Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:74 - ಕನ್ನಡ ಸತ್ಯವೇದವು J.V. (BSI)

74 ಆ ಮನುಷ್ಯನನ್ನು ನಾನರಿಯೆನು ಎಂದು ಹೇಳಿ ಶಾಪಹಾಕಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

74 ಅವನು, “ಶಾಪಹಾಕಿಕೊಳ್ಳುವುದಕ್ಕೆ ಪ್ರಾರಂಭಿಸಿ ಆಣೆಯಿಟ್ಟು, ಆ ಮನುಷ್ಯನನ್ನು ನಾನರಿಯೆನು” ಎಂದು ಹೇಳಿದನು. ಕೂಡಲೇ ಹುಂಜವೂ ಕೂಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

74 ಆಗ ಪೇತ್ರನು ತನ್ನನ್ನೇ ಶಪಿಸಿಕೊಳ್ಳಲಾರಂಭಿಸಿ, “ಆ ಮನುಷ್ಯನನ್ನು ನಾನು ಖಂಡಿತವಾಗಿ ಅರಿಯೆನು,” ಎಂದು ಆಣೆಯಿಟ್ಟು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

74 ಆಗ ಪೇತ್ರನು ಶಪಿಸಿಕೊಳ್ಳತೊಡಗಿ, “ನಾನು ದೇವರ ಮೇಲೆ ಆಣೆಯಿಟ್ಟು ಹೇಳುತ್ತೇನೆ. ಯೇಸುವೆಂಬ ಮನುಷ್ಯನು ನನಗೆ ತಿಳಿದೇ ಇಲ್ಲ!” ಎಂದು ಹೇಳಿದನು. ಆ ಕೂಡಲೇ ಕೋಳಿ ಕೂಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

74 ಅದಕ್ಕೆ ಅವನು, “ಆ ಮನುಷ್ಯನನ್ನು ನಾನು ಅರಿಯೆನು,” ಎಂದು ಶಪಿಸಿಕೊಳ್ಳುವುದಕ್ಕೂ ಆಣೆಯಿಟ್ಟುಕೊಳ್ಳುವುದಕ್ಕೂ ಪ್ರಾರಂಭಿಸಿದನು. ಕೂಡಲೇ ಹುಂಜ ಕೂಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

74 ತನ್ನಾ ಪೆದ್ರುನ್, “ಮಿಯಾ ಖರೆಬಿ ಖರೆಚ್ ಸಾಂಗುಕ್ ಲಾಗ್ಲಾ. ಮಿಯಾ ಝುಟೆ ಬೊಲುಲಾ ಹೊಲ್ಯಾರ್ ದೆವ್ ಮಾಕಾ ಶಿಕ್ಷಾ ದಿಂವ್ದಿತ್. ಮಿಯಾ ತ್ಯಾ ಮಾನ್ಸಾಕ್ ವಳ್ಕಿಚ್ ನಾ!” ಮಟ್ಲ್ಯಾನ್. ತವ್ಡ್ಯಾಕ್ ಮಟ್ಲ್ಯಾರ್ ಕೊಂಬೊ ಭೊಕ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:74
19 ತಿಳಿವುಗಳ ಹೋಲಿಕೆ  

ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದದರಿಂದ ನೀನು ಆಸಕ್ತನಾಗಿರು; ದೇವರ ಕಡೆಗೆ ತಿರುಗಿಕೋ.


ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ ಅವನು ಶಾಪಗ್ರಸ್ತನಾಗಲಿ. ಕರ್ತನು ಬರುತ್ತಾನೆ.


ಅದಕ್ಕೆ ಪೇತ್ರನು ತಿರಿಗಿ ಅಲ್ಲ ಅಂದನು. ಕೂಡಲೆ ಕೋಳಿ ಕೂಗಿತು.


ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ದೇಹ ಎರಡನ್ನೂ ಕೂಡ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.


ಶರೀರಸಂಬಂಧವಾಗಿ ಸ್ವಜನರಾಗಿರುವ ನನ್ನ ಸಹೋದರರಿಗೋಸ್ಕರ ನಾನೇ ಸಾಧ್ಯವಾದರೆ ಕ್ರಿಸ್ತನನ್ನು ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.


ಆದರೆ ಪೇತ್ರನು - ನೀನು ಹೇಳುವದೇನೋ ನಾನರಿಯೆನಪ್ಪಾ ಅಂದನು. ಅವನು ಈ ಮಾತನ್ನು ಆಡುತ್ತಿರುವಾಗಲೇ ಕೋಳಿ ಕೂಗಿತು.


ಅವನು - ಅಲ್ಲ; ನೀನು ಏನನ್ನುತ್ತೀಯೋ ನನಗೆ ಗೊತ್ತಿಲ್ಲ, ತಿಳಿಯುವದಿಲ್ಲ ಎಂದು ಹೇಳಿ ಹೊರಂಗಳಕ್ಕೆ ಹೋದನು.


ಯೇಸು - ನಿನಗೆ ಸತ್ಯವಾಗಿ ಹೇಳುತ್ತೇನೆ, ಈ ಹೊತ್ತು ಈ ರಾತ್ರಿಯಲ್ಲಿಯೇ ಕೋಳಿ ಎರಡು ಸಾರಿ ಕೂಗುವದಕ್ಕಿಂತ ಮುಂಚೆ ನೀನು ನನ್ನ ವಿಷಯದಲ್ಲಿ - ಅವನನ್ನು ಅರಿಯೆನೆಂಬದಾಗಿ ಮೂರು ಸಾರಿ ಹೇಳುವಿ ಅಂದನು.


ಅವನನ್ನು ಕೊಲ್ಲಿಸಿದ್ದಕ್ಕೆ ನಾವೂ ನಮ್ಮ ಮಕ್ಕಳೂ ಉತ್ತರ ಕೊಡುತ್ತೇವೆ ಅಂದರು.


ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣುಗಳನ್ನು ಕೊಡುವ ಇಸ್ರಾಯೇಲ್ಯರು ಶಾಪಗ್ರಸ್ತರಾಗಲಿ ಎಂದು ಆಣೆಯಿಟ್ಟುಕೊಂಡಿದ್ದೇವಾದದರಿಂದ ನಾವು ಅವರಿಗೆ ನಮ್ಮ ಹೆಣ್ಣುಗಳನ್ನು ಕೊಡುವದಕ್ಕಾಗುವದಿಲ್ಲ ಎಂದು ಮಾತಾಡಿಕೊಳ್ಳುತ್ತಿರುವಾಗ


ಅವನು ಒಂದಾನೊಂದು ದಿವಸ ತನ್ನ ತಾಯಿಗೆ - ಅಮ್ಮಾ, ಕಳವಾಗಿದ್ದ ನಿನ್ನ ಸಾವಿರದ ನೂರು ರೂಪಾಯಿಗಳಿಗೋಸ್ಕರ ನೀನು ನನಗೆ ಕೇಳಿಸುವಂತೆ ಶಪಿಸಿದಿಯಲ್ಲಾ; ಇಗೋ, ಆ ರೂಪಾಯಿಗಳು ನನ್ನ ಹತ್ತಿರ ಇವೆ; ನಾನು ತೆಗೆದುಕೊಂಡಿದ್ದೆನು ಎಂದು ಹೇಳಲು ಆಕೆಯು - ನನ್ನ ಮಗನೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ ಅಂದಳು.


ಯೇಸು - ನಿನಗೆ ಸತ್ಯವಾಗಿ ಹೇಳುತ್ತೇನೆ. ಇದೇ ರಾತ್ರಿಯಲ್ಲಿ ಕೋಳಿಕೂಗುವದಕ್ಕಿಂತ ಮುಂಚೆ ನೀನು ನನ್ನ ವಿಷಯದಲ್ಲಿ - ಅವನನ್ನು ಅರಿಯೆನೆಂಬದಾಗಿ ಮೂರು ಸಾರಿ ಹೇಳುವಿ ಅಂದನು.


ಸ್ವಲ್ಪ ಹೊತ್ತಿನ ಮೇಲೆ ಅಲ್ಲಿ ನಿಂತವರು ಮುಂದೆ ಬಂದು ಪೇತ್ರನಿಗೆ - ನಿಶ್ಚಯವಾಗಿ ನೀನು ಸಹ ಅವರಲ್ಲಿ ಒಬ್ಬನು, ನಿನ್ನ ಭಾಷೆಯೇ ನಿನ್ನನ್ನು [ಗಲಿಲಾಯದವನೆಂದು] ತೋರಿಸಿಕೊಡುತ್ತದೆ ಎಂದು ಹೇಳಲಾಗಿ ಅವನು -


ಕೂಡಲೆ ಕೋಳಿ ಕೂಗಿತು. ಆಗ ಪೇತ್ರನು - ಕೋಳಿ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನ ವಿಷಯವಾಗಿ ಅವನನ್ನು ಅರಿಯೆನೆಂಬದಾಗಿ ಹೇಳುವಿ ಎಂದು ಯೇಸು ಹೇಳಿದ ಮಾತನ್ನು ನೆನಸಿ ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು