Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:37 - ಕನ್ನಡ ಸತ್ಯವೇದವು J.V. (BSI)

37 ಆದರೆ ನಿಮ್ಮ ಮಾತು ಹೌದಾದರೆ ಹೌದು, ಅಲ್ಲವಾದರೆ ಅಲ್ಲ, ಎಂದಿರಲಿ; ಇದಕ್ಕಿಂತ ಹೆಚ್ಚಾದದ್ದು ಸೈತಾನನಿಂದ ಬಂದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಆದರೆ ನಿಮ್ಮ ಮಾತು ‘ಹೌದಾದರೆ ಹೌದು ಅಲ್ಲವಾದರೆ ಅಲ್ಲ’ ಎಂದಿರಲಿ. ಇದಕ್ಕಿಂತ ಹೆಚ್ಚಾದದ್ದು ಸೈತಾನನಿಂದ ಬರುವಂತಹದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಹೌದಾದರೆ ಹೌದೆನ್ನಿ, ಅಲ್ಲವಾದರೆ ಅಲ್ಲವೆನ್ನಿ; ಇದಕ್ಕಿಂತ ಮಿಗಿಲಾದುದು ಪಿಶಾಚಿಯಿಂದ ಪ್ರೇರಿತವಾದುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಹೌದಾದರೆ ‘ಹೌದು’ ಎನ್ನಿರಿ. ಇಲ್ಲವಾದರೆ ‘ಇಲ್ಲ’ ಎನ್ನಿರಿ. ನೀವು ಇದಕ್ಕಿಂತ ಹೆಚ್ಚಾಗಿ ಹೇಳುವಂಥದ್ದು ಸೈತಾನನಿಂದ ಪ್ರೇರಿತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಆದ್ದರಿಂದ ನಿಮ್ಮ ಮಾತು ಹೌದಾದರೆ ‘ಹೌದು’ ಇಲ್ಲವಾದರೆ ‘ಇಲ್ಲ’ ಎಂದಿರಲಿ. ಇದಕ್ಕಿಂತ ಹೆಚ್ಚಿನದು ಕೆಡುಕನಿಂದ ಬಂದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಖಾಲಿ ಹೊಯ್ ನಾ ತರ್ ನಾ ಮನುನ್ ಸಾಂಗಾ, ಅನಿ ಜಾಸ್ತಿಚೆ ಜೆ ಕಾಯ್ ತುಮಿ ಸಾಂಗ್ತ್ಯಾಶಿ ತೆ ಸಗ್ಳೆ ಸೈತಾನಾಕ್ನಾ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:37
17 ತಿಳಿವುಗಳ ಹೋಲಿಕೆ  

ಮುಖ್ಯವಾಗಿ, ನನ್ನ ಸಹೋದರರೇ, ಆಣೆ ಇಡಲೇಬೇಡಿರಿ; ಆಕಾಶದ ಮೇಲಾಗಲಿ ಭೂವಿುಯ ಮೇಲಾಗಲಿ ಇನ್ನಾತರ ಮೇಲಾಗಲಿ ಆಣೆ ಇಡಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವದಿಲ್ಲ.


ನಿಮ್ಮ ಸಂಭಾಷಣೆ ಯಾವಾಗಲೂ ಇಂಪಾಗಿಯೂ ರಸವತ್ತಾಗಿಯೂ ಇರಲಿ; ಹೀಗೆ ನೀವು ಯಾರಾರಿಗೆ ಯಾವಾವ ರೀತಿಯಲ್ಲಿ ಉತ್ತರಹೇಳಬೇಕೋ ಅದನ್ನು ತಿಳಿದುಕೊಳ್ಳುವಿರಿ.


ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ; ನೀವು ಪೂರ್ವಸ್ವಭಾವವನ್ನು ಅದರ ಕೃತ್ಯಗಳ ಕೂಡ ತೆಗೆದಿಟ್ಟು ನೂತನಸ್ವಭಾವವನ್ನು ಧರಿಸಿಕೊಂಡಿದ್ದೀರಲ್ಲವೇ.


ಸೈತಾನನು ನಿಮ್ಮ ತಂದೆ; ನೀವು ಆ ತಂದೆಯಿಂದ ಹುಟ್ಟಿದವರಾಗಿದ್ದು ನಿಮ್ಮ ತಂದೆಯ ದುರಿಚ್ಫೆಗಳನ್ನೇ ನಡಿಸಬೇಕೆಂದಿದ್ದೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ; ಅವನಲ್ಲಿ ಸತ್ಯವು ಇಲ್ಲವೇ ಇಲ್ಲ. ಅವನು ಸುಳ್ಳಾಡುವಾಗ ಸ್ವಭಾವಾನುಸಾರವಾಗಿ ಆಡುತ್ತಾನೆ; ಅವನು ಸುಳ್ಳುಗಾರನೂ ಸುಳ್ಳಿಗೆ ಮೂಲಪುರುಷನೂ ಆಗಿದ್ದಾನೆ.


ಆದಕಾರಣ ಸುಳ್ಳಾಡುವದನ್ನು ಬಿಟ್ಟುಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.


ಆದರೆ ಕರ್ತನು ನಂಬಿಗಸ್ತನು; ಆತನು ನಿಮ್ಮನ್ನು ದೃಢಪಡಿಸಿ ನೀವು ಕೆಡುಕನ ಕೈಗೆ ಸಿಕ್ಕದಂತೆ ಕಾಪಾಡುವನು.


ಹೊಲವಂದರೆ ಈ ಲೋಕ; ಒಳ್ಳೆಯ ಬೀಜವಂದರೆ ಪರಲೋಕ ರಾಜ್ಯದವರು; ಹಣಜಿ ಅಂದರೆ ಸೈತಾನನವರು;


ದೇವರಿಂದ ಹುಟ್ಟಿರುವವನು ಪಾಪಮಾಡುವವನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದಾತನು ಅವನನ್ನು ಕಾಪಾಡುವನು; ಕೆಡುಕನು ಅವನನ್ನು ಹಿಡಿಯುವದಿಲ್ಲ.


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೇಡಿನಿಂದ ನಮ್ಮನ್ನು ತಪ್ಪಿಸು.


ತಂದೆಗಳೇ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವದರಿಂದ ನಿಮಗೆ ಬರೆಯುತ್ತೇನೆ. ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವದರಿಂದ ನಿಮಗೆ ಬರೆಯುತ್ತೇನೆ. ಮಕ್ಕಳಿರಾ, ನೀವು ತಂದೆಯನ್ನು ಬಲ್ಲವರಾಗಿರುವದರಿಂದ ನಿಮಗೆ ಬರೆದಿದ್ದೇನೆ.


ಕೆಡುಕನಿಂದ ಹುಟ್ಟಿ ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನನಂತೆ ನಾವು ಇರಬಾರದು. ಯಾವ ಕಾರಣದಿಂದ ಅವನನ್ನು ಕೊಂದುಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಗೆ ಸರಿಯಾದವುಗಳೂ ಆಗಿದ್ದದರಿಂದಲೇ.


ಇವರನ್ನು ಲೋಕದೊಳಗಿಂದ ತೆಗೆದುಕೊಂಡು ಹೋಗಬೇಕೆಂದು ನಾನು ಕೇಳಿಕೊಳ್ಳುವದಿಲ್ಲ; ಕೆಡುಕನಿಂದ ತಪ್ಪಿಸಿ ಕಾಪಾಡಬೇಕೆಂದು ಕೇಳಿಕೊಳ್ಳುತ್ತೇನೆ.


ಹೇಗಂದರೆ ಮನಸ್ಸಿನೊಳಗಿಂದ ಕೆಟ್ಟ ಆಲೋಚನೆ ಕೊಲೆ ಹಾದರ ಸೂಳೆಗಾರಿಕೆ ಕಳ್ಳತನ ಸುಳ್ಳುಸಾಕ್ಷಿ ಬೈಗಳು ಹೊರಟು ಬರುತ್ತವೆ.


ನಿನ್ನ ತಲೆಯ ಮೇಲೆ ಕೂಡ ಆಣೆ ಇಡಬೇಡ; ನೀನು ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕರ್ರಗೆ ಮಾಡಲಾರಿ.


ಮತ್ತು ನಂಬಿಕೆಯೆಂಬ ಗುರಾಣಿಯನ್ನು ಹಿಡುಕೊಳ್ಳಿರಿ; ಅದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ಆರಿಸುವದಕ್ಕೆ ಶಕ್ತರಾಗುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು