Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 4:11 - ಕನ್ನಡ ಸತ್ಯವೇದವು J.V. (BSI)

11 ಆಗ ಸೈತಾನನು ಆತನನ್ನು ಬಿಟ್ಟುಬಿಟ್ಟನು. ಮತ್ತು ದೇವದೂತರು ಬಂದು ಆತನಿಗೆ ಉಪಚಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಸೈತಾನನು ಆತನನ್ನು ಬಿಟ್ಟು ಹೊರಟು ಹೋದನು, ಆಗ ದೇವದೂತರು ಬಂದು ಆತನಿಗೆ ಉಪಚಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಗ ಪಿಶಾಚಿ ಯೇಸುವನ್ನು ಬಿಟ್ಟು ತೊಲಗಿತು. ದೇವದೂತರು ಬಂದು ಅವರನ್ನು ಉಪಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದ್ದರಿಂದ ಸೈತಾನನು ಯೇಸುವನ್ನು ಬಿಟ್ಟುಹೋದನು. ಆಗ ಕೆಲವು ದೇವದೂತರು ಬಂದು ಆತನನ್ನು ಉಪಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಸೈತಾನನು ಯೇಸುವನ್ನು ಬಿಟ್ಟುಹೋದನು. ದೇವದೂತರು ಬಂದು ಅವರಿಗೆ ಉಪಚಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತನ್ನಾ ಗಿರೊ ಜೆಜುಕ್ ಸೊಡುನ್ ಗೆಲೊ; ತನ್ನಾ ದೆವಾಚಿ ದುತಾ ಯೆಲಿ, ಅನಿ ತೆಚಿ ಮಜತ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 4:11
13 ತಿಳಿವುಗಳ ಹೋಲಿಕೆ  

ನಾನು ನನ್ನ ತಂದೆಯನ್ನು ಬೇಡಿಕೊಳ್ಳಲಾರೆನೆಂದೂ ಬೇಡಿಕೊಂಡರೆ ಆತನು ನನಗೆ ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚು ಮಂದಿ ದೇವದೂತರನ್ನು ಕಳುಹಿಸಿಕೊಡುವದಿಲ್ಲವೆಂದೂ ನೆನಸುತ್ತೀಯಾ?


ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಡುವ ಊಳಿಗದ ಆತ್ಮಗಳಲ್ಲವೋ?


ಆಗ ಪರಲೋಕದಿಂದ ಬಂದ ಒಬ್ಬ ದೇವದೂತನು ಆತನಿಗೆ ಕಾಣಿಸಿಕೊಂಡು ಆತನನ್ನು ಬಲಪಡಿಸಿದನು.


ಸೈತಾನನು ಸಕಲವಿಧವಾದ ಶೋಧನೆಯನ್ನು ಮುಗಿಸಿ ಸ್ವಲ್ಪಕಾಲ ಆತನನ್ನು ಬಿಟ್ಟು ಹೊರಟುಹೋದನು.


ಇದಲ್ಲದೆ ಆತನು ತನ್ನ ಚೊಚ್ಚಲ ಮಗನನ್ನು ಭೂಲೋಕದೊಳಗೆ ತಿರಿಗಿ ಬರಮಾಡುವಾಗ ದೇವರ ದೂತರೆಲ್ಲರೂ ಆತನಿಗೆ ಅಡ್ಡ ಬೀಳಲಿ ಎಂದು ಹೇಳುತ್ತಾನೆ.


ಇನ್ನು ನಾನು ನಿಮ್ಮ ಸಂಗಡ ಬಹಳ ಮಾತುಗಳನ್ನಾಡುವದಿಲ್ಲ, ಯಾಕಂದರೆ ಇಹಲೋಕಾಧಿಪತಿಯು ಬರುತ್ತಾನೆ. ಅವನಿಗೆ ಸಂಬಂಧಪಟ್ಟದ್ದು ಯಾವದೊಂದೂ ನನ್ನಲ್ಲಿಲ್ಲ;


ನಾನು ದಿನಾಲು ದೇವಾಲಯದಲ್ಲಿ ನಿಮ್ಮ ಸಂಗಡ ಇದ್ದಾಗ ನೀವು ನನ್ನ ಮೇಲೆ ಕೈಹಾಕಲಿಲ್ಲ; ಆದರೆ ಇದು ನಿಮ್ಮ ಕಾಲ, ಇದು ಅಂಧಕಾರದ ದೊರೆತನ ಎಂದು ಹೇಳಿದನು.


ಆತನು ನಾಲ್ವತ್ತು ದಿವಸ ಅಡವಿಯಲ್ಲಿ ಮೃಗಗಳೊಂದಿಗೆ ಇದ್ದು ಸೈತಾನನಿಂದ ಶೋಧಿಸಲ್ಪಡುವವನಾದನು; ಮತ್ತು ದೇವದೂತರು ಆತನಿಗೆ ಉಪಚಾರಮಾಡಿದರು.


ನೀನು ದೇವರ ಮಗನಾಗಿದ್ದರೆ ಕೆಳಕ್ಕೆ ದುಮುಕು; ಆತನು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು; ನಿನ್ನ ಕಾಲು ಕಲ್ಲಿಗೆ ತಗಲೀತೆಂದು ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು ಎಂಬದಾಗಿ ಬರೆದದೆಯಲ್ಲಾ ಎಂದು ಹೇಳಿದನು.


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥವು ಗಂಭೀರವಾದದ್ದೆಂಬದಕ್ಕೆ ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ; ಅದೇನಂದರೆ - ಆತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮ ಸಂಬಂಧವಾಗಿ ಆತನೇ ಎಂದು ಸ್ಥಾಪಿಸಲ್ಪಟ್ಟನು; ದೇವದೂತರಿಗೆ ಕಾಣಿಸಿಕೊಂಡನು; ಅನ್ಯಜನರಲ್ಲಿ ಪ್ರಸಿದ್ಧಿ ಮಾಡಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಪ್ರಭಾವಸ್ಥಾನದಲ್ಲಿ ಸೇರಿಸಲ್ಪಟ್ಟನು.


ಎಲೀಯನು ಎದ್ದು ನೋಡಲಾಗಿ ಕೆಂಡದ ಮೇಲೆ ಸುಟ್ಟ ರೊಟ್ಟಿಯೂ ಒಂದು ತಂಬಿಗೆ ನೀರೂ ತನ್ನ ತಲೆಯ ಹತ್ತಿರ ಇರುವದನ್ನು ಕಂಡು ಅವುಗಳನ್ನು ತೆಗೆದುಕೊಂಡು ತಿಂದು ಕುಡಿದು ತಿರಿಗಿ ಮಲಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು