Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:65 - ಕನ್ನಡ ಸತ್ಯವೇದವು J.V. (BSI)

65 ಆಗ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಕೊಂಡು - ಇದು ದೇವದೂಷಣೆಯ ಮಾತು; ನಮಗೆ ಸಾಕ್ಷಿಗಳು ಇನ್ನು ಯಾತಕ್ಕೆ ಬೇಕು? ಇವನು ಈಗಲೇ ಆಡಿದ ದೂಷಣೆಯ ಮಾತನ್ನು ಕೇಳಿದಿರಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

65 ಆಗ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಇವನು ದೇವದೂಷಣೆಯ ಮಾತನಾಡಿದ್ದಾನೆ; ನಮಗೆ ಸಾಕ್ಷಿಗಳು ಇನ್ನು ಯಾತಕ್ಕೆ ಬೇಕು? ನೋಡಿ ಇವನು ಈಗಲೇ ಆಡಿದ ದೂಷಣೆಯ ಮಾತನ್ನು ಕೇಳಿದಿರಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

65 ಇದನ್ನು ಕೇಳಿದ್ದೇ ಪ್ರಧಾನಯಾಜಕನು ತನ್ನ ಉಡುಪನ್ನು ಕೋಪದಿಂದ ಹರಿದುಕೊಂಡನು. “ಇವನು ದೇವದೂಷಣೆ ಆಡಿದ್ದಾನೆ. ಇನ್ನು ನಮಗೆ ಸಾಕ್ಷಿಗಳು ಏತಕ್ಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

65 ಪ್ರಧಾನಯಾಜಕನು ಇದನ್ನು ಕೇಳಿ ಬಹಳ ಕೋಪಗೊಂಡು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಈ ಮನುಷ್ಯನು ದೇವದೂಷಣೆ ಮಾಡಿದ್ದಾನೆ. ನಮಗೆ ಇನ್ನು ಯಾವ ಸಾಕ್ಷಿಗಳ ಅಗತ್ಯವೂ ಇಲ್ಲ. ಇವನು ಮಾಡಿದ ದೇವದೂಷಣೆಯನ್ನು ನೀವೇ ಕೇಳಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

65 ಆಗ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಈತನು ದೇವದೂಷಣೆ ಮಾಡಿದ್ದಾನೆ. ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಏತಕ್ಕೆ? ನೋಡಿ, ಈಗ ಈತನ ದೇವದೂಷಣೆಯನ್ನು ನೀವೇ ಕೇಳಿದ್ದೀರಲ್ಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

65 ತನ್ನಾ ಮಹಾಯಾಜಕಾನ್ ರಾಗಾನ್ ಅಪ್ನಾಚೆ ಕಪ್ಡೆ ಪಿಜುನ್ ಘೆವ್ನ್, “ಹಿ ದೆವಾಚಿ ನಿಂದಾ ಹೊಲಿ! ಅನಿ ಜಾಸ್ತಿಚಿ ಮೊಟಿ ಸಾಕ್ಷಿ ಅಮ್ಕಾ ಪಾಜೆ ಮನುನ್ ನಾ! ತೆನಿ ಬೊಲಲ್ಲಿ ದೆವಾಚಿ ನಿಂದ್ಯಾ ತುಮಿಚ್ ಆಯಿಕ್ಲ್ಯಾಶಿ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:65
12 ತಿಳಿವುಗಳ ಹೋಲಿಕೆ  

ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ ನೀನು ದೇವದೂಷಣೆ ಮಾಡುತ್ತೀ ಅನ್ನುತ್ತೀರೋ?


ಯೆಹೂದ್ಯರು - ನಾವು ನಿನ್ನ ಮೇಲೆ ಕಲ್ಲೆಸೆಯುವದು ಒಳ್ಳೇ ಕಾರ್ಯದ ದೆಸೆಯಿಂದಲ್ಲ, ದೇವದೂಷಣೆಯ ದೆಸೆಯಿಂದಲೂ ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರನ್ನಾಗಿ ಮಾಡಿಕೊಳ್ಳುವದರ ದೆಸೆಯಿಂದಲೂ ನಿನ್ನ ಮೇಲೆ ಕಲ್ಲೆಸೆಯುತ್ತೇವೆ ಅಂದರು.


ಅಲ್ಲಿದ್ದ ಶಾಸ್ತ್ರಿಗಳಲ್ಲಿ ಕೆಲವರು - ಇವನು ದೇವದೂಷಣೆ ಮಾಡುತ್ತಾನೆಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.


ಅರಸನಾಗಲಿ ಸುರಳಿಯ ಮಾತುಗಳನ್ನೆಲ್ಲಾ ಕೇಳಿದ ಅವನ ಸೇವಕರಲ್ಲಿ ಯಾರೇ ಆಗಲಿ ಭಯಪಡಲಿಲ್ಲ, ಬಟ್ಟೆಗಳನ್ನು ಹರಿದುಕೊಳ್ಳಲಿಲ್ಲ.


ಮತ್ತು ದೇಶವನ್ನು ಸಂಚರಿಸಿ ನೋಡಿದವರಲ್ಲಿದ್ದ ನೂನನ ಮಗನಾದ ಯೆಹೋಶುವನೂ ಯೆಪುನ್ನೆಯ ಮಗನಾದ ಕಾಲೇಬನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು


ಇದನ್ನು ಕೇಳಿ ಅಪೊಸ್ತಲರಾದ ಬಾರ್ನಬ ಪೌಲರು ತಮ್ಮ ವಸ್ತ್ರಗಳನ್ನು ಹರಕೊಂಡು ಜನರ ಗುಂಪಿನೊಳಗೆ ಕೂಗುತ್ತಾ ನುಗ್ಗಿ -


ಅದಕ್ಕೆ ಆ ಶಾಸ್ತ್ರಿಗಳೂ ಫರಿಸಾಯರೂ - ದೇವದೂಷಣೆಯ ಮಾತನ್ನಾಡುವ ಇವನು ಎಷ್ಟರವನು? ಪಾಪಗಳನ್ನು ಕ್ಷವಿುಸಿಬಿಡುವದು ದೇವರೊಬ್ಬನಿಂದ ಹೊರತು ಮತ್ತಾರಿಂದಾದೀತು ಎಂದು ಅಂದುಕೊಳ್ಳುತ್ತಿದ್ದರು.


ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಕೊಂಡು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.


ಗೂನು ಗುಜ್ಜಾರಿಯಾಗಲಿ ಹೂಗಣ್ಣ ಕಾಯಿಗಣ್ಣನಾಗಲಿ ಕಜ್ಜಿ ತುರಿಗಳುಳ್ಳವನಾಗಲಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು