Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 28:9 - ಕನ್ನಡ ಸತ್ಯವೇದವು J.V. (BSI)

9 ಆಗ ಯೇಸು ಅವರ ಎದುರಿಗೆ ಬಂದು - ನಿಮಗೆ ಶುಭವಾಗಲಿ ಅಂದನು. ಅವರು ಹತ್ತರಕ್ಕೆ ಬಂದು ಆತನ ಪಾದಗಳನ್ನು ಹಿಡಿದು ಆತನಿಗೆ ನಮಸ್ಕಾರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಯೇಸು ಅವರನ್ನು ಭೇಟಿಯಾಗಿ, “ನಿಮಗೆ ಶುಭವಾಗಲಿ” ಅಂದನು. ಅವರು ಹತ್ತಿರಕ್ಕೆ ಬಂದು ಆತನ ಪಾದಗಳಿಗೆ ಅಡ್ಡಬಿದ್ದು ಆತನನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ತಟ್ಟನೆ, ಯೇಸುವೇ ಅವರನ್ನು ಎದುರುಗೊಂಡು, “ನಿಮಗೆ ಶುಭವಾಗಲಿ!” ಎಂದರು. ಆ ಮಹಿಳೆಯರು ಹತ್ತಿರಕ್ಕೆ ಬಂದು, ಅವರ ಪಾದಕ್ಕೆರಗಿ ಪೂಜಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೇಸು ಅವರ ಮುಂದೆ ಪ್ರತ್ಯಕ್ಷನಾಗಿ, “ನಿಮಗೆ ಶುಭವಾಗಲಿ” ಎಂದನು. ಆ ಸ್ತ್ರೀಯರು ಯೇಸುವಿನ ಬಳಿಗೆ ಹೋಗಿ, ಆತನ ಪಾದಗಳನ್ನು ಹಿಡಿದುಕೊಂಡು ಆತನನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರು ಶಿಷ್ಯರಿಗೆ ತಿಳಿಸುವುದಕ್ಕೆ ಹೋಗುತ್ತಿದ್ದಾಗ, ಯೇಸು ಅವರನ್ನು ಸಂಧಿಸಿ, “ಶುಭವಾಗಲಿ” ಎಂದರು. ಅವರು ಬಂದು ಯೇಸುವಿನ ಪಾದಗಳನ್ನು ಹಿಡಿದು ಅವರನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತನ್ನಾ ಎಗ್ದಮ್ ಜೆಜು ತೆಂಕಾ ಭೆಟ್ಲೊ, ಅನಿ,“ಶಾಂತಿ ತುಮ್ಚ್ಯಾ ವಾಂಗ್ಡಾ ರ್‍ಹಾಂವ್ದಿತ್” ಮಟ್ಲ್ಯಾನ್. ತೆನಿ ತೆಚ್ಯಾ ಪತರ್ ಯೆಲ್ಯಾನಿ. ತೆಚೆ ಪಾಯ್ ಧರ್‍ಲ್ಯಾನಿ ಅನಿ ತೆಚ್ಯಾ ಆರಾದನ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 28:9
18 ತಿಳಿವುಗಳ ಹೋಲಿಕೆ  

ಅಲ್ಲಿ ಆತನನ್ನು ಕಂಡು ಆತನಿಗೆ ಅಡ್ಡಬಿದ್ದರು; ಆದರೆ ಕೆಲವರು ಸಂದೇಹಪಟ್ಟರು.


ಆಗ ದೋಣಿಯಲ್ಲಿದ್ದವರು - ನಿಜವಾಗಿ ನೀನು ದೇವಕುಮಾರನು ಎಂದು ಹೇಳಿ ಆತನಿಗೆ ನಮಸ್ಕರಿಸಿದರು.


ತೋಮನು ಆತನಿಗೆ - ನನ್ನ ಸ್ವಾಮೀ, ನನ್ನ ದೇವರು! ಎಂದು ಹೇಳಿದನು.


ಅವರು [ಆತನನ್ನು ಆರಾಧಿಸಿ] ಬಹುಸಂತೋಷದಿಂದ


ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೇಕೂದಲಿನಿಂದ ಆತನ ಪಾದಗಳನ್ನು ಒರಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತು.


ಹಿಂದೆ ಆತನ ಪಾದಗಳ ಬಳಿಯಲ್ಲಿ ನಿಂತುಕೊಂಡು ಅಳುತ್ತಾ ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ತ್ಯಾವಮಾಡಿ ತನ್ನ ತಲೇಕೂದಲಿನಿಂದ ಒರಸಿ ಅವುಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.


ನಾನು ನಿನಗೆ ಅನುಗ್ರಹಿಸುವದೇನಂದರೆ ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಸೈತಾನನ ಸಮಾಜದವರಲ್ಲಿ ಕೆಲವರು ಬಂದು ನಿನ್ನ ಪಾದಗಳ ಮುಂದೆ ಬೀಳುವಂತೆಯೂ ನಿನ್ನನ್ನು ನಾನು ಪ್ರೀತಿಸಿದ್ದನ್ನು ತಿಳುಕೊಳ್ಳುವಂತೆಯೂ ಮಾಡುವೆನು.


ಕಡೇ ಮಾತೇನಂದರೆ ಸಹೋದರರೇ ಸಂತೋಷಪಡಿರಿ, ಕ್ರಮಪಡಿಸಿಕೊಳ್ಳಿರಿ; ಧೈರ್ಯವುಳ್ಳವರಾಗಿರಿ, ಒಂದೇ ಮನಸ್ಸುಳ್ಳವರಾಗಿರಿ, ಸಮಾಧಾನದಿಂದಿರಿ; ಆಗ ಪ್ರೀತಿಯನ್ನೂ ಶಾಂತಿಯನ್ನೂ ಕೊಡುವ ದೇವರು ನಿಮ್ಮ ಸಂಗಡ ಇರುವನು.


ಅದೇ ದಿವಸದ ಅಂದರೆ ವಾರದ ಮೊದಲನೆಯ ದಿವಸದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಲುಗಳನ್ನು ಮುಚ್ಚಿಕೊಂಡಿರಲು ಯೇಸು ಬಂದು ನಡುವೆ ನಿಂತು - ನಿಮಗೆ ಸಮಾಧಾನವಾಗಲಿ ಅಂದನು.


ಆ ದೂತನು ಆಕೆಯ ಬಳಿಗೆ ಬಂದು - ದೇವರ ದಯೆ ಹೊಂದಿದವಳೇ, ನಿನಗೆ ಶುಭವಾಗಲಿ; ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.


ಧರ್ಮವನ್ನು ಅನುಸರಿಸಲು ಸಂತೋಷಪಟ್ಟು ನಿನ್ನ ಮಾರ್ಗದಲ್ಲಿ ನಡೆಯುತ್ತಾ ನಿನ್ನನ್ನು ಸ್ಮರಿಸುವವರಿಗೆ ಪ್ರಸನ್ನನಾಗಿದ್ದೀ; ನಮ್ಮ ಮೇಲಾದರೋ ರೋಷಗೊಂಡಿದ್ದೀ; ಆದರೂ ನಾವು ಪಾಪವನ್ನು ನಡಿಸುತ್ತಾ ಬಂದೆವು; ಬಹುಕಾಲದಿಂದ ಪಾಪದಲ್ಲಿ ಮುಣುಗಿರುವ ನಮಗೆ ರಕ್ಷಣೆಯಾದೀತೇ?


ಜನರಿಂದ ಬೋಧಕರನ್ನಿಸಿಕೊಳ್ಳುವದು, ಇವುಗಳೇ ಅವರಿಗೆ ಇಷ್ಟ.


ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಬೇಗ ಸಮಾಧಿಯ ಬಳಿಯಿಂದ ಹೊರಟು ಆತನ ಶಿಷ್ಯರಿಗೆ ತಿಳಿಸುವದಕ್ಕೆ ಓಡಿಹೋದರು.


ಯೇಸು ಅವರಿಗೆ - ಹೆದರಬೇಡಿರಿ; ನನ್ನ ಸಹೋದರರ ಬಳಿಗೆ ಹೋಗಿ ಅವರು ಗಲಿಲಾಯಕ್ಕೆ ಹೋಗಬೇಕೆಂದು ಹೇಳಿರಿ; ಅಲ್ಲಿ ನನ್ನನ್ನು ನೋಡುವರು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು