Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:9 - ಕನ್ನಡ ಸತ್ಯವೇದವು J.V. (BSI)

9 ಸಮಾಧಾನ ಪಡಿಸುವವರು ಧನ್ಯರು; ಅವರು ದೇವರ ಮಕ್ಕಳು ಅನ್ನಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಶಾಂತಿಗಾಗಿ ಶ್ರಮಿಸುವವರು ಧನ್ಯರು; ಅವರು ದೇವರ ಮಕ್ಕಳು ಎಂದೆನಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಶಾಂತಿಗಾಗಿ ಶ್ರಮಿಸುವವರು ಭಾಗ್ಯವಂತರು; ಅವರು ದೇವರ ಮಕ್ಕಳೆನಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸಮಾಧಾನಪಡಿಸುವವರು ಧನ್ಯರು. ಅವರು ‘ದೇವರ ಮಕ್ಕಳು’ ಎನಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸಮಾಧಾನ ಪಡಿಸುವವರು ಧನ್ಯರು, ಅವರು ದೇವರ ಮಕ್ಕಳೆನಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಸಮಾದಾನ್ ಹಾನುಸಾಟ್ನಿ ರಾಬ್ತಲಿ ಲೊಕಾ ಕವ್ಡಿ ಸುಖಿ; ದೆವ್ ತೆಂಕಾ ಅಪ್ನಾಚಿ ಪೊರಾ ಮನುನ್ ಬಲ್ವುತಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:9
31 ತಿಳಿವುಗಳ ಹೋಲಿಕೆ  

ಎಲ್ಲರ ಸಂಗಡ ಸಮಾಧಾನದಿಂದಿರುವದಕ್ಕೂ ಪರಿಶುದ್ಧತೆಯನ್ನು ಹೊಂದುವದಕ್ಕೂ ಪ್ರಯತ್ನಮಾಡಿರಿ;


ಸಾಧ್ಯವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನದಿಂದಿರಿ.


ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ - ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ದಯೆ ಉಪಕಾರ ನಂಬಿಕೆ ಸಾಧುತ್ವ ಶಮೆದಮೆ ಇಂಥವುಗಳೇ.


ಸಮಾಧಾನವನ್ನು ಹಗೆಮಾಡುವವರೊಳಗೆ ಇದ್ದು ಇದ್ದು ಸಾಕಾಯಿತು.


ಯಾರಾರು ದೇವರ ಆತ್ಮನಿಂದ ನಡಿಸಿಕೊಳ್ಳುತ್ತಾರೋ ಅವರು ದೇವರ ಮಕ್ಕಳು.


ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಧೈರ್ಯವನ್ನು ಬಿಡದೆ ಸಾಲಕೊಡಿರಿ; ಹೀಗೆ ಮಾಡಿದರೆ, ನಿಮಗೆ ಬಹಳ ಫಲ ಸಿಕ್ಕುವದು, ಮತ್ತು ನೀವು ಪರಾತ್ಪರನ ಮಕ್ಕಳಾಗುವಿರಿ. ಆತನಂತೂ ಉಪಕಾರ ನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.


ಕಡೇ ಮಾತೇನಂದರೆ ಸಹೋದರರೇ ಸಂತೋಷಪಡಿರಿ, ಕ್ರಮಪಡಿಸಿಕೊಳ್ಳಿರಿ; ಧೈರ್ಯವುಳ್ಳವರಾಗಿರಿ, ಒಂದೇ ಮನಸ್ಸುಳ್ಳವರಾಗಿರಿ, ಸಮಾಧಾನದಿಂದಿರಿ; ಆಗ ಪ್ರೀತಿಯನ್ನೂ ಶಾಂತಿಯನ್ನೂ ಕೊಡುವ ದೇವರು ನಿಮ್ಮ ಸಂಗಡ ಇರುವನು.


ಮತ್ತೊಬ್ಬನ ಮೇಲೆ ತಪ್ಪುಹೊರಿಸುವದಕ್ಕೆ ಕಾರಣವಿದ್ದರೂ ತಪ್ಪುಹೊರಿಸದೆ ಒಬ್ಬರಿಗೊಬ್ಬರು ಸೈರಿಸಿಕೊಂಡು ಕ್ಷವಿುಸಿರಿ. ಕರ್ತನು ನಿಮ್ಮನ್ನು ಕ್ಷವಿುಸಿದಂತೆಯೇ ನೀವೂ ಕ್ಷವಿುಸಿರಿ.


ದೀರ್ಘಾಯುಷ್ಯವು ಬೇಕೋ? ಬಹುದಿವಸ ಬದುಕಿ ಸುಖವನ್ನು ಅನುಭವಿಸಬೇಕೋ?


ಆದದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಯಾವ ದೋಷವೂ ಇಲ್ಲದವನಾಗಿರುವಂತೆ ನೀವೂ ದೋಷವಿಲ್ಲದವರಾಗಿರ್ರಿ.


ನಾವು ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೇ ನಮ್ಮ ಮೂಲಕ ಬುದ್ಧಿ ಹೇಳುವ ಹಾಗಾಯಿತು. ದೇವರೊಂದಿಗೆ ಸಮಾಧಾನವಾಗಿರೆಂದು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇವೆ.


ಮರುದಿನ ತಾವು ತಾವೇ ಹೊಡೆದಾಡಿಕೊಳ್ಳುತ್ತಿರುವಾಗ ಅವನು ಎದುರಾಗಿ ಬಂದು - ಜನರೇ, ನೀವು ಸಹೋದರರಲ್ಲವೇ? ನೀವೇಕೆ ಒಬ್ಬರಿಗೊಬ್ಬರು ಅನ್ಯಾಯಮಾಡುತ್ತೀರಿ ಎಂದು ಹೇಳಿ ಅವರನ್ನು ಸಮಾಧಾನಪಡಿಸಬೇಕೆಂದಿದ್ದನು.


ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಮೂಡುವಂತೆ ಮಾಡುತ್ತಾನೆ; ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆಸುರಿಸುತ್ತಾನೆ.


ನೀವು ಸ್ನೇಹಭಾವದಿಂದ ಸಹಾಯಮಾಡುವದಕ್ಕಾಗಿ ನನ್ನ ಬಳಿಗೆ ಬಂದಿರುವದಾದರೆ ನಿಮ್ಮೊಡನೆ ನನಗೆ ಐಕ್ಯಭಾವವಿರುವದು; ನಿರಪರಾಧಿಯಾದ ನನ್ನನ್ನು ನನ್ನ ವಿರೋಧಿಗಳಿಗೆ ಒಪ್ಪಿಸುವ ಕುಯುಕ್ತಿಯಿಂದ ಬಂದಿರುವದಾದರೆ ನಮ್ಮ ಪಿತೃಗಳ ದೇವರು ನಿಮ್ಮನ್ನು ನೋಡಿ ದಂಡಿಸಲಿ ಅಂದನು.


ಸಹೋದರನು ಸಹೋದರನ ಮೇಲೆ ವ್ಯಾಜ್ಯವಾಡುವದು ಅಲ್ಲದೆ ಅದನ್ನು ಕ್ರಿಸ್ತಭಕ್ತರಲ್ಲದವರ ಮುಂದೆ ತೆಗೆದುಕೊಂಡು ಹೋಗುವದು ಸರಿಯೋ? ನಿಮ್ಮ ನಿಮ್ಮಲ್ಲಿ ವ್ಯಾಜ್ಯವಾಡುವದೇ ನೀವು ಸೋತವರೆಂಬದಕ್ಕೆ ಗುರುತು.


ಕರ್ತನಲ್ಲಿ ಒಂದೇ ಮನಸ್ಸುಳ್ಳವರಾಗಿರ್ರಿಯೆಂದು ಯುವೊದ್ಯಳನ್ನೂ ಸಂತುಕೆಯನ್ನೂ ಪ್ರಬೋಧಿಸುತ್ತೇನೆ.


ಅವರು ಇನ್ನು ಮರಣಕ್ಕೆ ಗುರಿಯಾಗುವದೇ ಇಲ್ಲ. ಪುನರುತ್ಥಾನವನ್ನು ಹೊಂದಿದವರಾಗಿದ್ದು ದೇವದೂತರಿಗೆ ಸರಿಸಮಾನರೂ ದೇವರ ಮಕ್ಕಳೂ ಆಗಿದ್ದಾರೆ. ಸತ್ತವರು ಬದುಕಿ ಏಳುತ್ತಾರೆಂಬದನ್ನು ಮೋಶೆಯು ಸೂಚಿಸಿದ್ದಾನೆ.


ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಯೋಗ್ಯರಾಗಿ ನಡೆದುಕೊಳ್ಳಬೇಕೆಂದು ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಪ್ರಬೋಧಿಸುತ್ತೇನೆ.


ನಾವು ದೇವರ ಮಕ್ಕಳಾಗಿದ್ದೇವೆಂಬದಕ್ಕೆ ಪವಿತ್ರಾತ್ಮನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.


ದೇವಪುತ್ರರ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೆಂದು ಜಗತ್ತು ಬಹು ಲವಲವಿಕೆಯಿಂದ ಎದುರುನೋಡುತ್ತಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು