Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 3:12 - ಕನ್ನಡ ಸತ್ಯವೇದವು J.V. (BSI)

12 ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೊಟ್ಟನು ತೂರುವ ಮೊರವನ್ನು ಆತನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟು ಬಿಡುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವರ ಕೈಯಲ್ಲಿ ಮೊರವಿದೆ; ತಮ್ಮ ಕಣದಲ್ಲಿಯ ರಾಶಿಯನ್ನು ತೂರುವರು. ಗಟ್ಟಿಕಾಳನ್ನು ಮಾತ್ರ ಕಣಜದಲ್ಲಿ ತುಂಬುವರು; ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಎಚ್ಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆತನು ಕಾಳನ್ನು ಸ್ವಚ್ಛಗೊಳಿಸಲು ಸಿದ್ಧನಾಗಿದ್ದಾನೆ. ಆತನು ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿ ಒಳ್ಳೆಯ ಕಾಳುಗಳನ್ನು ಕಣಜದಲ್ಲಿ ತುಂಬಿಸಿ ಹೊಟ್ಟನ್ನು ನಂದಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಮೊರವು ಅವರ ಕೈಯಲ್ಲಿದೆ, ಅವರು ತಮ್ಮ ಕಣದಲ್ಲಿಯ ರಾಶಿಯನ್ನು ತೂರಿ ಶುದ್ಧಮಾಡಿ ಗೋಧಿಯನ್ನು ಕಣಜದಲ್ಲಿ ತುಂಬಿಕೊಂಡು, ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಅಪ್ನಾಚೆ ಸುಪ್ಪ್ ತೆನಿ ಹಾತಾತ್ ಧರ್‍ಲ್ಯಾನಾಯ್, ಅನಿ ತೊ ಅಪ್ನಾಚೆ ಖಳ್ಯಾತ್ಲೆ ದಾನೆ ವಾರೆ ದಿವ್ನ್ ಮಾಳ್ ಕರ್‍ತಾ, ಬರೆ ಅಸಲ್ಲೆ ದಾನೆ ತೊ ಅಪ್ನಾಚ್ಯಾ ತಟ್ಟ್ಯಾತ್ ಭರುನ್ ಥವ್ತಾ, ಅನಿ ಜೊಳ್ಳ್ ಕನ್ನಾಬಿ ಇಜಿನಸಲ್ಲ್ಯಾ ಆಗಿತ್ ಘಾಲುನ್ ಜಾಳ್ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 3:12
30 ತಿಳಿವುಗಳ ಹೋಲಿಕೆ  

ಇಗೋ, ಆ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ ದುಷ್ಕರ್ಮಿಗಳೂ ಹೊಟ್ಟಿನಂತಿರುವರು; ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಲಯವಾಗುವದು; ಬುಡ ರೆಂಬೆಗಳಾವದನ್ನೂ ಉಳಿಸದು.


ಸುಗ್ಗೀಕಾಲದ ತನಕ ಎರಡೂ ಕೂಡ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ - ಮೊದಲು ಹಣಜಿಯನ್ನು ಆರಿಸಿತೆಗೆದು ಅದನ್ನು ಸುಡುವದಕ್ಕೆ ಹೊರೆಕಟ್ಟಿಹಾಕಿ, ಗೋದಿಯನ್ನು ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು ಅಂದನು.


ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಳ್ಳುವದಕ್ಕಿದ್ದಾನೆ, ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು ಎಂದು ಉತ್ತರಕೊಟ್ಟನು.


ಅನ್ಯಜನರನ್ನು ಬಾಬೆಲಿಗೆ ಕಳುಹಿಸುವೆನು, ಅವರು ಅದನ್ನು ತೂರುವರು, ಆ ದೇಶವನ್ನು ಬಟ್ಟಬರಿದು ಮಾಡುವರು; ನಿಯವಿುತ ವಿಪತ್ಕಾಲದಲ್ಲಿ ಅದನ್ನು ಮುತ್ತುವರಷ್ಟೆ.


ನೀನು ತೂರಲು ಅವುಗಳನ್ನು ಗಾಳಿಯು ಬಡಿದುಕೊಂಡು ಹೋಗುವದು; ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತು ಯೆಹೋವನಲ್ಲಿ ಆನಂದಿಸುವಿ, ಇಸ್ರಾಯೇಲಿನ ಸದಮಲಸ್ವಾವಿುಯಲ್ಲಿ ಹೆಚ್ಚಳಪಡುವಿ.


ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು; ಅವರು ಆತನ ರಾಜ್ಯದೊಳಗಿಂದ ಎಲ್ಲಾ ಕಂಟಕರನ್ನೂ


ದುಷ್ಟರೋ ಹಾಗಲ್ಲ; ಗಾಳಿ ಬಡುಕೊಂಡು ಹೋಗುವ ಹೊಟ್ಟಿನಂತಿದ್ದಾರೆ.


ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ - ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವದು; ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಕಾಡುಮರಗಳ ಮೇಲೆಯೂ ಭೂವಿುಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಆರದೆ ದಹಿಸುವದು.


ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲಕೊಡುವ ಹಾಗೆ ಅದನ್ನು ಶುದ್ಧಿಮಾಡುತ್ತಾನೆ.


ನನ್ನ ಜನರನ್ನು ದೇಶದ ಉಕ್ಕಡಗಳಲ್ಲಿ ಕವೆಗೋಲಿನಿಂದ ಹಾರಿಸಿ ತೂರುವೆನು; ಅವರನ್ನು ಪುತ್ರಶೋಕಕ್ಕೆ ಈಡುಮಾಡಿ ನಾಶಪಡಿಸುವೆನು; ಅವರು ಹೋದ ದಾರಿಯಿಂದ ಹಿಂದಿರುಗರು.


ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇವಿುನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ ಆ ದಿನವನ್ನು ನನ್ನ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇವಿುನ ಉಪ್ಪರಿಗೆಗಳನ್ನು ದಹಿಸಿಬಿಡುವದು, ಆರುವದೇ ಇಲ್ಲ.


ಹೊಲಗೇಯುವ ಎತ್ತುಕತ್ತೆಗಳು ಮೊರದಿಂದಲೂ ಕವೇಕೋಲಿನಿಂದಲೂ ತೂರಿದ ಉಪ್ಪುಪ್ಪಾದ ಮೇವನ್ನು ತಿನ್ನುವವು.


ಹೌದು, ಮಹಾ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತಿವೆ! ಆದರೆ ಆತನು ಅವರನ್ನು ಗದರಿಸುವಾಗ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿಯಾಡುವ ದೂಳಿನಂತೆಯೂ ಅಟ್ಟಲ್ಪಡುವರು. ಇಗೋ, ಸಂಜೆಯಲ್ಲಿ ದಿಗಿಲುಬಿದ್ದು ಉದಯದೊಳಗಾಗಿ ಇಲ್ಲವಾಗುವರು!


ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ ಇಸ್ರಾಯೇಲ್ಯರ ಸದಮಲಸ್ವಾವಿುಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೂಳೆಯನ್ನು ನುಂಗಿಬಿಡುವ ಹಾಗೂ ಒಣಹುಲ್ಲು ಬೆಂಕಿಯಲ್ಲಿ ಕುಗ್ಗುವಂತೆಯೂ ಅವರ ಬೇರು ಕೊಳೆತು ಅವರ ಹೂವು ದೂಳಾಗಿ ತೂರಿಹೋಗುವದು.


ನಿಮ್ಮಲ್ಲಿನ ಬಲಿಷ್ಠನೇ ಸಣಬಿನ ಗುಂಜು, ಅವನ ಕಾರ್ಯವೇ ಕಿಡಿ, ಎರಡು ಸೇರಿ ಯಾರೂ ನಂದಿಸಲಾಗದಂತೆ ಸುಟ್ಟುಹೋಗುವವು.


ಅವರು ಗಾಳಿ ಹಾರಿಸುವ ಹೊಟ್ಟಿನಂತಾಗಲಿ; ಯೆಹೋವನ ದೂತನು ಅವರನ್ನು ನೂಕಿಬಿಡಲಿ.


ಅವರು ಗಾಳಿಗೆ ಸಿಕ್ಕಿಬಿದ್ದ ಹುಲ್ಲಿನಂತೆ ಆದದ್ದು ಎಷ್ಟು ಸರ್ತಿ? ಎಷ್ಟಾವರ್ತಿ ಬಿರುಗಾಳಿಯು ಕೊಚ್ಚಿಕೊಂಡು ಹೋಗುವ ಹೊಟ್ಟಿನಂತಿದ್ದರು?


ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕಿವಿಯುಳ್ಳವನು ಕೇಳಲಿ ಅಂದನು.


ಇಗೋ, ಧಾನ್ಯವನ್ನು ಜರಡಿಯಲ್ಲಿ ಜಾಲಿಸುವ ಪ್ರಕಾರ ಇಸ್ರಾಯೇಲ್ಯರನ್ನು ಸಕಲ ಜನಾಂಗಗಳಲ್ಲಿ ಹಾಕಿ ಜಾಲಿಸಬೇಕೆಂದು ಅಪ್ಪಣೆಕೊಡುವೆನು; ಹೀಗಾದರೂ ಒಂದು ಕಾಳೂ ನೆಲಕ್ಕೆಬೀಳದು.


ಹೀಗಿರಲು ಅವರು ಪ್ರಾತಃಕಾಲದ ಮೋಡದ ಪ್ರಕಾರವಾಗಿಯೂ ಬೇಗನೆ ಮಾಯವಾಗುವ ಇಬ್ಬನಿಯಂತೆಯೂ ಬಿರುಗಾಳಿಯು ಕಣದಿಂದ ಬಡಿದುಕೊಂಡುಹೋಗುವ ಹೊಟ್ಟಿನ ಹಾಗೂ ಗವಾಕ್ಷದಿಂದ ಹೊರಡುವ ಹೊಗೆಯೋಪಾದಿಯಲ್ಲಿಯೂ ಇರುವರು.


ಆ ಕಾಲದಲ್ಲಿ ಈ ಜನರಿಗೂ ಯೆರೂಸಲೇವಿುಗೂ ಈ ಮಾತಾಗುವದು - ಬಿಸಿಗಾಳಿಯು ಅರಣ್ಯದ ಬೋಳು ಗುಡ್ಡಗಳಿಂದ ನನ್ನ ಪ್ರಜೆಯೆಂಬ ಯುವತಿಯ ಮೇಲೆ ಬೀಸುತ್ತದೆ; ಅದು ತೂರುವದಕ್ಕೂ ಶೋಧಿಸುವದಕ್ಕೂ ಆಗದು.


ಅವರು ಆಚೆ ಹೋಗಿ ನನಗೆ ದ್ರೋಹಮಾಡಿದವರ ಹೆಣಗಳನ್ನು ನೋಡುವರು; ಅವುಗಳನ್ನು ಕಡಿಯುವ ಹುಳವು ಸಾಯುವದಿಲ್ಲ, ಸುಡುವ ಬೆಂಕಿಯು ಆರುವದಿಲ್ಲ; ಅವು ಲೋಕದವರಿಗೆಲ್ಲಾ ಅಸಹ್ಯವಾಗಿರುವವು.


ರೌದ್ರವು ನನ್ನಲಿಲ್ಲ; ಮುಳ್ಳುಗಿಳ್ಳು ನನಗೆ ಎದುರುಬಿದ್ದರೆ ಎಷ್ಟೋ ಒಳ್ಳೇದು! ಅವುಗಳಿಗೆ ವಿರುದ್ಧವಾಗಿ ಯುದ್ಧಕ್ಕೆ ನಡೆದು ಹೋಗಿ ಒಟ್ಟಿಗೆ ಸುಟ್ಟುಬಿಡುವೆನು.


ಅಧರ್ಮಿಗಳನ್ನೂ ಕೂಡಿಸಿ ಬೆಂಕೀಕೊಂಡದಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.


ಯೋಹಾನನು ಅವರೆಲ್ಲರಿಗೆ - ನಾನಂತೂ ನಿಮಗೆ ನೀರಿನ ಸ್ನಾನ ಮಾಡಿಸುವವನು; ಆದರೆ ನನಗಿಂತ ಶಕ್ತನು ಬರುತ್ತಾನೆ. ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ. ಆತನು ಪವಿತ್ರಾತ್ಮದಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ಸ್ನಾನಮಾಡಿಸುವನು.


ಗೋದಿಯ ಕಾಳನ್ನು ನುಚ್ಚು ನುಚ್ಚು ಮಾಡುವನೋ? ತನ್ನ ಕುದುರೆಗಳನ್ನು ಹೊಡೆಯುತ್ತಾ ಗುಂಡನ್ನು ಗಿರ್ರನೆ ಉರುಳಿಸುತ್ತಾ ಯಾವಾಗಲೂ ಒಕ್ಕುತ್ತಿರುವದಿಲ್ಲ; ನುಚ್ಚು ನುಚ್ಚು ಮಾಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು