Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:6 - ಕನ್ನಡ ಸತ್ಯವೇದವು J.V. (BSI)

6 ಮಹಾಯಾಜಕರು ಆ ಹಣವನ್ನು ತೆಗೆದುಕೊಂಡು ಅದು ಜೀವಹತ್ಯಕ್ಕೆ ಕೊಟ್ಟ ಕ್ರಯವಾದ್ದರಿಂದ ಅದನ್ನು ಕಾಣಿಕೇಪೆಟ್ಟಿಗೆಯಲ್ಲಿ ಹಾಕಬಾರದು ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮುಖ್ಯಯಾಜಕರು ಆ ಹಣವನ್ನು ತೆಗೆದುಕೊಂಡು “ಇದು ಜೀವಹತ್ಯೆಗೆ ಕೊಟ್ಟ ಕ್ರಯವಾದುದರಿಂದ ಇದನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಬಾರದು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮುಖ್ಯಯಾಜಕರು ಆ ಹಣವನ್ನು ತೆಗೆದುಕೊಂಡು, “ಇದು ರಕ್ತದ ಕ್ರಯ. ಇದನ್ನು ಕಾಣಿಕೆ ಕೋಶದಲ್ಲಿ ಹಾಕುವುದು ಸರಿಯಲ್ಲ,” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಮಹಾಯಾಜಕರು ದೇವಾಲಯದಲ್ಲಿದ್ದ ಬೆಳ್ಳಿಯ ನಾಣ್ಯಗಳನ್ನು ಆಯ್ದುಕೊಂಡು, “ಈ ಹಣವನ್ನು ಒಬ್ಬ ಮನುಷ್ಯನ ಹತ್ಯೆಗಾಗಿ ಕೊಟ್ಟಿದ್ದ ಕಾರಣ ಇದನ್ನು ದೇವಾಲಯದ ಹಣದೊಂದಿಗೆ ಸೇರಿಸುವುದು ನಮ್ಮ ಧರ್ಮಶಾಸ್ತ್ರಕ್ಕೆ ವಿರುದ್ಧ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಮುಖ್ಯಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು, “ಇವುಗಳನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕುವುದು ನ್ಯಾಯವಲ್ಲ. ಅದು ರಕ್ತದ ಕ್ರಯವಾಗಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಮುಖ್ಯ ಯಾಜಕಾನಿ ಹೆ ಪೈಸೆ ಯೆಚುನ್ ಘೆಟ್ಲ್ಯಾನಿ ಅನಿ, “ಎಕಾ ಮಾನ್ಸಾಚೊ ಜಿವ್ ಕಾಡುಕ್ ಮನುನ್ ದಿಲ್ಲೆ ಪೈಸೆ ಹೆ ಅನಿ ಹೆ ಪೈಸೆ ಕಾನಿಕಿಚ್ಯಾ ಡಬ್ಬ್ಯಾತ್ ಥವ್ತಲೆ ಅಮ್ಚ್ಯಾ ಖಾಯ್ದ್ಯಾ ಪರ್‍ಕಾರ್ ಚುಕ್ ಹೊತಾ.”ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:6
8 ತಿಳಿವುಗಳ ಹೋಲಿಕೆ  

ಸೂಳೆತನದಿಂದಾಗಲಿ ಗುದಮೈಥುನದಿಂದಾಗಲಿ ಸಂಪಾದಿಸಿದ ಹಣವನ್ನು ಹರಕೆಯಾಗಿ ನಿಮ್ಮ ದೇವರಾದ ಯೆಹೋವನ ಮಂದಿರದೊಳಗೆ ತರಲೇಬಾರದು; ಈ ಎರಡೂ ಆತನಿಗೆ ಅಸಹ್ಯ.


ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ಅರಮನೆಗೆ ಕರಕೊಂಡು ಹೋದರು. ಆಗ ಮುಂಜಾನೆ ಆಗಿತ್ತು. ಅವರು ತಮಗೆ ಮೈಲಿಗೆ ತಟ್ಟಿ ಪಸ್ಕದ ಊಟವನ್ನು ಮಾಡುವದಕ್ಕೆ ಅಡ್ಡಿಯಾದೀತೆಂದು ಅರಮನೆಯೊಳಕ್ಕೆ ಹೋಗಲಿಲ್ಲ.


ದಾರಿತೋರಿಸುವ ಕುರುಡರೇ, ನೀವು ಸೊಳ್ಳೇ ಸೋಸುವವರು, ಒಂಟೇ ನುಂಗುವವರು.


ಯೆಹೋವನೆಂಬ ನಾನು ನ್ಯಾಯವನ್ನು ಪ್ರೀತಿಸುತ್ತೇನೆ, ಕೊಳ್ಳೆಯನ್ನೂ ಅನ್ಯಾಯವನ್ನೂ ದ್ವೇಷಿಸುತ್ತೇನೆ; ಸತ್ಯಸಂಧತೆಯನ್ನು ಅನುಸರಿಸಿ ಇವರ ನಷ್ಟಕ್ಕೆ ಪ್ರತಿಫಲವನ್ನು ಕೊಟ್ಟು ಇವರೊಂದಿಗೆ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.


ಆಗ ಅವನು ಆ ಹಣವನ್ನು ದೇವಾಲಯದೊಳಗೆ ಬಿಸಾಟುಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡು ಸತ್ತನು.


ಬಳಿಕ ಆಲೋಚನೆ ಮಾಡಿ, ಪರದೇಶಿಗಳನ್ನು ಹೂಣುವದಕ್ಕೋಸ್ಕರ ಅದರಿಂದ ಕುಂಬಾರನ ಹೊಲವೆಂಬ ಭೂವಿುಯನ್ನು ಕೊಂಡುಕೊಂಡರು.


ನೀವೋ ಒಬ್ಬನು ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ನೋಡಿ - ನಾನು ನಿನ್ನ ಸಂರಕ್ಷಣೆಗಾಗಿ ಕೊಡತಕ್ಕದ್ದನ್ನು ಕೊರ್ಬಾನ್ ಮಾಡಿದ್ದೇನೆ (ಅಂದರೆ ದೇವರಿಗಾಗಿ ಇಟ್ಟಿದ್ದೇನೆ) ಎಂದು ಹೇಳುವದಾದರೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು