Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:11 - ಕನ್ನಡ ಸತ್ಯವೇದವು J.V. (BSI)

11 ನನ್ನ ನಿವಿುತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ನನ್ನ ಶಿಷ್ಯರು ನೀವಾದ್ದರಿಂದ ಜನರು ನಿಮ್ಮನ್ನು ಧಿಕ್ಕರಿಸುವರು, ಹಿಂಸಿಸುವರು, ಅನ್ಯಾಯವಾಗಿ ಇಲ್ಲಸಲ್ಲದ್ದನ್ನು ನಿಮ್ಮ ಮೇಲೆ ಹೊರಿಸುವರು; ಆಗ ನೀವು ಭಾಗ್ಯವಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮ್ಮನ್ನು ಅಪಹಾಸ್ಯ ಮಾಡಿದರೆ, ಹಿಂಸೆಪಡಿಸಿದರೆ ಮತ್ತು ನಿಮ್ಮ ಮೇಲೆ ಕೆಟ್ಟಕೆಟ್ಟ ವಿಷಯಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ, ಹಿಂಸಿಸಿ ನಿಮ್ಮ ಮೇಲೆ ಎಲ್ಲಾ ವಿಧವಾದ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 “ತುಮಿ ಮಾಜೆ ವಾಂಗ್ಡಿ ಮನುನ್ ಲೊಕಾನಿ ತುಮ್ಕಾ ತರಾಸ್ ದಿಲ್ಯಾರ್, ಬುರ್ಶ್ಯಾ-ಬುರ್ಶ್ಯಾ ಝುಟ್ಯಾ ಗೊಸ್ಟಿಯಾ ತುಮ್ಚ್ಯಾ ವಿರೊದ್ ಬೊಲ್ಲ್ಯಾರ್, ತುಮ್ಚಿ ಮರ್‍ಯಾದ್ ಕಾಡ್ಲ್ಯಾರ್, ತುಮಿ ಕವ್ಡೆ ಸುಖಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:11
32 ತಿಳಿವುಗಳ ಹೋಲಿಕೆ  

ನೀವು ಕ್ರಿಸ್ತನ ಹೆಸರಿನ ನಿವಿುತ್ತ ನಿಂದೆಗೆ ಗುರಿಯಾದರೆ ಧನ್ಯರೇ; ತೇಜೋಮಯವಾದ ಆತ್ಮನಾಗಿರುವ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲಾ.


ಇದಲ್ಲದೆ ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು.


ಮತ್ತು ನನ್ನ ಹೆಸರಿನ ನಿವಿುತ್ತವಾಗಿ ನಿಮ್ಮನ್ನು ಎಲ್ಲರೂ ಹಗೆಮಾಡುವರು. ಆದರೆ ಕಡೇವರೆಗೂ ತಾಳುವವನು ರಕ್ಷಣೆ ಹೊಂದುವನು.


ಆಗ ನಿಮ್ಮನ್ನು ಉಪದ್ರವಕ್ಕೆ ಒಪ್ಪಿಸಿ ಕೊಲ್ಲುವರು; ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ಎಲ್ಲಾ ಜನಾಂಗಗಳವರು ಹಗೆ ಮಾಡುವರು.


ಮನುಷ್ಯಕುಮಾರನ ನಿವಿುತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು.


ಆತನು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನ ಕಾರ್ಯವನ್ನು ಒಪ್ಪಿಸಿದನು.


ಆದರೆ ಅವರು ನನ್ನನ್ನು ಕಳುಹಿಸಿಕೊಟ್ಟಾತನನ್ನು ತಿಳಿಯದವರಾದದರಿಂದ ಇದನ್ನೆಲ್ಲಾ ನನ್ನ ಹೆಸರಿನ ನಿವಿುತ್ತ ನಿಮಗೆ ಮಾಡುವರು.


ಮತ್ತು ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು. ಆದರೆ ಕಡೇವರೆಗೂ ತಾಳುವವನು ರಕ್ಷಣೆಹೊಂದುವನು.


ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು - ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ ಎಂದು ಹೇಳಿದ್ದಾರಲ್ಲಾ; ಅವರಿಗಂತು ಅವಮಾನವಾಗುವದು.


ತನ್ನ ಪ್ರಾಣವನ್ನು ಕಂಡುಕೊಂಡವನು ಅದನ್ನು ಕಳಕೊಳ್ಳುವನು; ನನ್ನ ನಿವಿುತ್ತವಾಗಿ ತನ್ನ ಪ್ರಾಣವನ್ನು ಕಳಕೊಂಡವನು ಅದನ್ನು ಕಂಡುಕೊಳ್ಳುವನು.


ನೀನು ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿವಿುತ್ತ ಬಾಧೆಯನ್ನು ಸೈರಿಸಿಕೊಂಡು ಬೇಸರಗೊಳ್ಳಲಿಲ್ಲ; ಇದನ್ನೆಲ್ಲಾ ಬಲ್ಲೆನು.


ಮತ್ತು ನನ್ನ ಹೆಸರಿನ ನಿವಿುತ್ತ ಮನೆಗಳನ್ನಾಗಲಿ ಅಣ್ಣತಮ್ಮಂದಿರನ್ನಾಗಲಿ ಅಕ್ಕತಂಗಿಯರನ್ನಾಗಲಿ ತಂದೆಯನ್ನಾಗಲಿ ತಾಯಿಯನ್ನಾಗಲಿ ಮಕ್ಕಳನ್ನಾಗಲಿ ಭೂವಿುಯನ್ನಾಗಲಿ ಬಿಟ್ಟುಬಿಟ್ಟಿರುವವರೆಲ್ಲರಿಗೆ ಅನೇಕ ಪಾಲು ಹೆಚ್ಚಾಗಿ ಸಿಕ್ಕುವದು; ಮತ್ತು ಅವರು ನಿತ್ಯಜೀವಕ್ಕೆ ಬಾಧ್ಯರಾಗುವರು.


ಯೇಸುವಿನ ಜೀವವು ನಮ್ಮ ಮರ್ತ್ಯಶರೀರದಲ್ಲಿ ಉಂಟೆಂದು ತೋರಿಬರುವದಕ್ಕಾಗಿ ಬದುಕಿರುವ ನಾವು ಯೇಸುವಿನ ನಿವಿುತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ.


ನಾವಂತು ಕ್ರಿಸ್ತನ ನಿವಿುತ್ತ ಹುಚ್ಚರಾಗಿದ್ದೇವೆ, ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ನೀವು ಬಲಿಷ್ಠರು; ನೀವು ಮಾನಶಾಲಿಗಳು, ನಾವು ಮಾನಹೀನರು.


ದೇವರೇ, ನಾವು ನಿನ್ನ ನಿವಿುತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ಜನರು ನಮ್ಮನ್ನು ಕೊಯ್ಗುರಿಗಳಂತೆ ಎಣಿಸಿದರು. ಎಂಬದಾಗಿ ಬರೆದಿರುವಂತೆ ಆಗುತ್ತದಲ್ಲಾ.


ಆದರೆ ಇವೆಲ್ಲಾ ನಡೆಯುವದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಗಳ ಅಧಿಕಾರಸ್ಥರ ವಶಕ್ಕೆ ಕೊಟ್ಟು ನನ್ನ ಹೆಸರಿನ ನಿವಿುತ್ತವಾಗಿ ಅರಸುಗಳ ಮುಂದಕ್ಕೂ ಅಧಿಪತಿಗಳ ಮುಂದಕ್ಕೂ ತೆಗೆದುಕೊಂಡುಹೋಗಿ ಹಿಂಸೆಪಡಿಸುವರು.


ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳಕೊಳ್ಳುವನು; ಆದರೆ ನನ್ನ ನಿವಿುತ್ತವಾಗಿ ತನ್ನ ಪ್ರಾಣವನ್ನು ಕಳಕೊಂಡವನು ಅದನ್ನು ಉಳಿಸಿಕೊಳ್ಳುವನು.


ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳಕೊಳ್ಳುವನು; ಆದರೆ ನನ್ನ ನಿವಿುತ್ತವಾಗಿಯೂ ಸುವಾರ್ತೆಯ ನಿವಿುತ್ತವಾಗಿಯೂ ತನ್ನ ಪ್ರಾಣವನ್ನು ಕಳಕೊಂಡವನು ಅದನ್ನು ಉಳಿಸಿಕೊಳ್ಳುವನು.


ಗುರುವಿನಂತೆ ಆಗುವದು ಶಿಷ್ಯನಿಗೆ ಸಾಕು, ಧಣಿಯಂತೆ ಆಗುವದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆ ಬೆಲ್ಜೆಬೂಲನೆಂದು ಹೆಸರಿಟ್ಟ ಮೇಲೆ ಆತನ ಮನೆಯವರನ್ನು ಏನಂದಾರು? ಆದರೂ ಅವರಿಗೆ ಹೆದರಬೇಡಿರಿ.


ಅವನು ನನ್ನ ಹೆಸರಿನ ನಿವಿುತ್ತ ಎಷ್ಟು ಹಿಂಸೆ ಅನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.


ದೇವರೇ, ನಾವು ನಿನ್ನ ನಿವಿುತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ಜನರು ನಮ್ಮನ್ನು ಕೊಯ್ಗುರಿಗಳಂತೆ ಎಣಿಸಿದ್ದಾರೆ.


ಆದರೆ ನಿಮ್ಮ ವಿಷಯದಲ್ಲಿ ನೋಡಿಕೊಳ್ಳಿರಿ. ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳಕೊಂಡುಹೋಗುವರು; ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು; ನನ್ನ ನಿವಿುತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಸಾಕ್ಷಿಗಳಾಗಿ ನಿಲ್ಲಿಸುವರು. ಹೀಗೆ ಅವರಿಗೆ ಸಾಕ್ಷಿಯಾಗುವದು.


ಅಲ್ಲಿ ಹಾದುಹೋಗುವವರು ತಲೇ ಆಡಿಸಿ -


ನನ್ನ ನಿವಿುತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದಕ್ಕೂ ಅರಸುಗಳ ಮುಂದಕ್ಕೂ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು.


ಅದಕ್ಕೆ ಅವರು ಅವನನ್ನು ಬೈದು - ನೀನು ಆ ಮನುಷ್ಯನ ಶಿಷ್ಯ; ನಾವು ಮೋಶೆಯ ಶಿಷ್ಯರು;


ನ್ಯಾಯವಿರುದ್ಧಸಾಕ್ಷಿಗಳು ನನಗೆ ವಿರೋಧವಾಗಿ ಎದ್ದಿದ್ದಾರೆ; ನಾನರಿಯದ ಸಂಗತಿಗಳ ವಿಷಯದಲ್ಲಿ ನನ್ನನ್ನು ವಿಚಾರಿಸುತ್ತಾರೆ.


ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.


ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ, ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ. ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವದು, ಹುಳವು ಅವರನ್ನು ಉಣ್ಣೆಯಂತೆ ಮೆದ್ದುಬಿಡುವದು;


ಅದಕ್ಕೆ ಯೆರೆಮೀಯನು - ಅದು ಸುಳ್ಳು, ನಾನು ಕಸ್ದೀಯರನ್ನು ಮರೆಹೊಗುವವನಲ್ಲ ಎನ್ನಲು ಇರೀಯನು ಅವನ ಮಾತನ್ನು ಕೇಳದೆ ಅವನನ್ನು ಹಿಡಿದು ಪ್ರಧಾನರ ಬಳಿಗೆ ಕರತಂದನು.


ಹೇಗಂದರೆ ಕ್ರಿಸ್ತನ ಮೇಲೆ ನಂಬಿಕೆಯಿಡುವದೂ ಆತನಿಗೋಸ್ಕರ ಬಾಧೆಯನ್ನನುಭವಿಸುವದೂ ನಿಮಗೆ ಅನುಗ್ರಹವಾಗಿ ದೊರೆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು