Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 3:4 - ಕನ್ನಡ ಸತ್ಯವೇದವು J.V. (BSI)

4 ಈ ಯೋಹಾನನಿಗೆ ಒಂಟೇ ಕೂದಲಿನ ಹೊದಿಕೆಯೂ ಸೊಂಟದಲ್ಲಿ ತೊಗಲಿನ ನಡುಕಟ್ಟೂ ಇದ್ದವು. ಅವನಿಗೆ ವಿುಡಿತೆ ಮತ್ತು ಕಾಡಜೇನು ಆಹಾರವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೋಹಾನನ ಉಡುಪು ಒಂಟೆಯ ಕೂದಲಿನಿಂದ ಮಾಡಿತ್ತು, ಅವನು ಸೊಂಟಕ್ಕೆ ಒಂದು ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆ ಮತ್ತು ಕಾಡುಜೇನು ಅವನ ಆಹಾರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಒಂಟೆ ತುಪ್ಪಟದ ಹೊದಿಕೆ, ಸೊಂಟದಲ್ಲಿ ತೊಗಲಿನ ನಡುಕಟ್ಟು - ಇವೇ ಈತನ ಉಡುಗೆ. ಮಿಡತೆ ಮತ್ತು ಕಾಡುಜೇನು ಇವೇ ಈತನ ಆಹಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೋಹಾನನ ಉಡುಪುಗಳು ಒಂಟೆಯ ಕೂದಲಿನಿಂದ ಮಾಡಲ್ಪಟ್ಟಿದ್ದವು. ಅವನಿಗೆ ಸೊಂಟದಲ್ಲಿ ತೊಗಲಿನ ನಡುಪಟ್ಟಿ ಇತ್ತು. ಅವನು ಮಿಡತೆ ಮತ್ತು ಕಾಡುಜೇನನ್ನು ಆಹಾರವಾಗಿ ತಿನ್ನುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೋಹಾನನ ಉಡುಪು ಒಂಟೆಯ ಕೂದಲಿನಿಂದ ಮಾಡಲಾಗಿತ್ತು. ಅವನು ಸೊಂಟಕ್ಕೆ ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆಗಳು ಮತ್ತು ಕಾಡುಜೇನು ಅವನ ಆಹಾರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಜುವಾಂವಾಕ್ ಒಂಟೆಚ್ಯಾ ಕೆಸಾನಿ ಕರಲ್ಲೆ ಕಪ್ಡೆ ನೆಸಲ್ಲ್ಯಾನ್, ಅನಿ ಕಂಬ್ರೆಕ್ ಚಮ್ಡ್ಯಾಚೊ ಪಟ್ಟೊ ಭಾಂದಲ್ಲ್ಯಾನ್, ಟುಪ್ಪುನ್ಯಾ ಅನಿ ಡಂಗ್ಳಿತ್ಲೆ ಮ್ಹಾವ್ ಖಾವ್ನ್ ತೊ ಜಿವನ್ ಕರುಕ್ ಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 3:4
12 ತಿಳಿವುಗಳ ಹೋಲಿಕೆ  

ಅವನು ಕಂಬಳಿಯನ್ನು ಹೊದ್ದುಕೊಂಡಿದ್ದನು; ಅವನ ಸೊಂಟಕ್ಕೆ ತೊಗಲಿನ ನಡುಕಟ್ಟು ಇತ್ತು ಎಂದು ಉತ್ತರಕೊಟ್ಟರು. ಅದಕ್ಕೆ ಅರಸನು - ಆ ಮನುಷ್ಯನು ತಿಷ್ಬೀಯನಾದ ಎಲೀಯನೇ ಆಗಿರಬೇಕು ಅಂದನು.


ಸಕಲವಿಧವಾದ ವಿುಡತೆಗಳನ್ನೂ ಬೋಳವಿುಡತೆಗಳನ್ನೂ ಜಿಟ್ಟಿವಿುಡತೆಗಳನ್ನೂ ಸಣ್ಣವಿುಡತೆಗಳನ್ನೂ ಇವುಗಳನ್ನೆಲ್ಲಾ ತಿನ್ನಬಹುದು.


ಈ ಯೋಹಾನನು ಒಂಟೆಯ ಕೂದಲಿನ ಹೊದಿಕೆಯನ್ನು ಹೊದ್ದುಕೊಂಡು ಸೊಂಟಕ್ಕೆ ತೊಗಲಿನ ನಡುಕಟ್ಟನ್ನು ಕಟ್ಟಿಕೊಂಡಿದ್ದನು; ಅವನು ವಿುಡಿತೆಯನ್ನೂ ಕಾಡುಜೇನನ್ನೂ ಆಹಾರ ಮಾಡುತ್ತಿದ್ದನು.


ಅಲ್ಲವಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಹಾಕಿಹೊಂಡ ಮನುಷ್ಯನನ್ನೋ? ನಯವಾದ ಉಡುಪನ್ನು ಉಟ್ಟುಕೊಂಡವರು ಅರಮನೆಗಳಲ್ಲಿ ಇರುತ್ತಾರಷ್ಟೆ.


ಆದಿನದಲ್ಲಿ ಯಾವ ಪ್ರವಾದಿಯೇ ಆಗಲಿ ಪ್ರವಾದನೆ ಮಾಡಬೇಕೆಂದಿರುವಾಗ ತನಗಾದ ದರ್ಶನವನ್ನು ಪ್ರಕಟಿಸಲು ನಾಚಿಕೆಪಡುವನು; ಯಾವನೂ ಮೋಸಕ್ಕಾಗಿ ಕಂಬಳಿಯನ್ನು ಹೊದ್ದುಕೊಳ್ಳನು;


ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಹಟಹಿಡಿದವರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ ಸಿದ್ಧವಾದ ಜನವನ್ನು ಕರ್ತನಿಗೆ ಒದಗಿಸುವನು ಎಂದು ಹೇಳಿದನು.


ನಾನು ಬಂದು ದೇಶವನ್ನು ಶಾಪದಿಂದ ಹತಮಾಡದಂತೆ ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವದಕ್ಕೆ ಮುಂಚೆಯೇ ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು;


ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣೀತಟ್ಟುಗಳನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರುವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಮಾಡುವೆನು.


ಹೇಗಂದರೆ ಯೋಹಾನನು ಬಂದನು, ಅವನು ಅನ್ನಪಾನಗಳನ್ನು ತೆಗೆದುಕೊಳ್ಳದವನಾಗಿದ್ದನು; ಅವರು ಅವನಿಗೆ - ದೆವ್ವ ಹಿಡಿದದೆ ಅನ್ನುತ್ತಾರೆ.


ಆತನು ಅವರನ್ನು ಭೂವಿುಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ ಅವರಿಗೆ ವ್ಯವಸಾಯವೃದ್ಧಿಯನ್ನುಂಟುಮಾಡಿ ಬಂಡೆಯಿಂದ ಜೇನೂ ಗಿರಿಯಿಂದ ಎಣ್ಣೆಯೂ ದೊರೆಯುವಂತೆ ಮಾಡಿದ್ದೂ;


ಯೆಹೋವನು ಆಮೋಚನ ಮಗನಾದ ಯೆಶಾಯನಿಗೆ - ಏಳು, ಸೊಂಟದಿಂದ ಗೋಣಿತಟ್ಟನ್ನು ಬಿಚ್ಚು, ಕಾಲಿನಿಂದ ಕೆರವನ್ನು ಕಳಚು ಎಂದು ಇತರರಿಗೆ ಸೂಚನೆಯಾಗಿ ಅಪ್ಪಣೆಕೊಟ್ಟನು. ಅವನು ಹಾಗೆಯೇ ಮಾಡಿ ಬೆತ್ತಲೆಯಾಗಿ ಕೆರವಿಲ್ಲದೆ ತಿರುಗುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು