Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 28:5 - ಕನ್ನಡ ಸತ್ಯವೇದವು J.V. (BSI)

5 ಆಗ ದೂತನು ಆ ಹೆಂಗಸರಿಗೆ - ನೀವು ಹೆದರಬೇಡಿರಿ; ಶಿಲುಬೆಗೆ ಹಾಕಲ್ಪಟ್ಟಿದ್ದ ಯೇಸುವನ್ನು ಹುಡುಕುತ್ತೀರೆಂದು ಬಲ್ಲೆನು; ಆತನು ಇಲ್ಲಿ ಇಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ದೂತನು ಆ ಹೆಂಗಸರಿಗೆ, “ನೀವು ಹೆದರಬೇಡಿರಿ; ಶಿಲುಬೆಗೆ ಹಾಕಲ್ಪಟ್ಟಿದ್ದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ದೂತನು ಆ ಮಹಿಳೆಯರಿಗೆ, “ಹೆದರಬೇಡಿ, ಶಿಲುಬೆಗೇರಿಸಿದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆ. ಅವರು ಇಲ್ಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದೇವದೂತನು ಆ ಸ್ತ್ರೀಯರಿಗೆ, “ಹೆದರಬೇಡಿ, ಶಿಲುಬೆಗೇರಿಸಲ್ಪಟ್ಟ ಯೇಸುವನ್ನು ನೀವು ಹುಡುಕುತ್ತಿದ್ದೀರೆಂಬುದು ನನಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆ ದೂತನು ಸ್ತ್ರೀಯರಿಗೆ, “ನೀವು ಭಯಪಡಬೇಡಿರಿ. ಶಿಲುಬೆಗೇರಿಸಿದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತನ್ನಾ ದೆವಾಚ್ಯಾ ದೆವ್‍ದುತಾ ತ್ಯಾ ಬಾಯ್ಕಾಮನ್ಸಾಕ್ನಿ, ತುಮಿ ಭಿಂಯಾತಲಿ ಗರಜ್ ನಾ, ತುಮಿ ಕುರ್ಸಾ ವರ್‍ತಿ ಮಾರಲ್ಲ್ಯಾ ಜೆಜುಕ್ ಹುಡ್ಕುಕ್ ಲಾಗ್ಲ್ಯಾಶಿ ಮನುನ್ ಮಾಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 28:5
17 ತಿಳಿವುಗಳ ಹೋಲಿಕೆ  

ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಡುವ ಊಳಿಗದ ಆತ್ಮಗಳಲ್ಲವೋ?


ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿಸುತ್ತೇನೆ; ಹೌದು, ನಿನಗೆ ಸಹಾಯಕೊಡುತ್ತೇನೆ; ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ಆ ಸ್ತ್ರೀಯರು ಭಯ ಹಿಡಿದವರಾಗಿ ತಮ್ಮ ಮುಖಗಳನ್ನು ನೆಲದ ಕಡೆಗೆ ಬೊಗ್ಗಿಸಿಕೊಂಡಿರುವಾಗ ಆ ಪುರುಷರು ಅವರಿಗೆ - ಸತ್ತವರೊಳಗೆ ಬದುಕಿರುವವನನ್ನು ಹುಡುಕುವದೇನು? ಆತನು ಇಲ್ಲಿ ಇಲ್ಲ, ಎದ್ದಿದ್ದಾನೆ.


ಆ ದೂತನು ಆಕೆಗೆ - ಮರಿಯಳೇ, ಹೆದರಬೇಡ; ನಿನಗೆ ದೇವರ ದಯೆ ದೊರಕಿತು.


ಅವನು ಅವರಿಗೆ - ಬೆರಗಾಗಬೇಡಿರಿ. ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತೀರಲ್ಲವೇ. ಆತನು ಜೀವಿತನಾಗಿ ಎದ್ದಿದ್ದಾನೆ; ಇಲ್ಲಿ ಇಲ್ಲ. ಆತನನ್ನು ಇಟ್ಟಿದ್ದ ಸ್ಥಳವು ಇದೇ, ನೋಡಿರಿ.


ಯೇಸು ಅವರಿಗೆ - ಹೆದರಬೇಡಿರಿ; ನನ್ನ ಸಹೋದರರ ಬಳಿಗೆ ಹೋಗಿ ಅವರು ಗಲಿಲಾಯಕ್ಕೆ ಹೋಗಬೇಕೆಂದು ಹೇಳಿರಿ; ಅಲ್ಲಿ ನನ್ನನ್ನು ನೋಡುವರು ಎಂದು ಹೇಳಿದನು.


ಕೂಡಲೆ ಯೇಸು ಮಾತಾಡಿ ಅವರಿಗೆ - ಧೈರ್ಯವಾಗಿರಿ; ನಾನು; ಅಂಜಬೇಡಿರಿ ಎಂದು ಹೇಳಿದನು.


ಆಮೇಲೆ ಆ ಪುರುಷನು ನನಗೆ - ಅತಿಪ್ರಿಯನೇ, ಭಯಪಡಬೇಡ; ನಿನಗೆ ಸಮಾಧಾನವಿರಲಿ, ಬಲಗೊಳ್ಳು, ಬಲಗೊಳ್ಳು ಎಂದು ಹೇಳಿದನು. ಅವನು ಆ ಮಾತನ್ನು ಹೇಳಿದ ಕೂಡಲೆ ನಾನು ಬಲಗೊಂಡು - ಎನ್ನೊಡೆಯನೇ, ಮಾತಾಡು; ನನ್ನನ್ನು ಬಲಗೊಳಿಸಿದ್ದೀ ಎಂದರಿಕೆಮಾಡಲು


ಆಮೇಲೆ ಅವನು ನನಗೆ - ದಾನಿಯೇಲನೇ, ಭಯಪಡಬೇಡ, ನೀನು [ದೈವಸಂಕಲ್ಪವನ್ನು] ವಿಮರ್ಶಿಸುವದಕ್ಕೂ ನಿನ್ನನ್ನು ನಿನ್ನ ದೇವರ ಮುಂದೆ ತಗ್ಗಿಸಿಕೊಳ್ಳುವದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ವಿಜ್ಞಾಪನೆಯು ದೇವರಿಗೆ ಮುಟ್ಟಿತು; ಆ ವಿಜ್ಞಾಪನೆಯ ನಿವಿುತ್ತವೇ ನಾನು ಬಂದೆನು.


ಕ್ರಿವಿುಪ್ರಾಯವಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾವಿುಯು ನಿನಗೆ ವಿಮೋಚಕನು ಎಂದು ಯೆಹೋವನು ಅನ್ನುತ್ತಾನೆ.


ಭಯಭ್ರಾಂತಹೃದಯರಿಗೆ - ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ದೈವಿಕ ಪ್ರತಿಫಲವನ್ನು ಕೊಡುವದಕ್ಕೂ ಬರುವನು; ತಾನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಹೇಳಿರಿ.


ಕಾವಲುಗಾರರು ಅವನಿಗೆ ಹೆದರಿ ನಡುಗಿ ಸತ್ತವರ ಹಾಗಾದರು.


ಆತನನ್ನು ದೇವರು ಮರಣವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಯಾಕಂದರೆ ಮರಣವು ಆತನನ್ನು ಹಿಡುಕೊಂಡಿರುವದು ಅಸಾಧ್ಯವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು