Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:14 - ಕನ್ನಡ ಸತ್ಯವೇದವು J.V. (BSI)

14 ಆತನು ಅವನಿಗೆ ಒಂದು ಮಾತಿಗಾದರೂ ಉತ್ತರಕೊಡಲಿಲ್ಲ. ಅದನ್ನು ನೋಡಿ ದೇಶಾಧಿಪತಿಯು ಬಹಳ ಆಶ್ಚರ್ಯಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆತನು ಅವನ ಯಾವ ಮಾತುಗಳಿಗೂ ಉತ್ತರಕೊಡಲಿಲ್ಲ. ಅದನ್ನು ನೋಡಿ ದೇಶಾಧಿಪತಿಯು ತುಂಬಾ ಆಶ್ಚರ್ಯಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಯೇಸು ಯಾವುದಕ್ಕೂ ಉತ್ತರಕೊಡಲಿಲ್ಲ. ಇದರಿಂದ ರಾಜ್ಯಪಾಲನಿಗೆ ಅತ್ಯಾಶ್ಚರ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ಯೇಸು ಪಿಲಾತನಿಗೆ ಉತ್ತರ ಕೊಡಲೇ ಇಲ್ಲ. ಪಿಲಾತನಿಗೆ ಬಹಳ ಆಶ್ಚರ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಒಂದು ಮಾತಿಗಾದರೂ ಯೇಸು ಅವನಿಗೆ ಉತ್ತರ ಕೊಡದೆ ಇದ್ದುದರಿಂದ ರಾಜ್ಯಪಾಲನು ಅತ್ಯಾಶ್ಚರ್ಯಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖರೆ ತೆನಿ ಎಕ್ ಸೈತ್ ಶಬ್ದ್ ಬೊಲುಕ್ನಾ. ಹೆ ಬಗಟಲ್ಲೊ ಪಿಲಾತ್ ಮನ್ತಲೊ ಅದಿಕಾರಿ ಅಜಾಪ್ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:14
10 ತಿಳಿವುಗಳ ಹೋಲಿಕೆ  

ಆಹಾ, ನಾನೂ ನನಗೆ ಯೆಹೋವನು ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರನಾದ ಯೆಹೋವನಿಂದುಂಟಾದ ಗುರುತುಗಳಾಗಿಯೂ ಅದ್ಭುತಗಳಾಗಿಯೂ ಇಸ್ರಾಯೇಲ್ಯರ ಮಧ್ಯದಲ್ಲಿದ್ದೇವೆ.


ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣವಿಧಿ ಹೊಂದಿದವರನ್ನೋ ಎಂಬಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ; ನಾವು ದೇವದೂತರಿಗೂ ಮನುಷ್ಯರಿಗೂ ಅಂತೂ ಜಗತ್ತಿಗೆಲ್ಲಾ ನೋಟವಾದೆವು.


ಮಹಾಯಾಜಕನಾದ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಹಕಾರಿಗಳೂ ಕೇಳಿರಿ; ಇಗೋ, ಮೊಳಿಕೆ ಎಂಬ ನನ್ನ ಸೇವಕನನ್ನು ಹೊರಡಿಸುತ್ತೇನೆಂಬದಕ್ಕೆ ಇವರೇ ಮುಂಗುರುತು.


ಅನೇಕರು ನನ್ನ ದುಃಸ್ಥಿತಿಗೆ ಬೆರಗಾಗುತ್ತಾರೆ; ಆದರೂ ನೀನು ನನಗೆ ಬಲವಾದ ಆಶ್ರಯಸ್ಥಾನವಾಗಿರುತ್ತೀ.


ಆಗ ಮಹಾಯಾಜಕನು - ನಿನಗೆ ಜೀವಸ್ವರೂಪನಾದ ದೇವರ ಆಣೆಯನ್ನು ಇಡುತ್ತೇನೆ; ನೀನು ದೇವಕುಮಾರನಾದ ಕ್ರಿಸ್ತನು ಹೌದೋ ಅಲ್ಲವೋ ಎಂಬದನ್ನು ನಮಗೆ ಹೇಳಬೇಕು ಎಂದು ಅನ್ನಲಾಗಿ ಯೇಸು -


ಮತ್ತು ಮಹಾಯಾಜಕರೂ ಹಿರಿಯರೂ ಆತನ ಮೇಲೆ ದೂರು ಹೇಳುತ್ತಿರುವಾಗ ಆತನು ಏನೂ ಉತ್ತರಕೊಡಲಿಲ್ಲ.


ಆಗ ಪಿಲಾತನು ಆತನನ್ನು - ಇವರು ನಿನ್ನ ಮೇಲೆ ಎಷ್ಟು ಸಾಕ್ಷಿ ಹೇಳುತ್ತಾರೆ, ನೀನು ಕೇಳುವದಿಲ್ಲವೋ? ಎಂದು ಕೇಳಿದನು.


ಆದರೆ ಯೇಸು ಇನ್ನೇನೂ ಉತ್ತರಕೊಡಲಿಲ್ಲ. ಅದನ್ನು ನೋಡಿ ಪಿಲಾತನು ಆಶ್ಚರ್ಯಪಟ್ಟನು.


ಆದರೆ ಅವನು ಅನೇಕ ಮಾತುಗಳಿಂದ ಆತನನ್ನು ಪ್ರಶ್ನೆ ಮಾಡಿದಾಗ್ಯೂ ಆತನು ಅವನಿಗೆ ಏನೂ ಉತ್ತರ ಕೊಡಲಿಲ್ಲ.


ತಿರಿಗಿ ಅರಮನೆಯೊಳಕ್ಕೆ ಹೋಗಿ - ನೀನು ಎಲ್ಲಿಂದ ಬಂದವನು ಎಂದು ಯೇಸುವನ್ನು ಕೇಳಿದನು. ಆದರೆ ಯೇಸು ಅವನಿಗೆ ಉತ್ತರಕೊಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು