Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 3:14 - ಕನ್ನಡ ಸತ್ಯವೇದವು J.V. (BSI)

14 ಆಗ ಯೋಹಾನನು - ನಾನು ನಿನ್ನಿಂದ ಸ್ನಾನ ಮಾಡಿಸಿಕೊಳ್ಳತಕ್ಕವನಾಗಿರುವಲ್ಲಿ ನೀನು ನನ್ನ ಬಳಿಗೆ ಬರುವದೇನು ಎಂದು ಹೇಳಿ ಆತನನ್ನು ತಡೆಯುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆತನಿಗೆ ಯೋಹಾನನು ತಡೆಯುತ್ತಾ, “ನಾನೇ ನಿನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕಾಗಿತ್ತು, ಆದರೆ ನೀನು ನನ್ನ ಬಳಿಗೆ ಬರುವುದೇಕೆ?” ಎಂದು ಹೇಳಿದಕ್ಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ನಾನೇ ನಿಮ್ಮಿಂದ ದೀಕ್ಷಾಸ್ನಾನ ಪಡೆಯಬೇಕಾಗಿರುವಲ್ಲಿ ನೀವು ನನ್ನ ಬಳಿಗೆ ಬರುವುದೇ?’ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ಯೋಹಾನನು, “ನಾನೇ ನಿನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕಾಗಿದೆ. ಹೀಗಿರಲು ನನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ನೀನು ಬರುವುದೇಕೆ?” ಎಂದು ಹೇಳಿ ಆತನನ್ನು ತಡೆಯಲೆತ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ಯೋಹಾನನು ಅದಕ್ಕೆ ಅಡ್ಡಿ ಮಾಡುತ್ತಾ, “ನಾನೇ ನಿಮ್ಮಿಂದ ದೀಕ್ಷಾಸ್ನಾನ ಪಡೆಯಬೇಕಾಗಿರುವಲ್ಲಿ, ನೀವು ನನ್ನ ಬಳಿಗೆ ಬರಬಹುದೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖರೆ “ಮಿಯಾ ತುಜೆಕ್ನಾ ಬಾಲ್ತಿಮ್ ಘೆವ್ಕ್ ಪಾಜೆ, ಅನಿ ತಿಯಾ ಮಾಜ್ಯಾ ಹಾತಾನಿ ಬಾಲ್ತಿಮ್ ಘೆತಲೆ ಕಶೆ?” ಮನುನ್ ಜುವಾಂವ್ ಜೆಜುಕ್ ಅಡ್ವುಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 3:14
16 ತಿಳಿವುಗಳ ಹೋಲಿಕೆ  

ನೀವು ಪುತ್ರರಾಗಿರುವದರಿಂದ ದೇವರು ಅಪ್ಪಾ ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.


ಹಾಗಾಗದೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವದರಿಂದ ಉಂಟಾಗುವ ಆ ವಾಗ್ದಾನದ ಫಲವು ನಂಬುವವರಿಗೇ ಕೊಡಲ್ಪಡಬೇಕೆಂದು ಶಾಸ್ತ್ರವು ಸಮಸ್ತವನ್ನು ಪಾಪಕ್ಕೊಳಗಾಗಿದೆಯೆಂದು ತೀರ್ಮಾನಿಸಿತು.


ಈತನು ತನ್ನ ರಕ್ತವನ್ನು ಸುರಿಸಿ ನಂಬಿಕೆಯಿದ್ದವರಿಗಾಗಿ ಕೃಪಾಧಾರವಾಗಬೇಕೆಂದು ದೇವರು ಈತನನ್ನು ಮುಂದಿಟ್ಟನು.


ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಹೊಂದದೆ ಹೋಗಿದ್ದಾರೆ.


ನಾವೆಲ್ಲರು ಆತನ ಪರಿಪೂರ್ಣತೆಯೊಳಗಿಂದ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು.


ನನ್ನ ಸ್ವಾವಿುಯ ತಾಯಿಯು ನನ್ನ ಬಳಿಗೆ ಬರುವಷ್ಟು ಭಾಗ್ಯ ನನಗೆ ಎಲ್ಲಿಂದಾಯಿತು?


ಆ ಕಾಲದಲ್ಲಿ ಯೇಸು ಯೋಹಾನನಿಂದ ಸ್ನಾನಮಾಡಿಸಿಕೊಳ್ಳಬೇಕೆಂದು ಗಲಿಲಾಯದಿಂದ ಯೊರ್ದನ್‍ಹೊಳೆಗೆ ಬಂದನು.


ಆದರೆ ಯೇಸು ಅವನಿಗೆ - ಸದ್ಯಕ್ಕೆ ಒಪ್ಪಿಕೋ; ಹೀಗೆ ನಾವು ಎಲ್ಲಾ ಧರ್ಮವನ್ನು ನೆರವೇರಿಸತಕ್ಕದ್ದಾಗಿದೆ ಎಂದು ಹೇಳಿದಾಗ ಅವನು ಒಪ್ಪಿಕೊಂಡನು.


ಸಹೋದರರೇ, ನನ್ನ ಕೆಲಸವು ಇತರ ಜನಗಳಲ್ಲಿ ಸಫಲವಾದಂತೆ ನಿಮ್ಮಲ್ಲಿಯೂ ಸಫಲವಾದೀತೆಂದು ನಿಮ್ಮ ಬಳಿಗೆ ಬರುವದಕ್ಕೆ ಅನೇಕಾವರ್ತಿ ಮನಸ್ಸು ಮಾಡಿಕೊಂಡಿದ್ದಾಗ್ಯೂ ಇಂದಿನವರೆಗೂ ಅಡ್ಡಿಯಾಯಿತೆಂದು ನಿಮಗೆ ತಿಳಿದಿರಬೇಕೆಂದು ನನ್ನ ಅಪೇಕ್ಷೆ.


ಲೇವಿಯರು ಶಾಶ್ವತವಾಗಿ ಉದ್ಯೋಗ ನಡಿಸುವದಕ್ಕೆ ಮರಣವು ಅಡ್ಡಿಯಾದದರಿಂದ ಅವರಲ್ಲಿ ಯಾಜಕರಾದವರು ಅನೇಕರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು