ಮತ್ತಾಯ 4:10 - ಕನ್ನಡ ಸತ್ಯವೇದವು J.V. (BSI)10 ಯೇಸು ಅವನಿಗೆ - ಸೈತಾನನೇ, ನೀನು ತೊಲಗಿ ಹೋಗು. ನಿನ್ನ ದೇವರಾಗಿರುವ ಕರ್ತನಿಗೆ ಅಡ್ಡಬಿದ್ದು ಆತನೊಬ್ಬನನ್ನೇ ಆರಾಧಿಸಬೇಕು ಎಂಬದಾಗಿ ಬರೆದದೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೇಸು ಅವನಿಗೆ, “ಸೈತಾನನೇ, ನೀನು ತೊಲಗಿ ಹೋಗು. ‘ನಿನ್ನ ದೇವರಾಗಿರುವ ಕರ್ತನನ್ನು ಮಾತ್ರ ಆರಾಧಿಸಬೇಕು ಆತನೊಬ್ಬನನ್ನೇ ಸೇವಿಸಬೇಕು’ ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸೈತಾನನೇ, ತೊಲಗು. ‘ನಿನ್ನ ದೇವರಾದ ಸರ್ವೇಶ್ವರನನ್ನು ಆರಾಧಿಸು. ಅವರೊಬ್ಬರಿಗೇ ಸೇವೆಸಲ್ಲಿಸು,’ ಎಂದೂ ಪವಿತ್ರಗ್ರಂಥದಲ್ಲಿ ಬರೆದಿದೆ,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೇಸು ಸೈತಾನನಿಗೆ, “ಇಲ್ಲಿಂದ ತೊಲಗು! ‘ನಿನ್ನ ದೇವರಾದ ಪ್ರಭುವನ್ನೇ ಆರಾಧಿಸಬೇಕು, ಆತನೊಬ್ಬನನ್ನೇ ಸೇವಿಸಬೇಕು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯೇಸು ಅವನಿಗೆ, “ಸೈತಾನನೇ, ತೊಲಗು. ಏಕೆಂದರೆ, ‘ನಿನ್ನ ಕರ್ತದೇವರನ್ನು ಆರಾಧಿಸಿ, ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು,’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ತನ್ನಾ ಜೆಜುನ್, “ಸೈತಾನಾ ಮಾಜ್ಯಾಕ್ನಾ ಧುರ್ ಜಾ, ಪವಿತ್ರ್ ಪುಸ್ತಕ್ ಸಾಂಗ್ತಾ, ಸರ್ವೆಸ್ವರಾ ತುಜ್ಯಾ ದೆವಾಚೆ ಎಕ್ಲ್ಯಾಚೆಚ್ ಪಾಯ್ ಪಡ್, ಅನಿ ತೆಚಿ ಎಕ್ಲ್ಯಾಚಿಚ್ ಸೆವಾ ಕರ್.” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |
ಈ ಕಾರಣದಿಂದಲೂ ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವದರಿಂದಲೂ ನಾನು ಹೊಗಳಿಕೊಳ್ಳದೆ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲ ನನ್ನ ಶರೀರದಲ್ಲಿ ನಾಟಿದೆಯೋ ಎಂಬಂತೆ ನನ್ನನ್ನು ಗುದ್ದುವದಕ್ಕೆ ಸೈತಾನನ ದೂತರಲ್ಲಿ ಒಬ್ಬನು ನನ್ನ ಬಳಿಗೆ ಕಳುಹಿಸಲ್ಪಟ್ಟನು; ನಾನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂತಲೇ ಇದಾಯಿತು.