Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 4:6 - ಕನ್ನಡ ಸತ್ಯವೇದವು J.V. (BSI)

6 ನೀನು ದೇವರ ಮಗನಾಗಿದ್ದರೆ ಕೆಳಕ್ಕೆ ದುಮುಕು; ಆತನು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು; ನಿನ್ನ ಕಾಲು ಕಲ್ಲಿಗೆ ತಗಲೀತೆಂದು ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು ಎಂಬದಾಗಿ ಬರೆದದೆಯಲ್ಲಾ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೇಸುವಿಗೆ, “ನೀನು ದೇವರ ಮಗನೇ ಆಗಿದ್ದರೆ ಇಲ್ಲಿಂದ ಕೆಳಕ್ಕೆ ದುಮುಕು; ‘ದೇವರು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು; ನಿನ್ನ ಕಾಲು ಕಲ್ಲಿಗೆ ತಗಲದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು’ ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ನೀನು ದೇವರ ಪುತ್ರನೆಂಬುದು ಸತ್ಯವಾದರೆ ಕೆಳಕ್ಕೆ ಧುಮುಕು. ಏಕೆಂದರೆ, ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ, ‘ದೇವರೇ ತಮ್ಮ ದೂತರಿಗೆ ಆಜ್ಞೆಮಾಡುವರು’ ಮತ್ತು ‘ಇವರು ನಿನ್ನ ಕಾಲುಗಳು ಕಲ್ಲುಗಳಿಗೆ ತಾಕದಂತೆ ನಿನ್ನನ್ನು ಕೈಗಳಲ್ಲಿ ಆತುಕೊಳ್ಳುವರು’,” ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ನೀನು ದೇವರ ಮಗನಾಗಿದ್ದರೆ, ಕೆಳಕ್ಕೆ ದುಮುಕು. ‘ದೇವರು ನಿನಗೋಸ್ಕರ ತನ್ನ ದೂತರಿಗೆ ಆಜ್ಞಾಪಿಸುವನು. ನಿನ್ನ ಪಾದಗಳು ಬಂಡೆಗೆ ಅಪ್ಪಳಿಸದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆಯಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ನೀನು ದೇವರ ಪುತ್ರನಾಗಿದ್ದರೆ, ಕೆಳಕ್ಕೆ ಧುಮುಕು. ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ: “ ‘ದೇವರು ನಿನ್ನ ವಿಷಯವಾಗಿ ತಮ್ಮ ದೂತರಿಗೆ ಆಜ್ಞಾಪಿಸುವರು, ನಿನ್ನ ಪಾದಗಳು ಕಲ್ಲಿಗೆ ತಗಲದಂತೆ ದೂತರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು,’” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅನಿ ತೆಕಾ ತಿಯಾ ದೆವಾಚೊ ಲೆಕ್ ಜಾಲ್ಯಾರ್, ಹಿತ್ನಾ ಖಾಲ್ತಿ ಹುಡಿ ಮಾರ್, ಪವಿತ್ರ್ ಪುಸ್ತಕ್ ಸಾಂಗ್ತಾ, ದೆವ್ ಅಪ್ನಾಚ್ಯಾ ದುತಾಕ್ನಿ ಹುಕುಮ್ ದಿತಾ; ತುಜೆ ತಳ್‍ಪಾಯ್ ಸೈತ್ ಗುಂಡ್ಯಾಕ್ನಿ ಅದ್ಳಿ ನಸಿ ಸರ್ಕೆ ತೆನಿ ಅಪ್ನಾಚ್ಯಾ ಹಾತಾನಿ ತುಕಾ ಉಕ್ಲುನ್ ಧರ್‍ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 4:6
9 ತಿಳಿವುಗಳ ಹೋಲಿಕೆ  

ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಡುವ ಊಳಿಗದ ಆತ್ಮಗಳಲ್ಲವೋ?


ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು ಆತನ ದೂತನು ದಂಡಿಳಿಸಿ ಕಾವಲಾಗಿದ್ದು ಕಾಪಾಡುತ್ತಾನೆ.


ಇದೇನೂ ಆಶ್ಚರ್ಯವಲ್ಲ; ಸೈತಾನನು ತಾನೇ ಪ್ರಕಾಶರೂಪವುಳ್ಳ ದೇವದೂತನ ವೇಷವನ್ನು ಹಾಕಿಕೊಳ್ಳುವಾಗ


ಆತನು ಅವನ ಎಲುಬುಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿದುಹೋಗುವದಿಲ್ಲ.


ಮನುಷ್ಯನು ರೊಟ್ಟಿತಿಂದ ಮಾತ್ರದಿಂದ ಬದುಕುವದಿಲ್ಲ, ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಬದುಕುವನು ಎಂದು ಬರೆದದೆ ಅಂದನು.


ಹೊಲದ ಕಲ್ಲುಗಳೊಂದಿಗೂ ಒಪ್ಪಂದ ಮಾಡಿಕೊಂಡಿರುವಿ; ಕಾಡುಮೃಗಗಳೂ ನಿನ್ನ ಸಂಗಡ ಸಮಾಧಾನವಾಗಿರುವವು.


ನೀನು ಅವನಿಗೂ ಅವನ ಮನೆಗೂ ಅವನ ಎಲ್ಲಾ ಸ್ವಾಸ್ತ್ಯಕ್ಕೂ ಸುತ್ತುಮುತ್ತಲು ಬೇಲಿಯನ್ನು ಹಾಕಿದ್ದೀಯಲ್ಲಾ. ಅವನು ಕೈಹಾಕಿದ ಕೆಲಸವನ್ನು ನೀನು ಸಫಲಪಡಿಸುತ್ತಿರುವದರಿಂದ ಅವನ ಸಂಪತ್ತು ದೇಶದಲ್ಲಿ ವೃದ್ಧಿಯಾಗುತ್ತಾ ಬಂದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು