ಮತ್ತಾಯ 5:13 - ಕನ್ನಡ ಸತ್ಯವೇದವು J.V. (BSI)13 ನೀವು ಭೂವಿುಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ ಅದಕ್ಕೆ ಇನ್ನಾತರಿಂದ ಉಪ್ಪಿನ ರುಚಿ ಬಂದೀತು? ಜನರು ಅದನ್ನು ಹೊರಗೆಹಾಕಿ ತುಳಿಯುವದಕ್ಕೆ ಅದು ಯೋಗ್ಯವೇ ಹೊರತು ಮತ್ತಾವ ಕೆಲಸಕ್ಕೂ ಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 “ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ ಅದಕ್ಕೆ ಬೇರೆ ಯಾವುದರಿಂದ ಉಪ್ಪಿನ ರುಚಿಯನ್ನು ಕೊಡಲು ಸಾಧ್ಯ? ಜನರು ಅದನ್ನು ಹೊರಗೆಹಾಕಿ ದಾರಿಹೋಕರು ತುಳಿಯುವುದಕ್ಕೆ ಅದು ಯೋಗ್ಯವೇ ಹೊರತು ಮತ್ತ್ಯಾವ ಕೆಲಸಕ್ಕೂ ಬರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 “ಈ ಧರೆಗೆ ನೀವೇ ಉಪ್ಪು; ಉಪ್ಪೇ ಸಪ್ಪೆಯಾಗಿಬಿಟ್ಟರೆ ಅದಕ್ಕೆ ಇನ್ನಾವುದರಿಂದ ಪುನಃ ರುಚಿಬಂದೀತು? ಇನ್ನು ಅದು ಕೆಲಸಕ್ಕೆ ಬಾರದ ವಸ್ತು. ಜನರು ಅದನ್ನು ಆಚೆ ಬಿಸಾಡುತ್ತಾರೆ. ದಾರಿಗರು ಅದನ್ನು ತುಳಿದುಬಿಡುತ್ತಾರಷ್ಟೆ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ನೀವು ಭೂಮಿಗೆ ಉಪ್ಪಾಗಿದ್ದೀರಿ. ಆದರೆ ಉಪ್ಪೇ ತನ್ನ ರುಚಿಯನ್ನು ಕಳೆದುಕೊಂಡರೆ ಅದನ್ನು ಮತ್ತೆ ಉಪ್ಪನ್ನಾಗಿ ಮಾಡಲು ಸಾಧ್ಯವಿಲ್ಲ; ಅಂಥ ಉಪ್ಪಿನಿಂದ ಪ್ರಯೋಜನವೇನೂ ಇಲ್ಲ. ಜನರು ಅದನ್ನು ಹೊರಗೆ ಬಿಸಾಡಿ ಅದರ ಮೇಲೆ ನಡೆದಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ, ಅದಕ್ಕೆ ಉಪ್ಪಿನ ರುಚಿ ಹೇಗೆ ಬಂದೀತು? ಅದು ಹೊರಗೆ ಹಾಕಿ ತುಳಿಯುವುದಕ್ಕೆ ಯೋಗ್ಯವೇ ಹೊರತು ಬೇರೆ ಯಾವ ಕೆಲಸಕ್ಕೂ ಬರುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 “ತುಮಿ ಜಗಾಚ್ಯಾ ಲೊಕಾಕ್ನಿ ಮಿಟ್ಟ್ ಹೊತ್ತ್ಯಾ ಬಾಸೆನ್, ಖರೆ ಮಿಟ್ಟಾನ್ ಅಪ್ನಾಚಿ ರುಚಿ ಕಳ್ದುನ್ ಘೆಟ್ಲ್ಯಾನ್ ತರ್ ತೆಕಾ ಅನಿ ಪರ್ತುನ್ ರುಚಿ ಯೈಸರ್ಕೆ ಕರುಕ್ ಹೊಯ್ನಾ. ತನ್ನಾ ತೆಕಾ ಕಾಯ್ಬಿ ಕಿಮ್ಮತ್ ರ್‍ಹಾಯ್ನಾ. ತೆಚೆಸಾಟ್ನಿ ತೆ ಭಾಯ್ರ್ ಟಾಕ್ತ್ಯಾತ್ ಅನಿ ಲೊಕಾ ತೆ ತುಡ್ವುನ್ಗೆತ್ ಫಿರುನ್ ಖೆಳ್ತಾತ್.” ಅಧ್ಯಾಯವನ್ನು ನೋಡಿ |