Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:42 - ಕನ್ನಡ ಸತ್ಯವೇದವು J.V. (BSI)

42 ಅವನು ಮತ್ತೊಬ್ಬರನ್ನು ರಕ್ಷಿಸಿದನು, ತನ್ನನ್ನು ರಕ್ಷಿಸಿಕೊಳ್ಳಲಾರನು. ಅವನು ಇಸ್ರಾಯೇಲಿನ ಅರಸನಲ್ಲವೇ. ಈಗ ಶಿಲುಬೆಯಿಂದ ಇಳಿದು ಬರಲಿ, ಇಳಿದು ಬಂದರೆ ಅವನಲ್ಲಿ ನಂಬಿಕೆಯಿಟ್ಟೇವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಅವನು ಇಸ್ರಾಯೇಲಿನ ಅರಸನಲ್ಲವೇ. ಈಗ ಶಿಲುಬೆಯಿಂದ ಇಳಿದು ಬರಲಿ, ಇಳಿದು ಬಂದರೆ ಅವನಲ್ಲಿ ನಂಬಿಕೆಯಿಡುತ್ತೇವೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 “ಇವನು ಇತರರನ್ನು ರಕ್ಷಿಸಿದ; ಆದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲು ಇವನಿಂದಾಗದು; ಇಸ್ರಯೇಲಿನ ಅರಸನಂತೆ! ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ಇವನನ್ನು ನಂಬುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 “ಇವನು ಬೇರೆಯವರನ್ನು ರಕ್ಷಿಸಿದನು. ಆದರೆ ತನ್ನನ್ನು ರಕ್ಷಿಸಿಕೊಳ್ಳಲಾರ! ಇಸ್ರೇಲರ ರಾಜ ಎಂದು ಜನ ಹೇಳುತ್ತಾರೆ. ಇವನು ರಾಜನಾಗಿದ್ದರೆ ಶಿಲುಬೆಯಿಂದ ಕೆಳಗಿಳಿದು ಬರಲಿ. ಆಗ ನಾವು ಇವನನ್ನು ನಂಬುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 “ಈತನು ಬೇರೆಯವರನ್ನು ರಕ್ಷಿಸಿದನು; ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು! ಈತನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗೆ ಇಳಿದು ಬರಲಿ. ಆಗ ನಾವು ಈತನನ್ನು ನಂಬುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 “ತೆನಿ ದುಸ್ರ್ಯಾಕ್ನಿ ಹುರ್‍ವುನ್ ಘೆಟ್ಲ್ಯಾನ್, ಖರೆ ಅತ್ತಾ ಅಪ್ನಾಕುಚ್ ಹುರ್‍ವುನ್ ಘೆವ್ಕ್ ತೆಕಾ ಹೊಯ್ನಾ ಹೊಲಾ! ಇಸ್ರಾಯೆಲಾಚೊ ರಾಜಾ ನ್ಹಯ್ ಹ್ಯೊ? ತೊ ಕುರ್ಸಾ ವೈನಾ ಉತ್ರುನ್ ಯೆಲ್ಯಾರ್, ಅಮಿ ತೆಚ್ಯಾ ವರ್‍ತಿ ವಿಶ್ವಾಸ್ ಕರ್‍ತಾವ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:42
14 ತಿಳಿವುಗಳ ಹೋಲಿಕೆ  

ಅದಕ್ಕೆ ನತಾನಯೇಲನು - ಗುರುವೇ, ನೀನು ದೇವಕುಮಾರನು ಸರಿ; ನೀನೇ ಇಸ್ರಾಯೇಲಿನ ಅರಸನು ಅಂದನು.


ಇದಲ್ಲದೆ ಆತನ ಮೇಲೆ ಹೊರಿಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು; ಅದೇನಂದರೆ - ಇವನು ಯೇಸು, ಯೆಹೂದ್ಯರ ಅರಸನು ಎಂಬದೇ.


ಇವರು ಯೇಸುವಿನ ಸಂಗಡ ಇದ್ದವರೆಂದು ಗುರುತು ಹಿಡಿದರು; ಮತ್ತು ಕ್ಷೇಮಹೊಂದಿದ ಆ ಮನುಷ್ಯನು ಅವರ ಕೂಡ ನಿಂತಿರುವದನ್ನು ನೋಡಿ ಪ್ರತಿಯಾಗಿ ಏನೂ ಮಾತಾಡಲಾರದೆ ಇದ್ದರು.


ಯಾವನಾದರೂ ನನ್ನ ಮಾತುಗಳನ್ನು ಕೇಳಿದರೂ ಕೈಕೊಂಡು ನಡೆಯದೆ ಹೋದರೆ ನಾನೇ ಅವನಿಗೆ ತೀರ್ಪುಮಾಡುವದಿಲ್ಲ; ಲೋಕಕ್ಕೆ ತೀರ್ಪುಮಾಡುವದಕ್ಕಾಗಿ ನಾನು ಬಂದಿಲ್ಲ; ಲೋಕವನ್ನು ರಕ್ಷಿಸುವದಕ್ಕಾಗಿ ಬಂದಿದ್ದೇನೆ.


ಆತನನ್ನು ಎದುರುಗೊಳ್ಳುವದಕ್ಕೆ ಹೊರಗೆ ಬಂದು - ಜಯ, ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; ಇಸ್ರಾಯೇಲಿನ ಅರಸನಿಗೆ ಆಶೀರ್ವಾದ ಎಂದು ಆರ್ಭಟಿಸಿದರು.


ಆದಕಾರಣ ಅವರು ಕುರುಡನಾಗಿದ್ದ ಆ ಮನುಷ್ಯನನ್ನು ಎರಡನೆಯ ಸಾರಿ ಕರೆದು - ನೀನು ದೇವರಿಗೆ ಮಾನಬರುವಂತೆ ಹೇಳು; ಆ ಮನುಷ್ಯನು ಭಕ್ತಿಹೀನನೆಂದು ನಾವು ಬಲ್ಲೆವು ಎಂದು ಹೇಳಲು


ಕರ್ತನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದ, ಪರಲೋಕದಲ್ಲಿ ಮಂಗಳ, ಮೇಲಣಲೋಕಗಳಲ್ಲಿ ಮಹಿಮೆ ಎಂದು ಮಹಾ ಶಬ್ದದಿಂದ ದೇವರನ್ನು ಕೊಂಡಾಡುವದಕ್ಕೆ ತೊಡಗಿದರು.


ಯೆಹೂದ್ಯರ ಅರಸನಾಗಿ ಹುಟ್ಟಿದವನು ಎಲ್ಲಿದ್ದಾನೆ? ಆತನನ್ನು ಸೂಚಿಸುವ ನಕ್ಷತ್ರವನ್ನು ನಾವು ಮೂಡಣದೇಶದಲ್ಲಿ ಕಂಡು ಆತನಿಗೆ ಅಡ್ಡಬೀಳುವದಕ್ಕೆ ಬಂದೆವು ಅಂದರು.


ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಕಟ್ಟುವವನೇ, ನಿನ್ನನ್ನು ರಕ್ಷಿಸಿಕೋ; ದೇವರಮಗನು ಆಗಿದ್ದರೆ ಶಿಲುಬೆಯಿಂದ ಇಳಿದು ಬಾ ಎಂದು ಆತನನ್ನು ಹಂಗಿಸುತ್ತಿದ್ದರು.


ಅದೇ ಮೇರೆಗೆ ಮಹಾಯಾಜಕರೂ ಶಾಸ್ತ್ರಿಗಳೂ ಹಿರಿಯರೂ -


ಅದೇ ಮೇರೆಗೆ ಮಹಾಯಾಜಕರೂ ಶಾಸ್ತ್ರಿಗಳೂ - ಅವನು ಮತ್ತೊಬ್ಬರನ್ನು ರಕ್ಷಿಸಿದನು; ತನ್ನನ್ನು ರಕ್ಷಿಸಿಕೊಳ್ಳಲಾರನು.


ಇಸ್ರಾಯೇಲ್ಯರ ಅರಸನಾದ ಈ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಇಳಿದುಬಂದರೆ ನಾವು ನೋಡಿ ನಂಬೇವು ಎಂದು ತಮ್ಮತಮ್ಮೊಳಗೆ ಹಾಸ್ಯದಿಂದ ಮಾತಾಡುತ್ತಿದ್ದರು. ಆತನ ಸಂಗಡ ಶಿಲುಬೆಗೆ ಹಾಕಲ್ಪಟ್ಟವರು ಸಹ ಆತನನ್ನು ನಿಂದಿಸುತ್ತಿದ್ದರು.


ಜನರು ನೋಡುತ್ತಾ ನಿಂತರು. ಇದಲ್ಲದೆ ಅಧಿಕಾರಿಗಳು ಹಾಸ್ಯಮಾಡಿ - ಅವನು ಮತ್ತೊಬ್ಬರನ್ನು ರಕ್ಷಿಸಿದನು; ಅವನು ದೇವರಾರಿಸಿಕೊಂಡ ಕ್ರಿಸ್ತನು ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ ಅಂದರು.


ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ರಕ್ಷಿಸಿಕೋ ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು