Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 4:5 - ಕನ್ನಡ ಸತ್ಯವೇದವು J.V. (BSI)

5 ಆಗ ಸೈತಾನನು ಆತನನ್ನು ಪರಿಶುದ್ಧ ಪಟ್ಟಣಕ್ಕೆ ಕರಕೊಂಡು ಹೋಗಿ ದೇವಾಲಯದ ಶಿಖರದ ಮೇಲೆ ನಿಲ್ಲಿಸಿ ಆತನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಸೈತಾನನು ಯೇಸುವನ್ನು ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡು ಹೋಗಿ ದೇವಾಲಯದ ಗೋಪುರದ ಮೇಲೆ ನಿಲ್ಲಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಬಳಿಕ ಪಿಶಾಚಿ ಅವರನ್ನು ಪವಿತ್ರ ನಗರಕ್ಕೆ ಅಂದರೆ ಜೆರುಸಲೇಮಿಗೆ ಕರೆದೊಯ್ದು ಮಹಾದೇವಾಲಯದ ಗೋಪುರದ ತುದಿಯ ಮೇಲೆ ನಿಲ್ಲಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಸೈತಾನನು ಯೇಸುವನ್ನು ಪರಿಶುದ್ಧ ಪಟ್ಟಣವಾದ ಜೆರುಸಲೇಮಿಗೆ ಕರೆದುಕೊಂಡು ಹೋಗಿ, ದೇವಾಲಯದ ಅತಿ ಎತ್ತರವಾದ ಸ್ಥಳದಲ್ಲಿ ನಿಲ್ಲಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಮೇಲೆ ಸೈತಾನನು ಯೇಸುವನ್ನು ಪವಿತ್ರ ನಗರಕ್ಕೆ ಕರೆದುಕೊಂಡು ಹೋಗಿ ದೇವಾಲಯದ ಅತಿ ಎತ್ತರವಾದ ಶಿಖರದ ಮೇಲೆ ನಿಲ್ಲಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತನ್ನಾ ಗಿರೊ ಜೆಜುಕ್ ಪವಿತ್ರ್ ಶಾರ್ ಜೆರುಜಲೆಮಾಕ್ ಘೆವ್ನ್ ಗೆಲ್ಯಾನ್, ಅನಿ ದೆವಾಚ್ಯಾ ಗುಡಿಚ್ಯಾ ಎಗ್ದಮ್ ವೈಲ್ಯಾ ಜಾಗ್ಯಾ ವರ್‍ತಿ ನ್ಹೆಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 4:5
11 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ಆತನನ್ನು ಯೆರೂಸಲೇವಿುಗೆ ಕರೆದುಕೊಂಡು ಹೋಗಿ ದೇವಾಲಯದ ಶಿಖರದ ಮೇಲೆ ನಿಲ್ಲಿಸಿ ಆತನಿಗೆ - ನೀನು ದೇವರ ಮಗನಾಗಿದ್ದರೆ ಇಲ್ಲಿಂದ ಕೆಳಕ್ಕೆ ದುಮುಕು.


ಆಲಯಕ್ಕೆ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಅದು ಅನ್ಯಜನರಿಗಾಗಿ ಬಿಟ್ಟದೆ; ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.


ಮತ್ತು ಆತನು ಎದ್ದ ಮೇಲೆ ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.


ಇವರು ತಮ್ಮನ್ನು ಪರಿಶುದ್ಧ ಪಟ್ಟಣದವರು ಎಂದುಕೊಂಡು ದೇವರು ಇಸ್ರಾಯೇಲಿನವನೇ ಎಂದು ಆತನ ಮೇಲೆ ಭರವಸವಿಟ್ಟುಕೊಂಡಿರುತ್ತಾರೆ. ಆತನ ಹೆಸರೋ ಸಕಲ ಸೈನ್ಯಗಳ ಅಧೀಶ್ವರನಾದ ಯೆಹೋವನೆಂಬದು.


ಅದಕ್ಕೆ ಯೇಸು - ಮೇಲಣಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪ ಉಂಟು ಅಂದನು.


ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತೀರಿಸುವದು, ಅಪರಾಧವನ್ನು ನಿವಾರಿಸುವದು, ಸನಾತನ ಧರ್ಮವನ್ನು ಸ್ಥಾಪಿಸುವದು, ಕನಸನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವದು, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವದು, ಇವೆಲ್ಲಾ ನೆರವೇರುವದಕ್ಕೆ ಮೊದಲು ನಿನ್ನ ಜನಕ್ಕೂ ನಿನ್ನ ಪರಿಶುದ್ಧಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಕರ್ತನೇ, ನಿನ್ನ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿನ್ನ ಪಟ್ಟಣವೂ ನಿನ್ನ ಪವಿತ್ರಪರ್ವತವೂ ಆದ ಯೆರೂಸಲೇವಿುನ ಮೇಲಣ ನಿನ್ನ ಕೋಪವನ್ನು, ನಿನ್ನ ರೋಷಾಗ್ನಿಯನ್ನು ದಯಮಾಡಿ ತೊಲಗಿಸಿಬಿಡು; ನಮ್ಮ ಮತ್ತು ನಮ್ಮ ಪಿತೃಗಳ ಪಾಪಾಪರಾಧಗಳ ನಿವಿುತ್ತ ಯೆರೂಸಲೇಮೂ ನಿನ್ನ ಜನವೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆಯಲ್ಲಾ.


ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಚಂದದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡರು.


ಪರಿಶುದ್ಧ ನಗರದಲ್ಲಿದ್ದ ಎಲ್ಲಾ ಲೇವಿಯರು ಇನ್ನೂರೆಂಭತ್ತನಾಲ್ಕು ಮಂದಿ.


ಇಸ್ರಾಯೇಲ್ಯರ ಪ್ರಭುಗಳು ಮಾತ್ರ ಯೆರೂಸಲೇವಿುನಲ್ಲಿ ವಾಸಿಸುತ್ತಿದ್ದರು. ಉಳಿದ ಜನರೊಳಗೆ ಹತ್ತತ್ತು ಮಂದಿಯಲ್ಲಿ ಒಂಭತ್ತು ಮಂದಿ ತಮ್ಮ ತಮ್ಮ ಊರುಗಳಲ್ಲಿದ್ದುಕೊಂಡು ಒಬ್ಬನು ಪವಿತ್ರನಗರವಾಗಿರುವ ಯೆರೂಸಲೇವಿುನಲ್ಲಿ ವಾಸಿಸುವದಕ್ಕಾಗಿ ಅಲ್ಲಿಗೆ ಬರುವಂತೆ ಚೀಟುಹಾಕಿ ಗೊತ್ತು ಮಾಡಿದರು.


ಅಗಲವು ಇಪ್ಪತ್ತು ಮೊಳ, ದೇವಾಲಯದ ಮುಂದುಗಡೆಯಲ್ಲಿದ್ದ ಮಂಟಪದ ಉದ್ದವು ಆಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ, ಎತ್ತರವು ಇಪ್ಪತ್ತು ಮೊಳ. ಸೊಲೊಮೋನನು ಅದರ ಒಳಮೈಯನ್ನು ಚೊಕ್ಕಬಂಗಾರದ ತಗಡಿನಿಂದ ಹೊದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು