Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 3:9 - ಕನ್ನಡ ಸತ್ಯವೇದವು J.V. (BSI)

9 ಅಬ್ರಹಾಮನು ನಮಗೆ ಮೂಲಪುರುಷನಲ್ಲವೇ ಎಂಬುವ ಆಲೋಚನೆಯನ್ನು ಬಿಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅಬ್ರಹಾಮನು ನಮ್ಮ ತಂದೆ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗಾಗಿ ಈ ಕಲ್ಲುಗಳಿಂದಲೂ ಮಕ್ಕಳನ್ನು ಸೃಷ್ಟಿಮಾಡಬಲ್ಲನೆಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ‘ಅಬ್ರಹಾಮನೇ ನಮ್ಮ ಪಿತಾಮಹ’ ಎಂದು ನಿಮ್ಮಲ್ಲೇ ಕೊಚ್ಚಿಕೊಳ್ಳಬೇಡಿ. ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಸಂತಾನ ಪ್ರಾಪ್ತವಾಗುವಂತೆ ಮಾಡಬಲ್ಲರೆಂದು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ‘ಅಬ್ರಹಾಮನು ನಮ್ಮ ತಂದೆ’ ಎಂದು ನೀವು ಜಂಬಪಡುವುದೇಕೆ? ದೇವರು ಅಬ್ರಹಾಮನಿಗಾಗಿ ಇಲ್ಲಿರುವ ಬಂಡೆಗಳಿಂದಲೂ ಮಕ್ಕಳನ್ನು ಸೃಷ್ಟಿಸಬಲ್ಲನು ಎಂದು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ‘ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ,’ ಎಂದು ನಿಮ್ಮೊಳಗೆ ಕೊಚ್ಚಿಕೊಳ್ಳಬೇಡಿರಿ. ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಮಕ್ಕಳನ್ನು ಹುಟ್ಟಿಸಲು ಶಕ್ತರೆಂದು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅಮಿ ಅಬ್ರಾಮಾಚ್ಯಾ ಘರಾನ್ಯಾಚೆ ಮನುನ್ ತುಮಿ ದೆವಾಚ್ಯಾ ಝಡ್ತಿತ್ನಾ ಬಚಾವ್ ಹೊತ್ಯಾಶಿ ಮನುನ್ ಚಿಂತುನಕಾಸಿ, ಮಿಯಾ ತುಮ್ಕಾ ಸಾಂಗುಚೆ ಜಾಲ್ಯಾರ್ ಹ್ಯಾ ಗುಂಡ್ಯಾತ್ನಾಬಿ ಅಬ್ರಾಹಾಮಾಕ್ ಪೊರಾ ದಿ ಸರ್ಕಿ ತಾಕತ್ ದೆವಾಕ್ ಹಾಯ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 3:9
22 ತಿಳಿವುಗಳ ಹೋಲಿಕೆ  

ಹಾಗಾದರೆ ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿತೆಂಬದನ್ನು ತಕ್ಕ ಫಲಗಳಿಂದ ತೋರಿಸಿರಿ. ಅಬ್ರಹಾಮನು ನಮಗೆ ಮೂಲಪುರುಷನಲ್ಲವೇ ಎಂದು ನಿಮ್ಮೊಳಗೆ ಅಂದುಕೊಳ್ಳುವವರಾಗಬೇಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ.


ಅದಕ್ಕವರು - ನಾವು ಅಬ್ರಹಾಮನ ಸಂತಾನದವರು; ನಾವು ಯಾರಿಗೂ ಎಂದೂ ದಾಸರಾಗಿಲ್ಲ; ನಿಮಗೆ ಬಿಡುಗಡೆಯಾಗುವದೆಂದು ನೀನು ಹೇಳುವದು ಹೇಗೆ? ಅಂದರು.


ಹಾಗಾದರೆ ವಂಶಾನುಕ್ರಮವಾಗಿ ನಮಗೆ ಮೂಲಪಿತೃವಾಗಿರುವ ಅಬ್ರಹಾಮನು ಏನು ಪಡಕೊಂಡನೆಂದು ಹೇಳಬೇಕು?


ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮಲ್ಲಿರುವ ಯೆಹೂದ್ಯ ಮತಾವಲಂಭಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿ ಅದೆ.


ತಂದೆಯೇ, ಅಬ್ರಹಾಮನೇ, ನನ್ನ ಮೇಲೆ ದಯವಿಟ್ಟು ಲಾಜರನನ್ನು ಕಳುಹಿಸು; ಅವನು ತನ್ನ ತುದಿಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ; ಈ ಉರಿಯಲ್ಲಿ ಸಂಕಟಪಡುತ್ತೇನೆ ಎಂದು ಕೂಗಿ ಹೇಳಿದನು.


ನಮ್ಮ ಮೂಲಪುರುಷನಾದ ಅಬ್ರಹಾಮನಿಗಿಂತ ನೀನು ದೊಡ್ಡವನೋ? ಅವನೂ ಸತ್ತುಹೋದನು, ಪ್ರವಾದಿಗಳೂ ಸತ್ತುಹೋದರು; ನಿನ್ನನ್ನು ಯಾರೆಂತ ಮಾಡಿಕೊಳ್ಳುತ್ತೀ ಎಂದು ಹೇಳಲು


ಆದರೆ ಅವರು ಹಾಗಂದುಕೊಳ್ಳುವದನ್ನು ಯೇಸು ತಿಳಿದುಕೊಂಡು ಅವರಿಗೆ - ನೀವು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳುವದೇನು? ಯಾವದು ಸುಲಭ?


ಒಳಗಿನಿಂದ ಅಂದರೆ ಮನುಷ್ಯರ ಮನಸ್ಸಿನೊಳಗಿಂದ


ನರಪುತ್ರನೇ, ಇಸ್ರಾಯೇಲ್ ಸೀಮೆಯ ಹಾಳು ಪ್ರದೇಶಗಳಲ್ಲಿ ವಾಸಿಸುವವರು - ಅಬ್ರಹಾಮನು ಒಂಟಿಗನಾಗಿದ್ದರೂ ಈ ದೇಶವು ಅವನಿಗೆ ಸ್ವಾಸ್ತ್ಯವಾಗಿ ಸಿಕ್ಕಿತಲ್ಲಾ; ಅದು ಬಹುಜನರಾದ ನಮಗೆ ಸ್ವಾಸ್ತ್ಯವಾಗಿ ಸಿಕ್ಕಿದ್ದು ಏನು ದೊಡ್ಡದು ಅಂದುಕೊಳ್ಳುತ್ತಿದ್ದಾರೆ.


ಸಹೋದರರೇ, ನಾನು ಹೇಳುವದನ್ನು ಕೇಳಿರಿ - ದೇವರು ಮೊದಲಲ್ಲಿ ಅನ್ಯಜನರನ್ನು ಕಟಾಕ್ಷಿಸಿನೋಡಿ ತನ್ನ ಹೆಸರಿಗಾಗಿ ಅವರೊಳಗಿಂದ ಒಂದು ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.


ಆತನು - ಇವರು ಸುಮ್ಮನಾದರೆ ಈ ಕಲ್ಲುಗಳೇ ಕೂಗುವವು ಎಂದು ನಿಮಗೆ ಹೇಳುತ್ತೇನೆ ಅಂದನು.


ಆದರೆ ಆತನನ್ನು ಊಟಕ್ಕೆ ಕರೆದ ಫರಿಸಾಯನು ಇದನ್ನು ಕಂಡು - ಇವಳು ದುರಾಚಾರಿ; ಇವನು ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟಿದ ಈ ಹೆಂಗಸು ಇಂಥವಳೆಂದು ತಿಳುಕೊಳ್ಳುತ್ತಿದ್ದನು ಅಂದುಕೊಂಡನು.


ಆಗ ಅವನು ತನ್ನೊಳಗೆ - ನಾನೇನು ಮಾಡಲಿ? ನನ್ನ ಬೆಳೆಯನ್ನು ತುಂಬಿಡುವದಕ್ಕೆ ನನಗೆ ಸ್ಥಳವಿಲ್ಲವಲ್ಲಾ ಎಂದು ಆಲೋಚಿಸಿ - ಒಂದು ಕೆಲಸ ಮಾಡುತ್ತೇನೆ;


ನೀವು ಅಬ್ರಹಾಮನ ಸಂತಾನದವರು ನಿಜ; ಆದರೂ ನನ್ನ ವಾಕ್ಯವು ನಿಮ್ಮಲ್ಲಿ ಸಾಗದೆ ಇರುವ ಕಾರಣ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು