Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:64 - ಕನ್ನಡ ಸತ್ಯವೇದವು J.V. (BSI)

64 ನೀನೇ ಹೇಳಿದ್ದೀ; ಇದಲ್ಲದೆ ಇನ್ನು ಮೇಲೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳ ಮೇಲೆ ಕುಳಿತು ಬರುವದನ್ನೂ ಕಾಣುವಿರಿ ಎಂದು ನಿಮಗೆ ಹೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

64 ಯೇಸು ಪ್ರತ್ಯುತ್ತರವಾಗಿ, “ನೀನೇ ಹೇಳಿದ್ದೀ; ಆದರೆ ನಾನು ನಿಮಗೆ ಹೇಳುವುದೇನೆಂದರೆ, ಇನ್ನು ಮೇಲೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳ ಮೇಲೆ ಕುಳಿತು ಬರುವುದನ್ನೂ ಕಾಣುವಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

64 ಅದಕ್ಕೆ ಯೇಸು, “ಅದು ನಿಮ್ಮ ಬಾಯಿಂದಲೇ ಬಂದಿದೆ; ಮಾತ್ರವಲ್ಲ, ನಾನು ಹೇಳುವುದನ್ನು ಕೇಳಿ; ನರಪುತ್ರನು ಸರ್ವಶಕ್ತ ದೇವರ ಬಲಗಡೆ ಆಸೀನನಾಗಿರುವುದನ್ನೂ ಆಕಾಶದ ಮೇಘಗಳ ಮೇಲೆ ಬರುವುದನ್ನೂ ಇನ್ನು ಮುಂದಕ್ಕೆ ಕಾಣುವಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

64 ಯೇಸು, “ಹೌದು, ನೀನು ಹೇಳಿದಂತೆ ಆತನೇ ನಾನು. ಆದರೆ ನಿನಗೆ ಹೇಳುವುದೇನೆಂದರೆ, ಇನ್ನು ಮೇಲೆ ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ಕುಳಿತಿರುವುದನ್ನೂ ಆಕಾಶದ ಮೋಡಗಳ ಮೇಲೆ ಕುಳಿತು ಬರುವುದನ್ನೂ ನೀವು ಕಾಣುವಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

64 ಅದಕ್ಕೆ ಯೇಸು ಅವನಿಗೆ, “ನೀನೇ ಹೇಳಿದ್ದೀ; ಆದರೂ ಇನ್ನು ಮೇಲೆ ಮನುಷ್ಯಪುತ್ರನಾದ ನಾನು ಸರ್ವಶಕ್ತರ ಬಲಗಡೆಯಲ್ಲಿ ಕುಳಿತಿರುವುದನ್ನೂ ಆಕಾಶದ ಮೇಘಗಳ ಮೇಲೆ ಬರುವುದನ್ನೂ ನೀವು ಕಾಣುವಿರಿ ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

64 ತನ್ನಾ ಜೆಜುನ್, “ಹೊಯ್,ತಿಯಾ ಸಾಂಗಲ್ಲ್ಯಾ ಸರ್ಕೆಚ್. ಖರೆ ಮಿಯಾ ತುಮ್ಕಾ ಸಗ್ಳ್ಯಾಕ್ನಿ ಸಾಂಗ್ತಾ, ಅತ್ತಾಚ್ಯಾನ್ ತುಮಿ ಮಾನ್ಸಾಚೊ ಲೆಕ್ ಪರಮೊನ್ನತ್ ದೆವಾಚ್ಯಾ ಉಜ್ವ್ಯಾ ಬಾಜುಕ್ ಬಸಲ್ಲೊ ಅನಿ ಸರ್‍ಗಾಚ್ಯಾ ಮೊಡಾಂಚ್ಯಾ ವೈನಾ ಯೆತಲೊ ಬಗ್ತ್ಯಾಶಿ.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:64
26 ತಿಳಿವುಗಳ ಹೋಲಿಕೆ  

ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು, ಅವನನ್ನು ಆತನ ಸನ್ನಿಧಿಗೆ ತಂದರು.


ಯೇಸು - ನಾನೇ, ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳೊಂದಿಗೆ ಬರುವದನ್ನೂ ನೋಡುವಿರಿ ಅಂದನು.


ಯೆಹೋವನು ನನ್ನ ಒಡೆಯನಿಗೆ - ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ನುಡಿದನು.


ಈತನು ದೇವರ ಪ್ರಭಾವದ ಪ್ರಕಾಶವೂ ಆತನ ತತ್ವದ ಮೂರ್ತಿಯೂ ತನ್ನ ಶಕ್ತಿಯ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ಪಾಪವಿಶುದ್ಧಿಮಾಡಿದ ಮೇಲೆ ಉನ್ನತಲೋಕದೊಳಗೆ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಇಗೋ ಮೇಘಗಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂವಿುಯಲ್ಲಿರುವ ಎಲ್ಲಾ ಕುಲದವರು ಆತನನ್ನು ನೋಡಿ ಎದೆಬಡುಕೊಳ್ಳುವರು. ಹೌದು, ಹಾಗೆಯೇ ಆಗುವದು. ಆಮೆನ್.


ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸ್ಥಿರಚಿತ್ತದಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡು ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ.


ಆಗ ಮನುಷ್ಯಕುಮಾರನು ಬಲದಿಂದಲೂ ಬಹುಮಹಿಮೆಯಿಂದಲೂ ಮೇಘದಲ್ಲಿ ಬರುವದನ್ನು ಕಾಣುವರು.


ಆಗ ಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವದು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವದನ್ನು ಕಾಣುವರು.


ಆಗ ಆತನನ್ನು ಹಿಡುಕೊಡಬೆಕೆಂದಿದ್ದ ಯೂದನು - ಗುರುವೇ, ನಾನಲ್ಲವಲ್ಲ? ಅನ್ನಲಾಗಿ ಯೇಸು ಅವನಿಗೆ - ನೀನೇ ಹೇಳಿದ್ದೀ ಎಂದು ಹೇಳಿದನು.


ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಎಲ್ಲಾ ದೇವದೂತರೊಂದಿಗೆ ಕೂಡಿಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕೂತುಕೊಳ್ಳುವನು;


ಮನುಷ್ಯಕುಮಾರನು ತನ್ನ ತಂದೆಯ ಪ್ರಭಾವದೊಡನೆ ತನ್ನ ದೂತರ ಸಮೇತವಾಗಿ ಬರುವನು; ಆವಾಗ ಆತನು ಒಬ್ಬೊಬ್ಬನಿಗೆ ಅವನವನ ನಡತೆಗೆ ತಕ್ಕ ಫಲವನ್ನು ಕೊಡುವನು.


ಆಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಇನ್ನು ಕಾಣಿಸದ ಹಾಗಾದವು.


ಪ್ರಧಾನದೂತನ ಶಬ್ದದೊಡನೆಯೂ ದೇವರ ತುತೂರಿಧ್ವನಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು.


ಗಲಿಲಾಯದವರೇ, ನೀವು ಯಾಕೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಕ್ಕೆ ಸೇರಿಸಲ್ಪಟ್ಟಿರುವ ಈ ಯೇಸು ಯಾವ ರೀತಿಯಲ್ಲಿ ಆಕಾಶದೊಳಕ್ಕೆ ಹೋಗಿರುವದನ್ನು ನೀವು ಕಂಡಿರೋ ಅದೇ ರೀತಿಯಲ್ಲಿ ಬರುವನು ಎಂದು ಹೇಳಿದರು.


ಅದಕ್ಕೆ ಪಿಲಾತನು - ಹಾಗಾದರೆ ನೀನು ಅರಸನು ಹೌದಲ್ಲವೇ ಅಂದನು. ಯೇಸು ಅವನಿಗೆ - ನನ್ನನ್ನು ಅರಸನೆಂದು ನೀನೇ ಹೇಳಿದ್ದೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಹೇಳುವದಕ್ಕೋಸ್ಕರ ಹುಟ್ಟಿದವನು, ಅದಕ್ಕೋಸ್ಕರವೇ ಈ ಲೋಕಕ್ಕೆ ಬಂದಿದ್ದೇನೆ. ಸತ್ಯಪರರೆಲ್ಲರು ನನ್ನ ಮಾತಿಗೆ ಕಿವಿಕೊಡುತ್ತಾರೆ ಎಂದು ಉತ್ತರಕೊಟ್ಟನು.


ಆಗ ಎಲ್ಲರು - ಹಾಗಾದರೆ ನೀನು ದೇವರ ಕುಮಾರನೋ ಎಂದು ಕೇಳಲು ಆತನು ಅವರಿಗೆ - ನನ್ನನ್ನು ಅವನೇ ಎಂದು ನೀವೇ ಹೇಳುತ್ತೀರಿ ಎಂದು ಹೇಳಿದನು.


ಯೇಸು ದೇಶಾಧಿಪತಿಯ ಮುಂದೆ ನಿಂತಿರುವಾಗ ದೇಶಾಧಿಪತಿಯು ಆತನನ್ನು - ನೀನು ಯೆಹೂದ್ಯರ ಅರಸನು ಹೌದೋ ಎಂದು ಕೇಳಿದನು. ಯೇಸು - ನೀನೇ ಹೇಳಿದ್ದೀ ಅಂದನು.


ತಿನ್ನದವನೇ, ನಿನ್ನ ಸಹೋದರನ ವಿಷಯವಾಗಿ ನೀನು ತೀರ್ಪುಮಾಡುವದೇನು? ತಿನ್ನುವವನೇ, ನಿನ್ನ ಸಹೋದರನನ್ನು ನೀನು ಹೀನೈಸುವದೇನು? ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲಬೇಕಲ್ಲಾ.


ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗಮೇಘವಾಹನನಾಗಿ ಐಗುಪ್ತಕ್ಕೆ ಬರುವನು; ಆತನು ಸಮ್ಮುಖನಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತ್ಯರ ಹೃದಯವು ತಮ್ಮೊಳಗೆ ಕರಗಿ ನೀರಾಗುವದು.


ಯೇಸು ಅವನಿಗೆ - ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ ಎಂದು ಹೇಳಿದನು.


ನಿಮಗೆ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತವರೊಳಗೆ ಕೆಲವರು, ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವ ತನಕ ಮರಣಹೊಂದುವದಿಲ್ಲ ಅಂದನು.


ಆಗ ಯೇಸು ಹತ್ತರಕ್ಕೆ ಬಂದು - ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.


ಆದರೆ ಇಂದಿನಿಂದ ಮನುಷ್ಯಕುಮಾರನು ಸರ್ವಶಕ್ತನಾದ ದೇವರ ಬಲಗಡೆಯಲ್ಲಿ ಆಸೀನನಾಗಿರುವನು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು