Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 3:13 - ಕನ್ನಡ ಸತ್ಯವೇದವು J.V. (BSI)

13 ಆ ಕಾಲದಲ್ಲಿ ಯೇಸು ಯೋಹಾನನಿಂದ ಸ್ನಾನಮಾಡಿಸಿಕೊಳ್ಳಬೇಕೆಂದು ಗಲಿಲಾಯದಿಂದ ಯೊರ್ದನ್‍ಹೊಳೆಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆ ಕಾಲದಲ್ಲಿ ಯೇಸು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಗಲಿಲಾಯದಿಂದ ಯೊರ್ದನ್ ಹೊಳೆಯ ಬಳಿ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಯೊವಾನ್ನನಿಂದ ಸ್ನಾನದೀಕ್ಷೆ ಪಡೆಯಲು ಯೇಸುಸ್ವಾಮಿ ಗಲಿಲೇಯದಿಂದ ಹೊರಟು ಜೋರ್ಡನ್ ನದಿಯ ಬಳಿಗೆ ಬಂದರು. ಯೊವಾನ್ನನು ಅವರನ್ನು ತಡೆಯಲೆತ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆ ಸಮಯದಲ್ಲಿ ಯೋಹಾನನಿಂದ ಯೇಸು ದೀಕ್ಷಾಸ್ನಾನ ಮಾಡಿಸಿಕೊಳ್ಳಲು ಗಲಿಲಾಯದಿಂದ ಜೋರ್ಡನ್ ನದಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಮೇಲೆ ಯೇಸು ಯೋಹಾನನಿಂದ ದೀಕ್ಷಾಸ್ನಾನ ಪಡೆಯಲು ಗಲಿಲಾಯದಿಂದ ಯೊರ್ದನ್ ನದಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತ್ಯಾ ಎಳಾರ್ ಜೆಜು ಗಾಲಿಲಿಯಾ ಪ್ರಾಂತ್ಯಾತ್ನಾ ಜೊರ್ದಾನ್ ನ್ಹಯ್‌ಕ್ಡೆ ಜುಂವಾವಾಕ್ನಾ ಬಾಲ್ತಿಮ್ ಘೆವ್ಕ್ ಮನುನ್ ಯೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 3:13
7 ತಿಳಿವುಗಳ ಹೋಲಿಕೆ  

ಆದರೆ ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯವನ್ನು ಆಳುತ್ತಾನೆಂದು ಕೇಳಿ ಅಲ್ಲಿಗೆ ಹೋಗುವದಕ್ಕೆ ಅಂಜಿದನು. ಆಗ ಅವನು ಕನಸಿನಲ್ಲಿ ದೇವರ ಅಪ್ಪಣೆಯನ್ನು ಹೊಂದಿ ಗಲಿಲಾಯ ಸೀಮೆಗೆ ಹೋದನು.


ಅವನ ಬಳಿಗೆ ಹೊರಟುಹೋಗಿ, ಅವರು ತಮ್ಮತಮ್ಮ ಪಾಪಗಳನ್ನು ಹೇಳಿಕೊಂಡು ಯೊರ್ದನ್‍ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.


ಆಗ ಯೋಹಾನನು - ನಾನು ನಿನ್ನಿಂದ ಸ್ನಾನ ಮಾಡಿಸಿಕೊಳ್ಳತಕ್ಕವನಾಗಿರುವಲ್ಲಿ ನೀನು ನನ್ನ ಬಳಿಗೆ ಬರುವದೇನು ಎಂದು ಹೇಳಿ ಆತನನ್ನು ತಡೆಯುತ್ತಾ ಇದ್ದನು.


ನನಗೂ ಆತನ ಗುರುತಿರಲಿಲ್ಲ; ಆದರೆ ಆತನನ್ನು ಇಸ್ರಾಯೇಲ್ಯರಿಗೆ ತಿಳಿಯಪಡಿಸುವದಕ್ಕೋಸ್ಕರವೇ ನಾನು ನೀರಿನ ಸ್ನಾನವನ್ನು ಮಾಡಿಸುವವನಾಗಿ ಬಂದೆನು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು