ಮತ್ತಾಯ 5:19 - ಕನ್ನಡ ಸತ್ಯವೇದವು J.V. (BSI)19 ಆದದರಿಂದ ಈ ಸಣ್ಣಸಣ್ಣ ಆಜ್ಞೆಗಳಲ್ಲಿಯಾದರೂ ಒಂದನ್ನು ಮೀರಿ ಜನರಿಗೂ ಹಾಗೆ ಮೀರುವದಕ್ಕೆ ಬೋಧಿಸುವವನು ಪರಲೋಕರಾಜ್ಯದಲ್ಲಿ ಬಹಳ ಚಿಕ್ಕವನೆನಿಸಿಕೊಳ್ಳುವನು; ಆದರೆ ತಾನೇ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕರಾಜ್ಯದಲ್ಲಿ ದೊಡ್ಡವನೆನಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆದುದರಿಂದ ಈ ಸಣ್ಣ ಆಜ್ಞೆಗಳಲ್ಲಿ ಒಂದನ್ನು ಮೀರಿ ನಡೆದು ಜನರಿಗೂ ಹಾಗೆ ಮಾಡುವುದಕ್ಕೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಬಹಳ ಕನಿಷ್ಠನೆನ್ನಿಸಿಕೊಳ್ಳುವನು; ಆದರೆ ತಾನೇ ಸ್ವತಃ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕ ರಾಜ್ಯದಲ್ಲಿ ಶ್ರೇಷ್ಠನೆನಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಹೀಗಿರುವಲ್ಲಿ, ಅದರ ಆಜ್ಞೆಗಳಲ್ಲಿ ಅತಿ ಚಿಕ್ಕದೊಂದನ್ನು ಮೀರುವವನು, ಮೀರುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಅತ್ಯಲ್ಪನೆಂದು ಪರಿಗಣಿತನಾಗುವನು; ಧರ್ಮಶಾಸ್ತ್ರವನ್ನು ಪಾಲಿಸುವವನು, ಪಾಲಿಸುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಮಹಾತ್ಮನೆಂದು ಪರಿಗಣಿತನಾಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ಮನುಷ್ಯನು ಪ್ರತಿ ಆಜ್ಞೆಗೂ, ಅಂದರೆ ಸಣ್ಣಸಣ್ಣ ಆಜ್ಞೆಗೂ ವಿಧೇಯನಾಗಿರಬೇಕು. ಒಬ್ಬನು ಯಾವ ಆಜ್ಞೆಗಾದರೂ ಅವಿಧೇಯನಾಗಿ ಜೀವಿಸುತ್ತಾ ಆ ಆಜ್ಞೆಗೆ ಬೇರೆಯವರೂ ಅವಿಧೇಯರಾಗಿರಬೇಕೆಂದು ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅತ್ಯಲ್ಪನಾಗಿರುವನು. ಆದರೆ ಧರ್ಮಶಾಸ್ತ್ರಕ್ಕೆ ವಿಧೇಯನಾಗಿ ಜೀವಿಸುತ್ತಾ ಧರ್ಮಶಾಸ್ತ್ರಕ್ಕೆ ವಿಧೇಯರಾಗಬೇಕೆಂದು ಬೇರೆಯವರಿಗೂ ಬೋಧಿಸುವವನು ಪರಲೋಕರಾಜ್ಯದಲ್ಲಿ ಪ್ರಮುಖನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆದ್ದರಿಂದ ಈ ಆಜ್ಞೆಗಳಲ್ಲಿ ಅತ್ಯಂತ ಚಿಕ್ಕದಾದ ಒಂದನ್ನು ಮೀರಿ, ಹಾಗೆಯೇ ಮೀರಲು ಇತರರಿಗೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಅತಿ ಚಿಕ್ಕವನೆಂದು ಎನಿಸಿಕೊಳ್ಳುವನು. ಆದರೆ ಈ ಆಜ್ಞೆಗಳನ್ನು ಪಾಲಿಸಿ ಇತರರಿಗೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಎನಿಸಿಕೊಳ್ಳುವನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ತಸೆ ಮನುನ್, ಜೆ ಕೊನ್ ಹ್ಯಾತುರ್‍ಲೊ ಎಕ್ ಎಗ್ದಮ್ ಬಾರಿಕ್ಲೊ ಖಾಯ್ದೊಬಿ ಮೊಡ್ತಾ, ಅನಿ ಖಾಯ್ದೊ ಮೊಡುಕ್ ದುಸ್ರ್ಯಾಕ್ನಿ ಶಿಕ್ವುತಾ ತೆಕಾ ಸರ್ಗಾಚ್ಯಾ ರಾಜಾತ್ ಎಗ್ದಮ್ ಕಿಳ್ ಮನುನ್ ಲೆಕ್ಕ್ ಕರ್‍ತ್ಯಾತ್. ಅನಿ ಜೆ ಕೊನ್ ಖಾಯ್ದೆ ಬರೆ ಕರುನ್ ಪಾಳ್ತಾ, ಅನಿ ದುಸ್ರ್ಯಾಕ್ನಿಬಿ ಪಾಳುಕ್ ಶಿಕ್ವುತಾ ತೊ ಸರ್ಗಾಚ್ಯಾ ರಾಜಾತ್ ಲೈ ಮೊಟೊ ಹೊವ್ನ್ ರ್‍ಹಾತಾ. ಅಧ್ಯಾಯವನ್ನು ನೋಡಿ |