Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:40 - ಕನ್ನಡ ಸತ್ಯವೇದವು J.V. (BSI)

40 ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಕಟ್ಟುವವನೇ, ನಿನ್ನನ್ನು ರಕ್ಷಿಸಿಕೋ; ದೇವರಮಗನು ಆಗಿದ್ದರೆ ಶಿಲುಬೆಯಿಂದ ಇಳಿದು ಬಾ ಎಂದು ಆತನನ್ನು ಹಂಗಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 “ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಕಟ್ಟುವವನೇ, ನಿನ್ನನ್ನು ರಕ್ಷಿಸಿಕೊ; ನೀನು ದೇವರ ಮಗನೇ ಆಗಿದ್ದರೆ ಶಿಲುಬೆಯಿಂದ ಇಳಿದು ಬಾ” ಎಂದು ಆತನನ್ನು ಹಂಗಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 “ಮಹಾದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಅದನ್ನು ಮತ್ತೆ ಕಟ್ಟಬಲ್ಲವನೇ, ಈಗ ನಿನ್ನನ್ನು ನೀನೇ ರಕ್ಷಿಸಿಕೋ; ನೀನು ದೇವರ ಪುತ್ರನಾದರೆ ಶಿಲುಬೆಯಿಂದ ಇಳಿದು ಬಾ,” ಎಂದು ಮೂದಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 “ನೀನು ದೇವಾಲಯವನ್ನು ಕೆಡವಿ, ಅದನ್ನು ಮತ್ತೆ ಮೂರು ದಿನಗಳಲ್ಲಿ ನಿರ್ಮಿಸುತ್ತೇನೆಂದು ಹೇಳುತ್ತಿದ್ದೆ. ಆದರೆ ಈಗ ನಿನ್ನನ್ನು ನೀನೇ ರಕ್ಷಿಸಿಕೊ! ನೀನು ನಿಜವಾಗಿಯೂ ದೇವರ ಮಗನಾಗಿದ್ದರೆ, ಶಿಲುಬೆಯಿಂದ ಕೆಳಗಿಳಿದು ಬಾ!” ಎಂದು ಹಾಸ್ಯಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 “ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ, ನೀನು ದೇವಪುತ್ರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 “ತಿಯಾ ದೆವಾಚಿ ಗುಡಿ ಮೊಡುನ್ ತಿನ್ ದಿಸಾತ್ನಿ ಮಟ್ಲ್ಯಾರ್ ಭಾಂದ್‍ನಾರ್ ಹೊತ್ತೆ ನ್ಹಯ್! ತಿಯಾ ದೆವಾಚೊ ಲೆಕ್ ರ್‍ಹಾಲ್ಯಾರ್ ತುಕಾಚ್ ಹುರ್‍ವುನ್ ಘೆ! ಕುರ್ಸಾ ವೈನಾ ಉತ್ರುನ್ ಯೆ!” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:40
13 ತಿಳಿವುಗಳ ಹೋಲಿಕೆ  

ನಾನು ದೇವರ ಆಲಯವನ್ನು ಕೆಡವಿಬಿಟ್ಟು ಮೂರು ದಿನಗಳಲ್ಲಿ ಕಟ್ಟಬಲ್ಲೆನೆಂದು ಇವನು ಹೇಳಿದನು ಅಂದರು;


ನೀನು ದೇವರ ಮಗನಾಗಿದ್ದರೆ ಕೆಳಕ್ಕೆ ದುಮುಕು; ಆತನು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು; ನಿನ್ನ ಕಾಲು ಕಲ್ಲಿಗೆ ತಗಲೀತೆಂದು ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು ಎಂಬದಾಗಿ ಬರೆದದೆಯಲ್ಲಾ ಎಂದು ಹೇಳಿದನು.


ಆಗ ಆ ಶೋಧಕನು ಆತನ ಬಳಿಗೆ ಬಂದು - ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಎಂದು ಹೇಳಲು ಆತನು -


ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಪೀಡಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.


ಅಬ್ರಹಾಮನು ಅವನಿಗೆ - ಅವರು ಮೋಶೆಯ ಮಾತನ್ನೂ ಪ್ರವಾದಿಗಳ ಮಾತನ್ನೂ ಕೇಳದಿದ್ದರೆ ಸತ್ತುಹೋಗಿದ್ದವನೊಬ್ಬನು ಜೀವಿತನಾಗಿ ಎದ್ದರೂ ಅವರು ಒಪ್ಪುವದಿಲ್ಲ ಎಂದು ಹೇಳಿದನು.


ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು - ನಿಜವಾಗಿ ಈತನು ದೇವಕುಮಾರನಾಗಿದ್ದನು ಅಂದರು.


ಅವನು ಮತ್ತೊಬ್ಬರನ್ನು ರಕ್ಷಿಸಿದನು, ತನ್ನನ್ನು ರಕ್ಷಿಸಿಕೊಳ್ಳಲಾರನು. ಅವನು ಇಸ್ರಾಯೇಲಿನ ಅರಸನಲ್ಲವೇ. ಈಗ ಶಿಲುಬೆಯಿಂದ ಇಳಿದು ಬರಲಿ, ಇಳಿದು ಬಂದರೆ ಅವನಲ್ಲಿ ನಂಬಿಕೆಯಿಟ್ಟೇವು.


ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಅಪೇಕ್ಷಿಸುತ್ತದೆ; ಆದರೆ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವದೂ ಇದಕ್ಕೆ ಸಿಕ್ಕುವದಿಲ್ಲ ಎಂದು ಉತ್ತರಕೊಟ್ಟು ಅವರನ್ನು ಬಿಟ್ಟುಹೋದನು.


ಅದೇ ಮೇರೆಗೆ ಮಹಾಯಾಜಕರೂ ಶಾಸ್ತ್ರಿಗಳೂ ಹಿರಿಯರೂ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು