Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:1 - ಕನ್ನಡ ಸತ್ಯವೇದವು J.V. (BSI)

1 ಆತನು ಆ ಜನರ ಗುಂಪುಗಳನ್ನು ಕಂಡು ಬೆಟ್ಟವನ್ನೇರಿ ಕೂತುಕೊಂಡ ತರುವಾಯ ಆತನ ಶಿಷ್ಯರು ಆತನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೇಸು ದೊಡ್ಡ ಗುಂಪನ್ನು ಕಂಡು ಬೆಟ್ಟದ ಮೇಲೇರಿ ಕುಳಿತ ತರುವಾಯ ಆತನ ಶಿಷ್ಯರು ಆತನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜನರ ದೊಡ್ಡ ಗುಂಪನ್ನು ಕಂಡು ಯೇಸುಸ್ವಾಮಿ ಒಂದು ಬೆಟ್ಟವನ್ನು ಹತ್ತಿ ಕುಳಿತುಕೊಂಡರು. ಅವರ ಶಿಷ್ಯರು ಸುತ್ತಲೂ ನೆರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು ಈ ಜನಸಮೂಹವನ್ನು ನೋಡಿ, ಬೆಟ್ಟದ ಮೇಲೆ ಹೋಗಿ ಕುಳಿತುಕೊಂಡನು. ಆತನ ಶಿಷ್ಯರು ಸಹ ಆತನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೇಸು ಜನರ ಗುಂಪನ್ನು ಕಂಡು, ಒಂದು ಬೆಟ್ಟವನ್ನೇರಿ ಕುಳಿತುಕೊಂಡರು. ಶಿಷ್ಯರು ಅವರ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜುನ್ ಲೊಕಾಂಚ್ಯಾ ತಾಂಡ್ಯಾಕ್ನಿ ಬಗಟ್ಲ್ಯಾನ್ ಅನಿ ತೊ ಎಕ್ ಬಾರಿಕ್ಲ್ಯಾ ಮಡ್ಡಿ ವರ್‍ತಿ ಚಡ್ಲೊ ಅನಿ ಥೈ ಬಸ್ಲೊ. ತೆಚಿ ಶಿಸಾ ತೆಚ್ಯಾ ಭೊತ್ಯಾನಿ ಯೆವ್ನ್ ಗೊಳಾ ಹೊಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:1
16 ತಿಳಿವುಗಳ ಹೋಲಿಕೆ  

ಆಮೇಲೆ ಯೇಸು ಬೆಟ್ಟವನ್ನು ಹತ್ತಿ ತನಗೆ ಬೇಕಾದವರನ್ನು ಹತ್ತಿರಕ್ಕೆ ಕರೆಯಲು ಅವರು ಆತನ ಬಳಿಗೆ ಬಂದರು.


ಯೇಸು ಅಲ್ಲಿಂದ ಹೊರಟು ಗಲಿಲಾಯಸಮುದ್ರದ ಬಳಿಗೆ ಬಂದು ಬೆಟ್ಟವನ್ನು ಹತ್ತಿ ಅಲ್ಲಿ ಕೂತುಕೊಂಡನು.


ಆತನು ತಿರಿಗಿ ಸಮುದ್ರದ ದಡದಲ್ಲಿ ಉಪದೇಶ ಮಾಡುತ್ತಿದ್ದನು. ಬಹುಜನರು ಆತನ ಬಳಿಗೆ ಕೂಡಿ ಬಂದದ್ದರಿಂದ ಆತನು ಸಮುದ್ರದಲ್ಲಿದ್ದ ದೋಣಿಹತ್ತಿ ಕೂತುಕೊಂಡನು;


ಆತನು ಮನೆಯೊಳಗೆ ಬಂದಾಗ ಜನರು ತಿರಿಗಿ ನೆರೆದದ್ದರಿಂದ ಊಟಕ್ಕೂ ಅವಕಾಶವಾಗಲಿಲ್ಲ.


ಮತ್ತು ಗಲಿಲಾಯ ದೆಕಪೊಲಿ ಯೆರೂಸಲೇಮ್ ಯೂದಾಯ ಎಂಬೀ ಸ್ಥಳಗಳಿಂದಲೂ ಯೊರ್ದನ್ ಹೊಳೆಯ ಆಚೇಕಡೆಯಿಂದಲೂ ಜನರು ಗುಂಪುಗುಂಪಾಗಿ ಆತನ ಹಿಂದೆ ಹೋದರು.


ಬಹಳ ಜನರು ಆತನ ಬಳಿಗೆ ಕೂಡಿಬಂದದರಿಂದ ಆತನು ದೋಣಿ ಹತ್ತಿ ಕೂತುಕೊಂಡನು. ಆ ಜನರೆಲ್ಲರು ದಡದಲ್ಲಿ ನಿಂತಿದ್ದರು.


ಆತನು ಅವರಿಗೆ ಉಪದೇಶ ಮಾಡಿ ಹೇಳಿದ್ದೇನಂದರೆ -


ಆ ದಿವಸಗಳಲ್ಲಿ ಆತನು ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟಕ್ಕೆ ಹೋಗಿ ರಾತ್ರಿಯನ್ನೆಲ್ಲಾ ಪ್ರಾರ್ಥನೆಯಲ್ಲೇ ಕಳೆದನು.


ಆಮೇಲೆ ಆತನು ಅವರ ಸಂಗಡ ಬೆಟ್ಟದಿಂದ ಇಳಿದು ಸಮಭೂವಿುಯಲ್ಲಿ ನಿಂತನು. ಆತನ ಶಿಷ್ಯರ ದೊಡ್ಡ ಗುಂಪು ಮತ್ತು ಎಲ್ಲಾ ಯೂದಾಯದಿಂದಲೂ ಯೆರೂಸಲೇವಿುನಿಂದಲೂ ತೂರ್ ಸೀದೋನ್ ಪಟ್ಟಣಗಳಿರುವ ಸಮುದ್ರತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದವು. ಆ ಜನರು ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳನ್ನು ವಾಸಿಮಾಡಿಸಿಕೊಳ್ಳುವದಕ್ಕೂ ಬಂದಿದ್ದರು.


ತರುವಾಯ ಆತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನಂದರೆ -


ಯೇಸು ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿವಸಗಳಾದ ಮೇಲೆ ಪೇತ್ರ ಯೋಹಾನ ಯಾಕೋಬರನ್ನು ಕರಕೊಂಡು ಪ್ರಾರ್ಥನೆಮಾಡುವದಕ್ಕೆ ಬೆಟ್ಟವನ್ನು ಹತ್ತಿದನು.


ಆಗ ಯೇಸು - ಅವರು ಬಂದು ತನ್ನನ್ನು ಹಿಡುಕೊಂಡುಹೋಗಿ ಅರಸನನ್ನಾಗಿ ಮಾಡಬೇಕೆಂಬ ಯೋಚನೆಯಲ್ಲಿದ್ದಾರೆಂದು ತಿಳಿದುಕೊಂಡು ತಿರಿಗಿ ತಾನೊಬ್ಬನೇ ಒಂಟಿಗನಾಗಿ ಬೆಟ್ಟಕ್ಕೆ ಹೋಗಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು