Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 4:15 - ಕನ್ನಡ ಸತ್ಯವೇದವು J.V. (BSI)

15 ಜೆಬುಲೋನ್ ಸೀಮೆ ಮತ್ತು ನೆಫ್ತಲೀಮ್ ಸೀಮೆ, ಯೊರ್ದನಿನ ಆಚೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ಜೆಬುಲೋನ್ ಸೀಮೆ ಮತ್ತು ನಫ್ತಾಲಿ ಸೀಮೆ, ಯೊರ್ದನಿನ ಆಚೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಹೀಗೆ: “ಜೆಬುಲೋನ್ ನಾಡೇ, ನೆಫ್ತಲೀಮ್ ನಾಡೇ, ಸರೋವರದ ಹತ್ತಿರವಿರುವ ಹಾದಿಬೀದಿಯೇ, ಜೋರ್ಡನಿನ ಹೊರವಲಯವೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಜೆಬುಲೋನ್ ಸೀಮೆಯ, ನಫ್ತಾಲಿ ಸೀಮೆಯ, ಜೋರ್ಡನ್ನಿನ ಆಚೆ ಸೀಮೆಯ, ಸಮುದ್ರದ ಕಡೆಗಿರುವ ಸೀಮೆಯ, ಯೆಹೂದ್ಯರಲ್ಲದ ಗಲಿಲಾಯ ಸೀಮೆಯ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಜೆಬುಲೂನ್ ನಾಡು ಮತ್ತು ನೆಫ್ತಲೀಮ್ ನಾಡು, ಯೊರ್ದನ್ ನದಿಯ ಆಚೆ ಸರೋವರದ ಕಡೆ, ಯೆಹೂದ್ಯರಲ್ಲದವರಿರುವ ಗಲಿಲಾಯ ನಾಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 “ಸಮುಂದರಾಚ್ಯಾ ರಸ್ತ್ಯಾ ವರ್‍ತಿ ಜೊರ್ದಾನ್ ನ್ಹಯ್ಚ್ಯಾ ತಿಕುಲ್ಯಾ ಬಾಜುಕ್ ಹೊತ್ತ್ಯಾ ಜಬುಲುನ್ ಅನಿ ನಫ್ತಾಲಿಚ್ಯಾ ಪ್ರಾಂತ್ಯಾ, ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಗಾಲಿಲಿಯಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 4:15
9 ತಿಳಿವುಗಳ ಹೋಲಿಕೆ  

ಆದರೆ ಸಂಕಟಪಟ್ಟ ದೇಶಕ್ಕೆ ಅಂಧಕಾರವಿನ್ನಿಲ್ಲ. ಪೂರ್ವಕಾಲದಲ್ಲಿ ಜೆಬುಲೋನ್ ಮತ್ತು ನಫ್ತಾಲಿ ಸೀಮೆಗಳನ್ನು ಆತನು ಅವಮಾನಕ್ಕೆ ಗುರಿಮಾಡಿದನು; ಅನಂತರದಲ್ಲಿ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿಗಿರುವ ಗಲಿಲಾಯ ಸೀಮೆ ಈ ಪ್ರಾಂತವನ್ನೆಲ್ಲಾ ಘನಪಡಿಸಿದ್ದಾನೆ.


ನಫ್ತಾಲಿ ಸ್ವಾಸ್ತ್ಯದಿಂದ ಕೊಲೆಮಾಡಿದವನ ಆಶ್ರಯನಗರವಾದ ಗಲಿಲಾಯದ ಕೆದೆಷ್, ಹಮ್ಮೋತ್‍ದೋರ್, ಕರ್ತಾನ್ ಎಂಬ ಗೋಮಾಳಸಹಿತವಾದ ಮೂರು ಪಟ್ಟಣಗಳೂ ದೊರಕಿದವು.


ಇಸ್ರಾಯೇಲ್ಯರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಗಿಲ್ಯಾದ್, ಗಲಿಲಾಯ ಪ್ರಾಂತಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡುಹೋದನು.


ತನಗೆ ಬೇಕಾದಷ್ಟು ದೇವದಾರು ಮರಗಳನ್ನೂ ತುರಾಯಿ ಮರಗಳನ್ನೂ ಬಂಗಾರವನ್ನೂ ಕೊಟ್ಟಂಥ ತೂರಿನ ಅರಸನಾದ ಹೀರಾಮನಿಗೆ ಗಲಿಲಾಯ ಪ್ರಾಂತದಲ್ಲಿನ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.


ಇಸ್ರಾಯೇಲ್ಯರು ನಫ್ತಾಲಿಕುಲದವರ ಪರ್ವತಪ್ರದೇಶವಾದ ಗಲಿಲಾಯ ಪ್ರಾಂತದಲ್ಲಿ ಕೆದೆಷ್, ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಶೆಕೆಮ್, ಯೆಹೂದ್ಯರ ಬೆಟ್ಟದ ಸೀಮೆಯಲ್ಲಿ ಹೆಬ್ರೋನ್ ಅನ್ನಿಸಿಕೊಳ್ಳುವ ಕಿರ್ಯತರ್ಬ ಎಂಬೀ ಪಟ್ಟಣಗಳನ್ನು ನೇವಿುಸಿದರು.


ಬಳಿಕ ನಜರೇತೆಂಬ ಊರನ್ನು ಬಿಟ್ಟು ಜೆಬುಲೋನ್ ನೆಫ್ತಲೀಮ್ ಎಂಬ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನೌಮೆಂಬ ಊರಿನಲ್ಲಿ ಮನೆಮಾಡಿಕೊಂಡು ಇದ್ದನು.


ಇದರಿಂದ ಯೆಶಾಯನೆಂಬ ಪ್ರವಾದಿಯ ಮುಖಾಂತರ ಹೇಳಿಸಿರುವ ಮಾತು ನೆರವೇರಿತು; ಆ ಮಾತು ಏನಂದರೆ -


ಮತ್ತು ಗಲಿಲಾಯ ದೆಕಪೊಲಿ ಯೆರೂಸಲೇಮ್ ಯೂದಾಯ ಎಂಬೀ ಸ್ಥಳಗಳಿಂದಲೂ ಯೊರ್ದನ್ ಹೊಳೆಯ ಆಚೇಕಡೆಯಿಂದಲೂ ಜನರು ಗುಂಪುಗುಂಪಾಗಿ ಆತನ ಹಿಂದೆ ಹೋದರು.


ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು