Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 4:13 - ಕನ್ನಡ ಸತ್ಯವೇದವು J.V. (BSI)

13 ಬಳಿಕ ನಜರೇತೆಂಬ ಊರನ್ನು ಬಿಟ್ಟು ಜೆಬುಲೋನ್ ನೆಫ್ತಲೀಮ್ ಎಂಬ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನೌಮೆಂಬ ಊರಿನಲ್ಲಿ ಮನೆಮಾಡಿಕೊಂಡು ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಬಳಿಕ ನಜರೇತೆಂಬ ಊರನ್ನು ಬಿಟ್ಟು ಜೆಬುಲೋನ್‌ ಮತ್ತು ನಫ್ತಾಲಿಯರ ಗಡಿ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನೌಮೆಂಬ ಊರಿನಲ್ಲಿ ವಾಸಿಸತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಜರೇತ್ ಊರಿನಲ್ಲಿ ತಂಗದೆ ಗಲಿಲೇಯ ಸರೋವರದ ಸಮೀಪದಲ್ಲಿರುವ ಕಫೆರ್ನವುಮ್ ಎಂಬ ಊರಿನಲ್ಲಿ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆತನು ನಜರೇತಿನಲ್ಲಿ ಇಳಿದುಕೊಳ್ಳದೆ ಹೊರಟುಹೋಗಿ ಗಲಿಲಾಯ ಸರೋವರಕ್ಕೆ ಹತ್ತಿರವಿದ್ದ ಕಪೆರ್ನೌಮ್ ಎಂಬ ಊರಲ್ಲಿ ವಾಸಿಸಿದನು. ಈ ಊರು ಜೆಬುಲೋನ್ ಮತ್ತು ನಫ್ತಾಲಿ ಸೀಮೆಗಳ ಬಳಿಯಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಬಳಿಕ ನಜರೇತನ್ನು ಬಿಟ್ಟು, ಜೆಬುಲೂನ್ ಮತ್ತು ನೆಫ್ತಲೀಮ್ ಪ್ರಾಂತಗಳಿಗೆ ಬಂದು ಸರೋವರದ ಬಳಿಯಲ್ಲಿದ್ದ ಕಪೆರ್ನೌಮ್ ಎಂಬ ಊರಿನಲ್ಲಿ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತೊ ನಜರೆತ್ ಮನ್ತಲ್ಯಾ ಗಾಂವಾತ್ ರ್‍ಹಾವ್ಕ್ ನಾ. ತೊ ಗಾಲಿಲಿಯಾ ಸಮುಂದರಾಚ್ಯಾ ಜಗ್ಗೊಳ್ ಹೊತ್ತ್ಯಾ ಜಬುಲುನ್ ಅನಿ ನಫ್ತಾಲಿ ಮನ್ತಲ್ಯಾ ಪ್ರಾಂತ್ಯಾತ್ ಹೊತ್ತ್ಯಾ ಕಫರ್‍ನವ್ ಮನ್ತಲ್ಯಾ ಮೊಟ್ಯಾ ಗಾಂವಾತ್ ಜಾವ್ನ್ ರ್‍ಹಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 4:13
17 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ಯೇಸು, ತಾನು ನೀರನ್ನು ದ್ರಾಕ್ಷಾರಸವಾಗಿ ಮಾಡಿದ ಗಲಿಲಾಯದ ಕಾನಾ ಊರಿಗೆ ಮತ್ತೊಮ್ಮೆ ಬಂದನು. ಅಲ್ಲಿದ್ದಾಗ ಅರಮನೆಯ ಒಬ್ಬ ಪ್ರಧಾನನ ಮಗನು ಕಪೆರ್ನೌವಿುನಲ್ಲಿ ಅಸ್ವಸ್ಥನಾಗಿದ್ದನು.


ಬಳಿಕ ಅವರು ಕಪೆರ್ನೌಮೆಂಬ ಊರಿಗೆ ಸೇರಿದರು. ಕೂಡಲೆ ಸಬ್ಬತ್‍ದಿನದಲ್ಲಿ ಯೇಸು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡಿದನು.


ಎಲಾ ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಪಾತಾಳಕ್ಕೇ ಇಳಿಯುವಿ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋವಿುನಲ್ಲಿ ನಡೆದಿದ್ದರೆ ಅದು ಇಂದಿನವರೆಗೂ ಉಳಿಯುತ್ತಿತ್ತು.


ಕಪೆರ್ನೌವಿುನ ಸಭಾಮಂದಿರದಲ್ಲಿ ಉಪದೇಶ ಮಾಡುವಾಗ ಇದನ್ನು ಹೇಳಿದನು.


ಹೀಗಿರಲಾಗಿ ಯೇಸು ಇಲ್ಲಿ ಇಲ್ಲ, ಆತನ ಶಿಷ್ಯರೂ ಇಲ್ಲ ಎಂದು ಆ ಜನರು ನೋಡಿ ತಾವೇ ಆ ಸಣ್ಣ ದೋಣಿಗಳನ್ನು ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌವಿುಗೆ ಬಂದರು.


ಸಮುದ್ರಮಾರ್ಗವಾಗಿ ಕಪೆರ್ನೌವಿುನ ಕಡೆಗೆ ಹೊರಟರು. ಆಗಲೇ ಕತ್ತಲಾಗಿತ್ತು ಮತ್ತು ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ.


ಇದಾದ ಮೇಲೆ ಆತನೂ ಆತನ ತಾಯಿಯೂ ತಮ್ಮಂದಿರೂ ಆತನ ಶಿಷ್ಯರೂ ಘಟ್ಟಾ ಇಳಿದು ಕಪೆರ್ನೌವಿುಗೆ ಹೋಗಿ ಅಲ್ಲಿ ಕೆಲವು ದಿವಸ ಇದ್ದರು.


ಅವರು ಕಪೆರ್ನೌವಿುಗೆ ಬಂದಾಗ ದೇವಾಲಯಕ್ಕಾಗಿ ತೆರಿಗೆಯನ್ನು ಎತ್ತುವವರು ಪೇತ್ರನ ಬಳಿಗೆ ಬಂದು - ನಿಮ್ಮ ಬೋಧಕನು ದೇವಾಲಯದ ತೆರಿಗೆಯನ್ನು ಸಲ್ಲಿಸುವದಿಲ್ಲವೇ ಎಂದು ಕೇಳಲು - ಹೌದು, ಸಲ್ಲಿಸುವನು ಅಂದನು.


ಆತನು ಅವರಿಗೆ - ನೀವಂತೂ ವೈದ್ಯನೇ, ನಿನ್ನನ್ನೇ ವಾಸಿಮಾಡಿಕೋ ಎಂಬ ಗಾದೆಯನ್ನು ನನಗೆ ಹೇಳಿ ಕಪೆರ್ನೌವಿುನಲ್ಲಿ ಎಂಥೆಂಥ ಕಾರ್ಯಗಳು ನಡೆದವೆಂದು ನಾವು ಕೇಳಿದೆವೋ ಅಂಥವುಗಳನ್ನು ಈ ನಿನ್ನ ಸ್ವಂತ ಸ್ಥಳದಲ್ಲಿ ಮಾಡು ಅನ್ನುವಿರಷ್ಟೆ.


ಇದರಿಂದ ಯೆಶಾಯನೆಂಬ ಪ್ರವಾದಿಯ ಮುಖಾಂತರ ಹೇಳಿಸಿರುವ ಮಾತು ನೆರವೇರಿತು; ಆ ಮಾತು ಏನಂದರೆ -


ಜೆಬುಲೋನ್ ಸೀಮೆ ಮತ್ತು ನೆಫ್ತಲೀಮ್ ಸೀಮೆ, ಯೊರ್ದನಿನ ಆಚೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ,


ಆತನು ದೋಣಿಯನ್ನು ಹತ್ತಿ ಸಮುದ್ರವನ್ನು ದಾಟಿ ತನ್ನ ಊರಿಗೆ ಬಂದನು.


ಕೆಲವು ದಿನಗಳಾದ ಮೇಲೆ ಆತನು ಕಪೆರ್ನೌವಿುಗೆ ತಿರಿಗಿ ಬಂದನು. ಮನೆಯಲ್ಲಿದ್ದಾನೆಂಬ ವರ್ತಮಾನವು ಹಬ್ಬಿದಾಗ ಬಹುಜನರು ಕೂಡಿ ಬಂದಿದ್ದರಿಂದ ಬಾಗಿಲಿನ ಬಳಿಯಲ್ಲಾದರೂ ಸ್ಥಳವಿರಲಿಲ್ಲ.


ಎಲಾ ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಪಾತಾಳಕ್ಕೇ ಇಳಿಯುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು