Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 3:16 - ಕನ್ನಡ ಸತ್ಯವೇದವು J.V. (BSI)

16 ಯೇಸು ಸ್ನಾನಮಾಡಿಸಿಕೊಂಡ ಕೂಡಲೆ ನೀರಿನಿಂದ ಮೇಲಕ್ಕೆ ಬರಲು ಇಗೋ, ಆತನಿಗೆ ಆಕಾಶವು ತೆರೆಯಿತು; ಮತ್ತು ದೇವರ ಆತ್ಮ ಪಾರಿವಾಳದ ಹಾಗೆ ಇಳಿದು ತನ್ನ ಮೇಲೆ ಬರುವದನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡ ನೀರಿನಿಂದ ಮೇಲಕ್ಕೆ ಬಂದ ಕೂಡಲೇ ಇಗೋ, ಆತನಿಗಾಗಿ ಪರಲೋಕವು ತೆರೆಯಿತು; ಮತ್ತು ದೇವರ ಆತ್ಮವು ಪಾರಿವಾಳದ ಹಾಗೆ ತನ್ನ ಮೇಲೆ ಇಳಿದು ಬರುವುದನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಯೇಸು ದೀಕ್ಷಾಸ್ನಾನ ಪಡೆದು ನೀರಿನಿಂದ ಮೇಲಕ್ಕೆ ಬಂದದ್ದೇ ಆಕಾಶವು ಫಕ್ಕನೆ ತೆರೆಯಿತು. ದೇವರಾತ್ಮ ಪಾರಿವಾಳದ ರೂಪದಲ್ಲಿ ತಮ್ಮ ಮೇಲೆ ಇಳಿದುಬಂದು ನೆಲಸುವುದನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದನು. ಕೂಡಲೇ ಆಕಾಶವು ತೆರೆಯಿತು. ದೇವರಾತ್ಮನು ಪಾರಿವಾಳದ ರೂಪದಲ್ಲಿ ಕೆಳಗಿಳಿದು ತನ್ನ ಮೇಲೆ ಬರುತ್ತಿರುವುದನ್ನು ಯೇಸು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೇಸು ದೀಕ್ಷಾಸ್ನಾನ ಪಡೆದುಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೇ, ಸ್ವರ್ಗವು ತೆರೆಯಿತು, ದೇವರ ಆತ್ಮ ಪಾರಿವಾಳದ ಹಾಗೆ ತಮ್ಮ ಮೇಲೆ ಇಳಿದು ಬರುವುದನ್ನು ಯೇಸು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಜೆಜು ಬಾಲ್ತಿಮ್ ಘೆವ್ನ್ ಪಾನಿಯಾತ್ನಾ ವೈರ್ ಉಟುನ್ ಇಬೆ ಹೊತ್ತ್ಯಾ ತನ್ನಾ ಮಳಬ್ ಉಗಡ್ಲ್ಯಾ ಸರ್ಕೊ ಹೊಲೊ ಅನಿ ಪವಿತ್ರ್ ಆತ್ಮೊ ಪಾರಿವಾಳಾಚ್ಯಾ ರುಪಾರ್ ಅಪ್ನಾ ವರ್‍ತಿ ಉತ್ರುನ್ ಯೆತಲೊ ಜೆಜುನ್ ಬಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 3:16
14 ತಿಳಿವುಗಳ ಹೋಲಿಕೆ  

ಆ ಅಂಕುರದ ಮೇಲೆ ಜ್ಞಾನವಿವೇಕದಾಯಕ ಆತ್ಮ, ಆಲೋಚನಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳುವಳಿಕೆಯನ್ನೂ ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವದು;


ಮಾಡಿಸಿಕೊಂಡ ಕೂಡಲೆ ಆತನು ನೀರಿನೊಳಗಿಂದ ಮೇಲಕ್ಕೆ ಬರಲು ಆಕಾಶವೊಡೆದು ದೇವರಾತ್ಮವು ಪಾರಿವಾಳದ ಹಾಗೆ ತನ್ನ ಮೇಲೆ ಇಳಿಯುವದನ್ನು ಕಂಡನು.


ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ; ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ; ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರ ಪಡಿಸುವನು.


ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವದಕ್ಕೂ ಸೆರೆಯವರಿಗೆ ಬಿಡುಗಡೆಯಾಗುವದನ್ನು, ಬಂದಿಗಳಿಗೆ [ಕದ] ತೆರೆಯುವದನ್ನು ಪ್ರಸಿದ್ಧಿಪಡಿಸುವದಕ್ಕೂ


ಅಗೋ, ಆಕಾಶವು ತೆರೆದಿರುವದನ್ನೂ ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರುವದನ್ನೂ ನೋಡುತ್ತೇನೆ ಎಂದು ಹೇಳಿದನು.


ಕೆಬಾರ್ ನದಿಯ ಹತ್ತಿರ ಸೆರೆಯಾಗಿ ವಾಸಿಸುತ್ತಿದ್ದ ಯೆಹೂದ್ಯರ ಮಧ್ಯದಲ್ಲಿ ನಾನು ಸೇರಿಕೊಂಡಿರುವಾಗ ಮೂವತ್ತನೆಯ ವರುಷದ ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆಕಾಶವು ಒಡೆದು ನನಗೆ ದೇವದರ್ಶನಗಳು ಉಂಟಾದವು.


ಹೇಗಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮವರವನ್ನು ಅಳತೆಮಾಡದೆ ಅನುಗ್ರಹಿಸುವದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.


ನಾನಂತೂ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು, ನೋಡಿರಿ; ನಿಮ್ಮಲ್ಲಿ ಆವೇಶಿಸಿರುವ ನನ್ನ ಆತ್ಮವೂ ನಿಮ್ಮ ಬಾಯಿಗೆ ನಾನು ಕೊಟ್ಟಿರುವ ಮಾತುಗಳೂ ನಿಮ್ಮ ಬಾಯಿಂದಾಗಲಿ ನಿಮ್ಮ ಸಂತತಿಯ ಬಾಯಿಂದಾಗಲಿ ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ ಇಂದಿನಿಂದ ಎಂದಿಗೂ ತೊಲಗುವದಿಲ್ಲ ಎಂದು ಯೆಹೋವನು ಅನ್ನುತ್ತಾನೆ.


ಇದಲ್ಲದೆ ಅವನಿಗೆ - ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪರಲೋಕವು ತೆರೆದಿರುವದನ್ನೂ ಮನುಷ್ಯಕುಮಾರನ ಮೇಲೆ ದೇವದೂತರು ಏರಿಹೋಗುತ್ತಾ ಇಳಿದುಬರುತ್ತಾ ಇರುವದನ್ನೂ ನೋಡುವಿರಿ ಎಂದು ಹೇಳಿದನು.


ಈತನು, ಅಂದರೆ ಯೇಸು ಕ್ರಿಸ್ತನು, ನೀರಿನಿಂದಲೂ ರಕ್ತದಿಂದಲೂ ಸಾಕ್ಷಿಹೊಂದಿದವನು. ನೀರಿನಿಂದ ಮಾತ್ರವಲ್ಲ, ನೀರಿನಿಂದಲೂ ರಕ್ತದಿಂದಲೂ ಸಾಕ್ಷಿ ಹೊಂದಿದವನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು