತ್ರ ವೇದದ ಪ್ರವಾದನೆಗಳು ನೆರವೇರುವಂತೆ ಇದೆಲ್ಲಾ ಆಯಿತು,” ಎಂದು ಹೇಳಿದರು. ಆಗ ಶಿಷ್ಯರೆಲ್ಲರೂ ಯೇಸುವನ್ನು ಬಿಟ್ಟು ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

56 ಖರೆ ಪ್ರವಾದ್ಯಾನಿ ಅಪ್ನಾಚ್ಯಾ ಪುಸ್ತಕಾತ್ನಿ ಸಾಂಗಲ್ಲೆ ಪುರಾ ಹೊವ್‍ಸಾಟ್ನಿ ಅಶೆ ಸಗ್ಳೆ ಹೊಲೆ.” ಮಟ್ಲ್ಯಾನ್. ತವ್ಡ್ಯಾಕ್ ಮಟ್ಲ್ಯಾರ್ ಸಗ್ಳಿ ಶಿಸಾ ಜೆಜುಕ್ ಸೊಡುನ್ ಪಳುನ್ ಗೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:56
17 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಖಡ್ಗವೇ, ನಾನು ನೇವಿುಸಿದ ಕುರುಬನೂ ನನ್ನ ಸಂಗಡಿಗನೂ ಆಗಿರುವವನಿಗೆ ವಿರುದ್ಧವಾಗಿ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


ನೋಡಿರಿ, ನಿಮ್ಮಲ್ಲಿ ಒಬ್ಬೊಬ್ಬನು ತನ್ನತನ್ನ ಸ್ಥಳಕ್ಕೆ ಚದರಿಹೋಗಿ ನನ್ನನ್ನು ಒಂಟಿಗನಾಗಿ ಬಿಡುವ ಕಾಲ ಬರುವದು, ಈಗ ಬಂದಿದೆ. ಆದರೆ ನಾನು ಒಂಟಿಗನಲ್ಲ, ತಂದೆಯು ನನ್ನ ಸಂಗಡ ಇದ್ದಾನೆ.


ಆಗ ಯೇಸು, ಅವರಿಗೆ - ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ದಿಗಿಲುಪಟ್ಟು ಹಿಂಜರಿಯುವಿರಿ. ಕುರುಬನನ್ನು ಹೊಡೆಯುವೆನು; ಹಿಂಡಿನ ಕುರಿಗಳು ಚದರಿಹೋಗುವವು ಎಂದು ಬರೆದದೆಯಲ್ಲಾ.


ಕಳುಹಿಸಿಕೊಟ್ಟರೆ ನನಗೆ ಇಂಥಿಂಥದು ಆಗಬೇಕೆಂಬುವ ಶಾಸ್ತ್ರದ ಮಾತುಗಕು ನೆರವೇರುವದು ಹೇಗೆ ಎಂದು ಹೇಳಿದನು.


ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಕಡೆ ಆಗಲಿಲ್ಲ; ಎಲ್ಲರೂ ನನ್ನನ್ನು ಕೈಬಿಟ್ಟರು; ಇದು ಅವರ ಲೆಕ್ಕಕ್ಕೆ ಸೇರಿಸಲ್ಪಡದೆ ಇರಲಿ.


ಸಹೋದರರೇ, ಯೇಸುವನ್ನು ಹಿಡಿದುಕೊಂಡವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವದು ಅವಶ್ಯವಾಗಿತ್ತು.


ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ; ಹಾಗೆ ಆತನ ವಿಷಯವಾಗಿ ಬರೆದದೆಯಲ್ಲಾ. ಆದರೆ ಯಾವನು ಮನುಷ್ಯಕುಮಾರನನ್ನು ಹಿಡುಕೊಡುವನೋ ಅವನ ಗತಿಯನ್ನು ಏನು ಹೇಳಲಿ. ಆ ಮನುಷ್ಯನು ಹುಟ್ಟದಿದ್ದರೆ ಅವನಿಗೆ ಒಳ್ಳೇದಾಗಿತ್ತು ಅಂದನು.


ಯಾವನು ನಮಗೆ ಜೀವಶ್ವಾಸವೋ, ಯಾವನು ಯೆಹೋವನ ಅಭಿಷಿಕ್ತನೋ ಯಾವನನ್ನು ಆಶ್ರಯಿಸಿ ಜನಾಂಗಗಳ ಮಧ್ಯದಲ್ಲಿ ಉಳಿಯುವೆವು ಎಂದು ನಾವು ನಂಬಿಕೊಂಡಿದ್ದೆವೋ ಅವನು ಅವರ ಗುಂಡಿಗಳಲ್ಲಿ ಸಿಕ್ಕಿಬಿದ್ದನು.


ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು; ತುಂಬಿತುಳುಕುವ ಪ್ರಲಯವು ಪಟ್ಟಣವನ್ನು ಕೊನೆಗಾಣಿಸುವದು; ಅಂತ್ಯದವರೆಗೂ ಯುದ್ಧವಾಗುವದು, ನಿಶ್ಚಿತನಾಶನಗಳು ಸಂಭವಿಸುವವು.


ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ ಭವಿಷ್ಯದ್‍ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿಸಿ ಕೊಂದಿರಿ.


ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತೀರಿಸುವದು, ಅಪರಾಧವನ್ನು ನಿವಾರಿಸುವದು, ಸನಾತನ ಧರ್ಮವನ್ನು ಸ್ಥಾಪಿಸುವದು, ಕನಸನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವದು, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವದು, ಇವೆಲ್ಲಾ ನೆರವೇರುವದಕ್ಕೆ ಮೊದಲು ನಿನ್ನ ಜನಕ್ಕೂ ನಿನ್ನ ಪರಿಶುದ್ಧಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ; ಯೆರೂಸಲೇಮು ಜನನಿವಾಸವಾಗುವದು, ಯೆಹೂದದ ಪಟ್ಟಣಗಳು ತಿರಿಗಿ ಕಟ್ಟಲ್ಪಡುವವು, ಅಲ್ಲಿನ ಹಾಳನ್ನು ಹಸನುಮಾಡುವೆನು ಎಂದು ನಾನು ಮುಂತಿಳಿಸಿ


ನಿನಗೂ ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವದು, ನೀನು ಅದರ ಹಿಮ್ಮಡಿಯನ್ನು ಕಚ್ಚುವಿ. ಎಂದು ಹೇಳಿದನು.


ಯೇಸು ಅವರಿಗೆ - ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ ಎಂಬುವ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು