Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:45 - ಕನ್ನಡ ಸತ್ಯವೇದವು J.V. (BSI)

45 ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಮೂಡುವಂತೆ ಮಾಡುತ್ತಾನೆ; ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆಸುರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ. ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಇದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ನೀವು ಮಕ್ಕಳಾಗುವಿರಿ. ಅವರು ಸಜ್ಜನರ ಮೇಲೂ ದುರ್ಜನರ ಮೇಲೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ; ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆಗರೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಆಗ ನೀವು ಪರಲೋಕದಲ್ಲಿರುವ ನಿಮ್ಮ ತಂದೆಯ ನಿಜವಾದ ಮಕ್ಕಳಾಗುವಿರಿ. ನಿಮ್ಮ ತಂದೆಯು ಒಳ್ಳೆಯವರಿಗಾಗಿ ಮತ್ತು ಕೆಟ್ಟವರಿಗಾಗಿ ಸೂರ್ಯನನ್ನು ಉದಯಿಸುತ್ತಾನೆ ಮತ್ತು ಮಳೆಯನ್ನು ಸುರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಅವರು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ. ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆ ಸುರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ಅಶೆ ತುಮಿ ಸರ್ಗಾ ವೈಲ್ಯಾ ತುಮ್ಚ್ಯಾ ಬಾಬಾಚಿ ಪೊರಾ ಹೊತ್ಯಾಶಿ, ತೊ ಬರ್‍ಯಾ ಲೊಕಾಂಚ್ಯಾ ವರ್‍ತಿಬಿ ಬುರ್ಶಾ ಲೊಕಾಂಚ್ಯಾ ವರ್‍ತಿಬಿ ಅಪ್ನಾಚೊ ದಿಸ್ ಉಗಿಸರ್ಕೆ ಕರ್‍ತಾ. ಅನಿ ಬರೆ ಕರ್‍ತಲ್ಯಾಂಚ್ಯಾ ವರ್‍ತಿಬಿ ಬುರ್ಶೆ ಕರ್‍ತಲ್ಯಾಂಚ್ಯಾ ವರ್‍ತಿಬಿ ಪಾವ್ಸ್ ಧಾಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:45
10 ತಿಳಿವುಗಳ ಹೋಲಿಕೆ  

ಯೆಹೋವನು ಸರ್ವೋಪಕಾರಿಯೂ ತಾನು ನಿರ್ಮಿಸಿದವುಗಳನ್ನೆಲ್ಲಾ ಕರುಣಿಸುವಾತನೂ ಆಗಿದ್ದಾನೆ.


ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಧೈರ್ಯವನ್ನು ಬಿಡದೆ ಸಾಲಕೊಡಿರಿ; ಹೀಗೆ ಮಾಡಿದರೆ, ನಿಮಗೆ ಬಹಳ ಫಲ ಸಿಕ್ಕುವದು, ಮತ್ತು ನೀವು ಪರಾತ್ಪರನ ಮಕ್ಕಳಾಗುವಿರಿ. ಆತನಂತೂ ಉಪಕಾರ ನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.


ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ನಿಮಗೆ ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲಗಳನ್ನೂ ದಯಪಾಲಿಸಿ ಆಹಾರಕೊಟ್ಟು ನಿಮ್ಮ ಮನಸ್ಸುಗಳನ್ನು ಆನಂದದಿಂದ ತುಂಬಿಸಿ ಉಪಕಾರ ಮಾಡುತ್ತಾ ಬಂದವನು ಆತನೇ ಎಂದು ಹೇಳಿದರು.


ಆತನ ಸೈನ್ಯಗಳಿಗೆ ಲೆಕ್ಕವಿದೆಯೋ? ಆತನ ತೇಜಸ್ಸು ಯಾರಲ್ಲಿ ಮೂಡುವದಿಲ್ಲ?


ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷವಿುಸಿದನಲ್ಲಾ; ಆದದರಿಂದ ದೇವರ ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ಆತನನ್ನು ಅನುಸರಿಸುವವರಾಗಿರಿ.


ಸಮಾಧಾನ ಪಡಿಸುವವರು ಧನ್ಯರು; ಅವರು ದೇವರ ಮಕ್ಕಳು ಅನ್ನಿಸಿಕೊಳ್ಳುವರು.


ನಿಮ್ಮೊಳಗೆ ಒಬ್ಬರ ಮೇಲೊಬ್ಬರಿಗೆ ಪ್ರೀತಿಯಿದ್ದರೆ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳುಕೊಳ್ಳುವರು ಅಂದನು.


ದೇವರಿಂದ ಹುಟ್ಟಿದವನು ಪಾಪಮಾಡನು; ದೇವರ ಜೀವವು ಅವನಲ್ಲಿ ನೆಲೆಗೊಂಡಿದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡುವವನಾಗಿರಲಾರನು.


ಮುಂಗಾರು, ಹಿಂಗಾರು ಅಂತು ಸಕಾಲದ ಮಳೆಯನ್ನು ದಯಪಾಲಿಸಿ ಸುಗ್ಗಿಯ ಕ್ಲುಪ್ತವಾರಗಳನ್ನು ನಮಗಾಗಿ ಪ್ರತ್ಯೇಕಪಡಿಸುವ ನಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯಿಡೋಣ ಎಂದು ಮನದಲ್ಲಿ ಅಂದುಕೊಳ್ಳುವದಿಲ್ಲ.


ಹೀಗೆ ನೀವು ನಿರ್ದೋಷಿಗಳೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು