Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:22 - ಕನ್ನಡ ಸತ್ಯವೇದವು J.V. (BSI)

22 ಪಿಲಾತನು ಅವರನ್ನು - ಹಾಗಾದರೆ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ ಎಂದು ಕೇಳಲು ಎಲ್ಲರೂ - ಅವನನ್ನು ಶಿಲುಬೆಗೆ ಹಾಕಿಸು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಪಿಲಾತನು ಅವರನ್ನು, “ಹಾಗಾದರೆ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಲು ಎಲ್ಲರೂ, “ಅವನನ್ನು ಶಿಲುಬೆಗೆ ಹಾಕಿಸು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ಹಾಗಾದರೆ, ‘ಕ್ರಿಸ್ತ’ ಎಂದು ಕರೆಯಲಾಗುವ ಯೇಸುವನ್ನು ಏನುಮಾಡಲಿ?” ಎಂದು ಪಿಲಾತನು ಮರುಪ್ರಶ್ನೆ ಹಾಕಿದನು. ಅವರೆಲ್ಲರು, “ಅವನನ್ನು ಶಿಲುಬೆಗೇರಿಸಿ,” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಪಿಲಾತನು, “ಹಾಗಾದರೆ ಕ್ರಿಸ್ತನೆಂದು ಕರೆಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಿದನು. ಜನರೆಲ್ಲರೂ, “ಅವನನ್ನು ಶಿಲುಬೆಗೇರಿಸು!” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಪಿಲಾತನು ಅವರಿಗೆ, “ಹಾಗಾದರೆ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಲು ಅವರೆಲ್ಲರೂ, “ಆತನನ್ನು ಶಿಲುಬೆಗೆ ಹಾಕಿಸು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತನ್ನಾ ಪಿಲಾತಾನ್,“ತಸೆ ಜಾಲ್ಯಾರ್ ಕ್ರಿಸ್ತ್ ಮನ್ತಲ್ಯಾ ಹ್ಯಾ ಜೆಜುಕ್ ಮಿಯಾ ಕಾಯ್ ಕರುಚೆ?” ಮನುನ್ ತೆಂಕಾ ಇಚಾರ್‍ಲ್ಯಾನ್. ತನ್ನಾ ತೆನಿ ಸಗ್ಳ್ಯಾನಿ,“ತೆಕಾ ಕುರ್ಸಾರ್ ಮಾರ್!” ಮನುನ್ ಜಬಾಬ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:22
16 ತಿಳಿವುಗಳ ಹೋಲಿಕೆ  

ಆದದರಿಂದ ಸಹೋದರರೇ, ಆತನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗುತ್ತದೆಂದು ನಿಮಗೆ ತಿಳಿದಿರಲಿ.


ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ ಅನ್ಯಜನಾಂಗಕ್ಕೆ ಅಸಹ್ಯನೂ ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾವಿುಯೂ ಆದ ಯೆಹೋವನು ಹೀಗೆ ಹೇಳುತ್ತಾನೆ - ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾವಿುಯು ನಿನ್ನನ್ನು ಪರಿಗ್ರಹಿಸಿರುವದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.


ಆಗ ಮಹಾಯಾಜಕರೂ ಹಿರೀಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನ ಮೇಲೆ ಸಾಕ್ಷಿಯನ್ನು ಹುಡುಕಿದರು; ಆದರೆ ಏನೂ ಸಿಕ್ಕಲಿಲ್ಲ.


ಹೀಗಿರಲಾಗಿ ಅವರು ಕೂಡಿಬಂದ ಸಮಯದಲ್ಲಿ ಪಿಲಾತನು ಹೊಟ್ಟೇಕಿಚ್ಚಿನಿಂದ ಆತನನ್ನು ಒಪ್ಪಿಸಿಕೊಟ್ಟಿದ್ದರೆಂದು ತಿಳಿದು - ನಿಮಗೆ ಯಾರನ್ನು ಬಿಟ್ಟುಕೊಡಬೇಕನ್ನುತ್ತೀರಿ? ಬರಬ್ಬನನ್ನೋ? ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನೋ ಎಂದು ಅವರನ್ನು ಕೇಳಿದನು.


ಯಾಕೋಬನು ಮರಿಯಳ ಗಂಡನಾದ ಯೋಸೇಫನನ್ನು ಪಡೆದನು. ಈ ಮರಿಯಳಲ್ಲಿ ಕ್ರಿಸ್ತನೆಂಬ ಯೇಸು ಹುಟ್ಟಿದನು.


ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಅಡಗಿಸಿಬಿಟ್ಟೆನು; ಅನಂತರ ನನಗೆ ಕುರಿಗಳ ವಿಷಯವಾಗಿ ತಾಳ್ಮೆತಪ್ಪಿತು; ಅವೂ ನನಗೆ ಬೇಸರಗೊಂಡವು.


ನನ್ನ ಗುಡಾರದ ಆಳುಗಳು - ನಮ್ಮ ಯಜಮಾನನಿಕ್ಕಿದ ಮಾಂಸದಿಂದ ತೃಪ್ತರಾಗದವರು ಎಲ್ಲಿಯೂ ಸಿಕ್ಕಲಾರರು ಎಂದು ಹೇಳಿಕೊಳ್ಳುತ್ತಿರಲಿಲ್ಲವೋ?


ಅದಕ್ಕೆ ದೇಶಾಧಿಪತಿಯು ಅವರನ್ನು - ಈ ಇಬ್ಬರಲ್ಲಿ ಯಾರನ್ನು ನಿಮಗೆ ಬಿಟ್ಟುಕೊಡಬೇಕನ್ನುತ್ತೀರಿ ಎಂದು ಕೇಳಲು - ಬರಬ್ಬನನ್ನು ಅಂದರು.


ಅದಕ್ಕವನು - ಯಾಕೆ? ಕೆಟ್ಟದ್ದೇನು ಮಾಡಿದನು? ಅಂದನು. ಆದರೆ ಅವರು - ಅವನನ್ನು ಶಿಲುಬೆಗೆ ಹಾಕಿಸು ಎಂದು ಬಹಳವಾಗಿ ಆರ್ಭಟಿಸಿದರು.


ಆ ಹೆಂಗಸು ಆತನಿಗೆ - ಮೆಸ್ಸೀಯನು ಅಂದರೆ ಕ್ರಿಸ್ತನು ಬರುತ್ತಾನೆಂದು ಬಲ್ಲೆನು; ಆತನು ಬಂದ ಮೇಲೆ ನಮಗೆ ಎಲ್ಲಾ ತಿಳಿಸುವನು ಎಂದು ಹೇಳಲು


ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು