Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:33 - ಕನ್ನಡ ಸತ್ಯವೇದವು J.V. (BSI)

33 ಮತ್ತು - ನೀನು ಸುಳ್ಳಾಣೆಯಿಡಬಾರದು; ನೀನು ಇಟ್ಟುಕೊಂಡ ಆಣೆಗಳನ್ನು ಕರ್ತನಿಗೆ ಸಲ್ಲಿಸಬೇಕೆಂದು ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 “ಮತ್ತು, ನೀನು ಸುಳ್ಳಾಣೆಯಿಡಬಾರದು; ‘ನೀನು ಇಟ್ಟುಕೊಂಡ ಆಣೆಗಳನ್ನು ಕರ್ತನಿಗೆ ಸಲ್ಲಿಸಬೇಕೆಂದು ಹಿರಿಯರ ಕಾಲದಲ್ಲಿ’ ಹೇಳಿದೆ ಎಂದು ಕೇಳಿದ್ದೀರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 “ಸುಳ್ಳಾಣೆಯಿಡಬೇಡ; ದೇವರಿಗೆ ಆಣೆಯಿಟ್ಟು ವಾಗ್ದಾನಮಾಡಿದಂತೆ ನಡೆದುಕೊಳ್ಳಲೇಬೇಕು’ ಎಂದು ಪೂರ್ವಿಕರಿಗೆ ಹೇಳಿದ್ದು ನಿಮಗೆ ತಿಳಿದೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 “‘ನೀವಿಟ್ಟ ಆಣೆಯನ್ನು ಮೀರಬೇಡಿರಿ. ಪ್ರಭುವಿಗೆ ನೀವಿಟ್ಟ ಆಣೆಗಳನ್ನು ಕೈಗೊಳ್ಳಲೇಬೇಕು’ ಎಂದು ನಮ್ಮ ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 “ ‘ಇದಲ್ಲದೆ ನೀನು ಆಣೆಯಿಟ್ಟರೆ ಅದನ್ನು ಮೀರಬಾರದು, ಕರ್ತನಿಗೆ ಮಾಡಿದ ಆಣೆಗಳನ್ನು ನೆರವೇರಿಸಲೇಬೇಕು,’ ಎಂದು ನಿಮ್ಮ ಪೂರ್ವಿಕರಿಗೆ ಹೇಳಿರುವುದನ್ನು ಕೇಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 “ದಿಲ್ಲಿ ಗೊಸ್ಟ್ ಮೊಡುನಕೊ ಅನಿ ಆನ್ ಘಾಲುನ್ ಸರ್ವೆಸ್ವರಾಕ್ ತಿಯಾ ಕಾಯ್ಬಿ ಸಾಂಗ್ಲೆ ಜಾಲ್ಯಾರ್ ತೆ ಪುರಾ ಕರ್.” ಮನುನ್ ಲೊಕಾನಿ ಸಾಂಗಲ್ಲೆ ತುಮಿ ಆಯಿಕ್ಲ್ಯಾಶಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:33
15 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಆತನು ತಪ್ಪದೆ ಅದನ್ನು ವಿಚಾರಿಸುವನು; ತೀರಿಸದೆ ಹೋಗುವದು ಪಾಪ.


ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಟ್ಟು ನಿಮ್ಮ ದೇವರ ನಾಮವನ್ನು ಅಪಕೀರ್ತಿಗೆ ಒಳಪಡಿಸಬಾರದು. ನಾನು ಯೆಹೋವನು.


ಆದರೆ ಬಾಯಿಂದ ನುಡಿದದ್ದನ್ನು ನೆರವೇರಿಸಲೇಬೇಕು. ನಿಮ್ಮ ದೇವರಾದ ಯೆಹೋವನಿಗೆ ಬಾಯಿಂದ ಹರಕೆಮಾಡಿಕೊಂಡಂತೆಯೇ ಅದನ್ನು ಒಪ್ಪಿಸಿಬಿಡಬೇಕು.


ನಿಮ್ಮ ದೇವನಾದ ಯೆಹೋವನಿಗೆ ಹರಕೆಮಾಡಿ ಸಲ್ಲಿಸಿರಿ; ಸುತ್ತಣವರೆಲ್ಲರು ಭಯಂಕರನಿಗೆ ಕಾಣಿಕೆಗಳನ್ನು ಸಮರ್ಪಿಸಲಿ.


ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವದಿಲ್ಲ.


ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವದಿಲ್ಲ.


ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ಮಾಡಿದ ಹರಕೆಗಳನ್ನು ಪರಾತ್ಪರನಿಗೆ ಸಲ್ಲಿಸಿರಿ.


ಆಹಾ, ಶುಭಸಮಾಚಾರವನ್ನು ತಂದು ಸಮಾಧಾನವನ್ನು ಸಾರುವ ದೂತನ ಪಾದಗಳು ಪರ್ವತಗಳ ಮೇಲೆ ತ್ವರೆಪಡುತ್ತವೆ! ಯೆಹೂದವೇ, ನಿನ್ನ ಹಬ್ಬಗಳನ್ನು ಆಚರಿಸಿಕೋ, ನಿನ್ನ ಹರಕೆಗಳನ್ನು ಸಲ್ಲಿಸು; ಆ ದುಷ್ಟನು ಇನ್ನು ಮುಂದೆ ನಿನ್ನನ್ನು ಹಾದುಹೋಗನು; ತೀರಾ ನಾಶವಾಗಿದ್ದಾನೆ.


ವ್ಯಭಿಚಾರ ಮಾಡಬಾರದೆಂದು ಹೇಳಿಯದೆ ಎಂಬದಾಗಿ ನೀವು ಕೇಳಿದ್ದೀರಷ್ಟೆ.


ನಿಮ್ಮ ದೇವರಾದ ಯೆಹೋವನಲ್ಲಿಯೇ ಭಯಭಕ್ತಿಯುಳ್ಳವರಾಗಿರಬೇಕು; ಆತನನ್ನೇ ಸೇವಿಸಬೇಕು; ಆತನ ಹೆಸರು ಹೇಳಿ ಪ್ರಮಾಣಮಾಡಬೇಕು.


ನರಹತ್ಯ ಮಾಡಬಾರದು; ನರಹತ್ಯ ಮಾಡುವವನು ನ್ಯಾಯವಿಚಾರಣೆಗೆ ಗುರಿಯಾಗುವನೆಂದು ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು