ಮತ್ತಾಯ 3:3 - ಕನ್ನಡ ಸತ್ಯವೇದವು J.V. (BSI)3 ಕರ್ತನ ದಾರಿಯನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂಬದಾಗಿ ಪ್ರವಾದಿಯಾದ ಯೆಶಾಯನಿಂದ ಸೂಚಿತನಾದವನು ಇವನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 “‘ಕರ್ತನ ದಾರಿಯನ್ನು ಸಿದ್ಧಮಾಡಿರಿ; ಆತನ ಮಾರ್ಗವನ್ನು ಸರಾಗ ಮಾಡಿರಿ’ ಎಂದು ಅಡವಿಯಲ್ಲಿ ಕೂಗುವವನ ಶಬ್ದವಿದೆ” ಎಂಬುದಾಗಿ ಪ್ರವಾದಿಯಾದ ಯೆಶಾಯನಿಂದ ಸೂಚಿತನಾದವನು ಇವನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 “ಸರ್ವೇಶ್ವರನಿಗೆ ಮಾರ್ಗವನ್ನು ನೇರಪಡಿಸಿರಿ, ಆತನ ಆಗಮನಕ್ಕಾಗಿ ಹಾದಿಯನ್ನು ಸರಾಗಮಾಡಿರಿ, ಎಂದು ಬೆಂಗಾಡಿನಲ್ಲೊಬ್ಬನು ಘೋಷಿಸುತ್ತಿದ್ದಾನೆ,” ಎಂದಾಗ ಪ್ರವಾದಿ ಯೆಶಾಯನು ಸೂಚಿಸಿದ ವ್ಯಕ್ತಿ ಈತನೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 “‘ಪ್ರಭುವಿಗಾಗಿ ಮಾರ್ಗವನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆಮಾಡಿರಿ’ ಎಂದು ಅಡವಿಯಲ್ಲಿ ಒಬ್ಬನು ಕೂಗುತ್ತಿದ್ದಾನೆ” ಎಂದು ಸ್ನಾನಿಕ ಯೋಹಾನನನ್ನೇ ಕುರಿತು ಪ್ರವಾದಿಯಾದ ಯೆಶಾಯ ಹೇಳಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 “ ‘ಕರ್ತದೇವರ ಮಾರ್ಗವನ್ನು ಸಿದ್ಧಮಾಡಿರಿ, ಅವರ ದಾರಿಗಳನ್ನು ಸರಾಗಮಾಡಿರಿ,’ ಎಂದು ಅರಣ್ಯದಲ್ಲಿ ಕೂಗುವ ಸ್ವರವು,” ಎಂದು ಪ್ರವಾದಿಯಾದ ಯೆಶಾಯನ ಮೂಲಕ ಸೂಚಿತನಾದವನು ಇವನೇ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಡಂಗ್ಳಿತ್ ಎಕ್ ಮಾನುಸ್ ಬೊಬ್ ಮಾರ್‍ತಲೆ ಆಯ್ಕೊ ಯೆತಾ, “ಧನಿಯಾಕ್ ಎಕ್ ವಾಟ್ ತಯಾರ್ ಕರಾ,” ತೊ ಯೆತಲೊ ಹಾಯ್ ತೆಕಾ ಯೆವ್ಕ್ ರಸ್ತೊ ನಿಟ್ ಕರಾ ಮನುನ್ ಇಸಾಯಿಯಾ ಪ್ರವಾದ್ಯಾನ್ ಸಾಂಗಟಲ್ಲೆ ಜುವಾಂವಾಚ್ಯಾಚ್ ವಿಶಯಾತ್. ಅಧ್ಯಾಯವನ್ನು ನೋಡಿ |