Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:3 - ಕನ್ನಡ ಸತ್ಯವೇದವು J.V. (BSI)

3 ಆಗ ಆತನನ್ನು ಹಿಡುಕೊಟ್ಟ ಯೂದನು ಆತನಿಗೆ ಮರಣದಂಡನೆಯ ತೀರ್ಪಾಯಿತೆಂದು ನೋಡಿ ಪಶ್ಚಾತ್ತಾಪಪಟ್ಟು ಆ ಮೂವತ್ತು ರೂಪಾಯಿಗಳನ್ನು ಮಹಾಯಾಜಕರಿಗೂ ಹಿರಿಯರಿಗೂ ತಿರಿಗಿ ತಂದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಆತನನ್ನು ದ್ರೋಹದಿಂದ ಹಿಡಿದುಕೊಟ್ಟಿದ್ದ ಯೂದನು ಯೇಸುವಿಗೆ ಮರಣದಂಡನೆಯ ತೀರ್ಪು ಆಗಿರುವುದನ್ನು ನೋಡಿ, ಪಶ್ಚಾತ್ತಾಪಪಟ್ಟು, ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಮುಖ್ಯಯಾಜಕರಿಗೂ ಹಿರಿಯರಿಗೂ ಹಿಂದಿರುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯೇಸುಸ್ವಾಮಿ ದಂಡನೆಗೆ ಗುರಿಯಾದರೆಂಬುದನ್ನು ಕಂಡು, ಗುರುದ್ರೋಹಿ ಯೂದನು ಪರಿತಾಪಗೊಂಡನು. ಆ ಮೂವತ್ತು ಬೆಳ್ಳಿನಾಣ್ಯಗಳನ್ನು ಮುಖ್ಯಯಾಜಕರ ಮತ್ತು ಪ್ರಮುಖರ ಬಳಿಗೆ ಮರಳಿ ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೇಸುವನ್ನು ಆತನ ವೈರಿಗಳಿಗೆ ಒಪ್ಪಿಸಿಕೊಟ್ಟ ಯೂದನು, ಯೇಸುವಿಗೆ ಸಂಭವಿಸಿದ್ದನ್ನು ಕಂಡು, ತಾನು ಮಾಡಿದ ದ್ರೋಹಕ್ಕಾಗಿ ಬಹಳ ಪಶ್ಚಾತ್ತಾಪಪಟ್ಟನು. ಅವನು ಬೆಳ್ಳಿಯ ನಾಣ್ಯಗಳನ್ನು ಮಹಾಯಾಜಕರ ಮತ್ತು ಹಿರಿಯನಾಯಕರ ಬಳಿಗೆ ತೆಗೆದುಕೊಂಡು ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೇಸುವಿಗೆ ದ್ರೋಹಮಾಡಿದ ಯೂದನು ಗುರುವಿಗೆ ಮರಣ ದಂಡನೆಯ ತೀರ್ಪಾದದ್ದನ್ನು ಕಂಡು ವಿಷಾದಿಸಿ, ಆ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಮುಖ್ಯಯಾಜಕರ ಮತ್ತು ಹಿರಿಯರ ಬಳಿಗೆ ಮರಳಿ ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಜೆಜುಕ್ ವಾಯ್ಟ್ ಕರ್‍ತಲೆ ತೆಕಾ ಘಾತ್ ಕರುನ್ ಧರುನ್ ದಿಲ್ಲ್ಯಾ ಜುದಾಸಾನ್ ಬಗಟ್ಲ್ಯಾನ್, ತನ್ನಾ ತೆಕಾ ಲೈ ವಾಯ್ಟ್ ದಿಸ್ಲೆ ಅನಿ ತೊ ಬದಲ್ಲೊ, ತೆ ತಿಸ್ ಚಾಂದಿಚೆ ಪೈಸೆ ಘೆವ್ನ್ ಮುಖ್ಯ ಯಾಜಕಾ ಅನಿ ಜಾನ್ತ್ಯಾನಿಕ್ಡೆ ಯೆಲೊ. ಅನಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:3
15 ತಿಳಿವುಗಳ ಹೋಲಿಕೆ  

ದೇವರ ಚಿತ್ತಾನುಸಾರವಾಗಿರುವ ದುಃಖವು ಮಾನಸಾಂತರವನ್ನುಂಟುಮಾಡಿ ರಕ್ಷಣೆಗೆ ಕಾರಣವಾಗಿದೆ; ಆ ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಆಸ್ಪದವಿಲ್ಲ; ಆದರೆ ಲೋಕದವರಿಗಿರುವಂಥ ದುಃಖವು ಮರಣವನ್ನುಂಟುಮಾಡುತ್ತದೆ.


ಹೀಗಿರಲಾಗಿ ಯೂದನು ಸಿಪಾಯಿಗಳ ಪಟಾಲಮನ್ನೂ ಮಹಾಯಾಜಕರು ಮತ್ತು ಫರಿಸಾಯರು ಕೊಟ್ಟ ಓಲೇಕಾರರನ್ನೂ ಕರಕೊಂಡು ದೀವಿಟಿಗಳನ್ನೂ ಪಂಜುಗಳನ್ನೂ ಆಯುಧಗಳನ್ನೂ ಹಿಡಿಸಿಕೊಂಡು ಅಲ್ಲಿಗೆ ಬಂದನು.


ಅವನು ಆ ತುತ್ತನ್ನು ತೆಗೆದುಕೊಂಡ ಕೂಡಲೆ ಸೈತಾನನು ಅವನೊಳಗೆ ಹೊಕ್ಕನು. ಆಗ ಯೇಸು ಅವನಿಗೆ - ನೀನು ಮಾಡುವದನ್ನು ಬೇಗನೆ ಮಾಡಿಬಿಡು ಎಂದು ಹೇಳಿದನು.


ಅವರು ಊಟಕ್ಕೆ ಕೂತುಕೊಂಡಿದ್ದರು; ಅಷ್ಟರೊಳಗೆ ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಮನಸ್ಸಿನಲ್ಲಿ ಯೇಸುವನ್ನು ಹಿಡುಕೊಡಬೇಕೆಂಬ ಆಲೋಚನೆಯನ್ನು ಹುಟ್ಟಿಸಿದ್ದನು.


ದುಷ್ಟರ ಉತ್ಸಾಹಧ್ವನಿಯು ಅಲ್ಪಕಾಲದ್ದು, ಭ್ರಷ್ಟನ ಉಲ್ಲಾಸವು ಕ್ಷಣಿಕವಾದದ್ದು ಎಂದು ನಿನಗೆ ಗೊತ್ತಿಲ್ಲವೋ?


ತಿವಿಸಿಕೊಂಡು ಸತ್ತವನು ದಾಸನು ಅಥವಾ ದಾಸಿಯು ಆಗಿದ್ದ ಪಕ್ಷಕ್ಕೆ ಅವರ ಯಜಮಾನನಿಗೆ ಮೂವತ್ತು ರೂಪಾಯಿ ಈಡುಕೊಡಿಸಬೇಕು, ಮತ್ತು ಆ ಎತ್ತನ್ನು ಕಲ್ಲೆಸೆದು ಕೊಲ್ಲಿಸಬೇಕು.


ಅವರು ಇವನ ಯೋಗ್ಯತೆ ಇಷ್ಟೇ ಎಂದುಕೊಂಡು ನನಗೆ ಕೊಟ್ಟ ಆ ಭಾರೀ ಸಂಬಳವನ್ನು ಯೆಹೋವನು ನೋಡಿ ಅದನ್ನು ಡಬ್ಬಿಗೆ ಹಾಕು ಎಂದು ಅಪ್ಪಣೆಮಾಡಿದಾಗ ನಾನು ಆ ಮೂವತ್ತು ತೊಲ ಬೆಳ್ಳಿಯನ್ನು ತೆಗೆದು ಯೆಹೋವನ ಆಲಯದ ಡಬ್ಬಿಗೆ ಹಾಕಿದೆನು.


(ಈ ಮನುಷ್ಯನು ತನ್ನ ದ್ರೋಹದಿಂದ ಸಂಪಾದಿಸಿದ ಹಣಕ್ಕೆ ಒಂದು ಹೊಲವನ್ನು ಕೊಂಡುಕೊಂಡನು; ಮತ್ತು ತಲೆಕೆಳಗಾಗಿ ಬಿದ್ದು ಅವನ ಹೊಟ್ಟೆ ಒಡೆದು ಕರುಳುಗಳೆಲ್ಲಾ ಹೊರಗೆ ಸುರಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು