Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 28:8 - ಕನ್ನಡ ಸತ್ಯವೇದವು J.V. (BSI)

8 ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಬೇಗ ಸಮಾಧಿಯ ಬಳಿಯಿಂದ ಹೊರಟು ಆತನ ಶಿಷ್ಯರಿಗೆ ತಿಳಿಸುವದಕ್ಕೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರು ಭಯದಿಂದಲೂ, ಮಹಾ ಸಂತೋಷದಿಂದಲೂ ಬೇಗ ಸಮಾಧಿಯ ಬಳಿಯಿಂದ ಹೊರಟು ಆತನ ಶಿಷ್ಯರಿಗೆ ಅದನ್ನು ತಿಳಿಸುವುದಕ್ಕೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅದರಂತೆಯೇ ಆ ಮಹಿಳೆಯರು ಭಯಮಿಶ್ರಿತ ಆನಂದದಿಂದ ಸಮಾಧಿಯನ್ನು ಬಿಟ್ಟು ಕೂಡಲೇ ಹೊರಟರು. ಶಿಷ್ಯರಿಗೆ ಈ ಸಮಾಚಾರವನ್ನು ಮುಟ್ಟಿಸಲು ಧಾವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಕೂಡಲೇ ಆ ಸ್ತ್ರೀಯರು ಭಯದಿಂದಲೂ ಸಂತೋಷದಿಂದಲೂ ಸಮಾಧಿಯಿಂದ ಹೊರಟರು. ನಡೆದ ಸಂಗತಿಯನ್ನು ಶಿಷ್ಯರಿಗೆ ತಿಳಿಸಲು ಅವರು ಓಡಿಹೋಗುತ್ತಿರಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಸಮಾಧಿಯಿಂದ ಬೇಗನೆ ಹೊರಟು, ಶಿಷ್ಯರಿಗೆ ತಿಳಿಸುವುದಕ್ಕಾಗಿ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತನ್ನಾ ತೆನಿ ಗಡ್ಬಡಿನ್ ಭಿಂವ್ನಗೆತ್ ಅನಿ ಉಲ್ಲೆ ಕುಶಿ ಹೊವ್ನ್ ತೆಚ್ಯಾ ಶಿಸಾಕ್ನಿ ಹಿ ಖಬರ್ ಸಾಂಗುಕ್ ಸಮಾದಿಕ್ನಾ ಪಳುನ್ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 28:8
9 ತಿಳಿವುಗಳ ಹೋಲಿಕೆ  

ಯೆಹೋವನನ್ನು ಭಯಭಕ್ತಿಯಿಂದ ಸೇವಿಸಿರಿ; ನಡುಗುತ್ತಾ ಉಲ್ಲಾಸಪಡಿರಿ.


ಅವರು ಭ್ರಮೆಹಿಡಿದವರಾಗಿ ನಡುಗುತ್ತಾ ಹೊರಕ್ಕೆ ಬಂದು ಸಮಾಧಿಯ ಬಳಿಯಿಂದ ಓಡಿಹೋದರು; ಅವರು ಹೆದರಿಕೊಂಡದರಿಂದ ಯಾರಿಗೂ ಏನೂ ಹೇಳಲಿಲ್ಲ.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ಅಳುತ್ತಾ ಗೋಳಾಡುತ್ತಾ ಇರುವಿರಿ, ಆದರೆ ಲೋಕವು ಸಂತೋಷಿಸುವದು; ನಿಮಗೆ ದುಃಖವಾಗುವದು, ಆದರೆ ನಿಮ್ಮ ದುಃಖವು ಹೋಗಿ ಆನಂದ ಬರುವದು.


ಹಾಗೆಯೇ ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರಿಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವದು, ಮತ್ತು ನಿಮ್ಮ ಆನಂದವನ್ನು ಯಾರೂ ನಿವ್ಮಿುಂದ ತೆಗೆಯುವದಿಲ್ಲ.


ಮತ್ತು ಬೇಗ ಹೋಗಿ ಆತನ ಶಿಷ್ಯರಿಗೆ - ಸತ್ತವನು ಬದುಕಿದ್ದಾನೆ, ಆತನು ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ; ನಾನು ನಿಮಗೆ ಹೇಳಿದ್ದೇನೆ, ನೋಡಿರಿ ಎಂದು ಹೇಳಿದನು.


ಆಗ ಯೇಸು ಅವರ ಎದುರಿಗೆ ಬಂದು - ನಿಮಗೆ ಶುಭವಾಗಲಿ ಅಂದನು. ಅವರು ಹತ್ತರಕ್ಕೆ ಬಂದು ಆತನ ಪಾದಗಳನ್ನು ಹಿಡಿದು ಆತನಿಗೆ ನಮಸ್ಕಾರಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು