Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:20 - ಕನ್ನಡ ಸತ್ಯವೇದವು J.V. (BSI)

20 ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಹೆಚ್ಚಿನದಾಗದಿದ್ದರೆ ನೀವು ಪರಲೋಕರಾಜ್ಯದಲ್ಲಿ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಉತ್ತಮವಾಗಿರದಿದ್ದರೆ ನೀವು ಪರಲೋಕ ರಾಜ್ಯಕ್ಕೆ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಧರ್ಮಶಾಸ್ತ್ರಿಗಳ ಹಾಗೂ ಫರಿಸಾಯರ ಧರ್ಮನಿಷ್ಠೆಗಿಂತ ನಿಮ್ಮ ಧರ್ಮನಿಷ್ಠೆ ಉತ್ತಮವಾಗದ ಹೊರತು ನೀವು ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸಲಾರಿರಿ ಎಂಬುದು ನಿಶ್ಚಯ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಧರ್ಮೋಪದೇಶಕರಿಗಿಂತಲೂ ಫರಿಸಾಯರಿಗಿಂತಲೂ ನೀವು ಉತ್ತಮವಾದದ್ದನ್ನು ಮಾಡಬೇಕು. ಇಲ್ಲವಾದರೆ ನೀವು ಪರಲೋಕರಾಜ್ಯವನ್ನು ಪ್ರವೇಶಿಸಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಿಮ್ಮ ನೀತಿಯು ಫರಿಸಾಯರ ಮತ್ತು ನಿಯಮ ಬೋಧಕರ ನೀತಿಗಿಂತಲೂ ಹೆಚ್ಚಿನದಾಗದಿದ್ದರೆ, ನೀವು ಪರಲೋಕ ರಾಜ್ಯವನ್ನು ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಮಿಯಾ ತುಮ್ಕಾ ಸಾಂಗ್ತಲೆ ಕಾಯ್ ಮಟ್ಲ್ಯಾರ್, ದೆವಾಕ್ ಕಾಯ್ ಪಾಜೆ ತೆ ಖಾಯ್ದೆ ಶಿಕ್ವುತಲ್ಯಾಂಚ್ಯಾ ಅನಿ ಫಾರಿಜೆವಾಂವಾಚ್ಯಾನ್ಕಿ ಬರೆ ತುಮಿ ಕರ್ಲ್ಯಾ ಸಿವಾಯ್ ಸರ್ಗಾಚ್ಯಾ ರಾಜಾತ್ ತುಮ್ಕಾ ಗುಸುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:20
24 ತಿಳಿವುಗಳ ಹೋಲಿಕೆ  

ಇದರಲ್ಲಿ ನನ್ನ ಉದ್ದೇಶವೇನಂದರೆ - ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು ನೇಮನಿಷ್ಠೆಗಳ ಫಲವಾಗಿರುವ ಸ್ವನೀತಿಯನ್ನಾಶ್ರಯಿಸದೆ ಕ್ರಿಸ್ತನನ್ನು ನಂಬುವದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿ ಕಾಣಿಸಿಕೊಳ್ಳಬೇಕೆಂಬದೇ.


ಎಲ್ಲರ ಸಂಗಡ ಸಮಾಧಾನದಿಂದಿರುವದಕ್ಕೂ ಪರಿಶುದ್ಧತೆಯನ್ನು ಹೊಂದುವದಕ್ಕೂ ಪ್ರಯತ್ನಮಾಡಿರಿ;


ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನಸೃಷ್ಟಿಯಾದನು. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.


ನನ್ನನ್ನು ಸ್ವಾಮೀ, ಸ್ವಾಮೀ ಅನ್ನುವವರೆಲ್ಲರು ಪರಲೋಕರಾಜ್ಯದಲ್ಲಿ ಸೇರುವರೆಂದು ನೆನಸಬೇಡಿರಿ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನೇ ಪರಲೋಕರಾಜ್ಯಕ್ಕೆ ಸೇರುವನು.


ಅದರಲ್ಲಿ ಹೊಲೆಯಾದದ್ದೊಂದೂ ಸೇರುವದಿಲ್ಲ, ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಸೇರುವದಿಲ್ಲ; ಯಜ್ಞದ ಕುರಿಯಾದಾತನ ಜೀವಬಾಧ್ಯರ ಪಟ್ಟಿಯಲ್ಲಿ ಯಾರಾರ ಹೆಸರುಗಳು ಬರೆದವೆಯೋ ಅವರು ಮಾತ್ರ ಸೇರುವರು.


ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವದಿಲ್ಲವೋ ಅವನು ಅದರಲ್ಲಿ ಸೇರುವದೇ ಇಲ್ಲ ಅಂದನು.


ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಆತನು ಮೊದಲು ತನ್ನ ಶಿಷ್ಯರಿಗೆ ಹೇಳುವದಕ್ಕೆ ತೊಡಗಿದ್ದೇನಂದರೆ - ಫರಿಸಾಯರ ಕಪಟವೆಂಬ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ್ರಿ.


ನಿಮ್ಮ ಗತಿಯನ್ನು ಏನು ಹೇಳಲಿ; ನೆಲಸಮವಾದ ಸಮಾಧಿಗಳ ಹಾಗಿದ್ದೀರಿ; ಅವುಗಳ ಮೇಲೆ ತಿರುಗಾಡುವ ಜನರಿಗೆ ಇವು ಸಮಾಧಿಗಳೆಂದು ತಿಳಿಯದು ಎಂದು ಹೇಳಿದನು.


ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಒಂಟೆಯು ಸೂಜೀಕಣ್ಣಿನಲ್ಲಿ ನುಗ್ಗಿ ಹೋಗುವದು ಸುಲಭ ಎಂದು ಹೇಳಿದನು.


ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವದಿಲ್ಲವೋ ಅವನು ಅದರಲ್ಲಿ ಸೇರುವದೇ ಇಲ್ಲ ಎಂದು ಹೇಳಿ


ಇದಲ್ಲದೆ ಯಾವನಾದರೂ ನನ್ನ ಹೆಸರಿನಲ್ಲಿ ಇಂಥ ಒಂದು ಚಿಕ್ಕ ಮಗುವನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು.


ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿದೆ; ಒಳ್ಳೇ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು.


ಆಗ ಅವರು ರೊಟ್ಟಿಯ ಹುಳಿ ಹಿಟ್ಟನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಆತನು ತಮಗೆ ಹೇಳಲಿಲ್ಲ, ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಿದನು ಎಂಬದಾಗಿ ತಿಳುಕೊಂಡರು.


ಅಪರಾಧನಿರ್ಣಯಕ್ಕೆ ಸಾಧನವಾಗಿರುವ ಸೇವೆಯು ಪ್ರಭಾವದಿಂದಿರಲಾಗಿ ನೀತಿಗೆ ಸಾಧನವಾಗಿರುವ ಸೇವೆಯು ಎಷ್ಟೋ ಅಧಿಕವಾದ ಪ್ರಭಾವವುಳ್ಳದ್ದಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು