Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:13 - ಕನ್ನಡ ಸತ್ಯವೇದವು J.V. (BSI)

13 ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೇಡಿನಿಂದ ನಮ್ಮನ್ನು ತಪ್ಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೆಡುಕನಿಂದ; ನಮ್ಮನ್ನು ತಪ್ಪಿಸು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಮ್ಮನ್ನು ಶೋಧನೆಗೆ ಒಳಪಡಿಸದೆ ಕೆಡುಕನಿಂದ (ಸೈತಾನನಿಂದ) ನಮ್ಮನ್ನು ರಕ್ಷಿಸು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಮ್ಮನ್ನು ಶೋಧನೆಗೆ ಸೇರಿಸದೆ, ಕೇಡಿನಿಂದ ತಪ್ಪಿಸಿರಿ. ಏಕೆಂದರೆ ರಾಜ್ಯವೂ ಬಲವೂ ಮಹಿಮೆಯೂ ಸದಾಕಾಲ ನಿಮ್ಮದೇ. ಆಮೆನ್.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಲೈ ಕಟಿನ್ ಪರಿಕ್ಷಾತ್ ಅಮ್ಕಾ ಘಾಲುನಕೊ, ಸೈತಾನಾಕ್ನಾ ಅಮ್ಕಾ ರಾಕ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:13
57 ತಿಳಿವುಗಳ ಹೋಲಿಕೆ  

ಮನುಷ್ಯರು ಸಹಿಸಬಹುದಾದ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ. ದೇವರು ನಂಬಿಗಸ್ಥನು; ನಿಮ್ಮ ಶಕ್ತಿಯನ್ನು ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.


ಇವರನ್ನು ಲೋಕದೊಳಗಿಂದ ತೆಗೆದುಕೊಂಡು ಹೋಗಬೇಕೆಂದು ನಾನು ಕೇಳಿಕೊಳ್ಳುವದಿಲ್ಲ; ಕೆಡುಕನಿಂದ ತಪ್ಪಿಸಿ ಕಾಪಾಡಬೇಕೆಂದು ಕೇಳಿಕೊಳ್ಳುತ್ತೇನೆ.


ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಮನಸ್ಸು ಸಿದ್ಧವಾಗಿದೆ ಸರಿ, ಆದರೆ ದೇಹಕ್ಕೆ ಬಲ ಸಾಲದು ಎಂದು ಹೇಳಿದನು.


ಇದಾದ ಮೇಲೆ ಪರಲೋಕದಲ್ಲಿ ದೊಡ್ಡ ಗುಂಪಿನ ಮಹಾ ಶಬ್ದವೋ ಎಂಬಂತೆ ಒಂದು ಶಬ್ದವನ್ನು ಕೇಳಿದೆನು. ಅವರು - ಹಲ್ಲೆಲೂಯಾ. ಜಯವೂ ಪ್ರಭಾವವೂ ಶಕ್ತಿಯೂ ನಮ್ಮ ದೇವರಲ್ಲಿ ಉಂಟು;


ಆದರೆ ಕರ್ತನು ನಂಬಿಗಸ್ತನು; ಆತನು ನಿಮ್ಮನ್ನು ದೃಢಪಡಿಸಿ ನೀವು ಕೆಡುಕನ ಕೈಗೆ ಸಿಕ್ಕದಂತೆ ಕಾಪಾಡುವನು.


ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ. ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ.


ನಾನು ನಿನ್ನನ್ನು ದುಷ್ಟರ ಕೈಯಿಂದ ಉದ್ಧರಿಸುವೆನು; ಹೌದು, ಕ್ರೂರರ ಕೈಯಿಂದ ರಕ್ಷಿಸುವೆನು.


ಕರ್ತನು ಭಕ್ತರನ್ನು ಕಷ್ಟಗಳೊಳಗಿಂದ ತಪ್ಪಿಸುವದಕ್ಕೂ ದುರ್ಮಾರ್ಗಿಗಳನ್ನು ನ್ಯಾಯತೀರ್ಪಿನ ದಿನದ ತನಕ ಶಿಕ್ಷಾನುಭವದಲ್ಲಿ ಇಡುವದಕ್ಕೂ ಬಲ್ಲವನಾಗಿದ್ದಾನೆ.


ಆತನು ಸತ್ತವರೊಳಗಿಂದ ಎಬ್ಬಿಸಿದಂಥ ಆಕಾಶದೊಳಗಿಂದ ಬರುವಂಥ ಆತನ ಕುಮಾರನನ್ನು ಎದುರುನೋಡುವವರಾದಿರೆಂತಲೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.


ದೇವರು ಭೂಲೋಕಕ್ಕೆಲ್ಲಾ ರಾಜನು; ಆತನನ್ನು ಜ್ಞಾನಯುಕ್ತರಾಗಿ ಕೀರ್ತಿಸಿರಿ.


ಯೆಹೋವಾ, ಮಹಿಮಪ್ರತಾಪ ವೈಭವ ಪರಾಕ್ರಮಪ್ರಭಾವಗಳು ನಿನ್ನವು; ಭೂಮ್ಯಾಕಾಶಗಳಲ್ಲಿರುವದೆಲ್ಲಾ ನಿನ್ನದೇ. ಯೆಹೋವನೇ, ರಾಜ್ಯವು ನಿನ್ನದು; ನೀನು ಮಹೋನ್ನತನಾಗಿ ಸರ್ವವನ್ನೂ ಆಳುವವನಾಗಿರುತ್ತೀ.


ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣವಿರುವದಿಲ್ಲ, ಇನ್ನು ದುಃಖವಾಗಲಿ ಗೋಳಾಟವಾಗಲಿ ಕಷ್ಟವಾಗಲಿ ಇರುವದಿಲ್ಲ; ಮೊದಲಿದ್ದದ್ದೆಲ್ಲಾ ಇಲ್ಲದೆ ಹೋಯಿತು ಎಂದು ಹೇಳಿತು.


ಯೆಹೋವನು ಯುಗಯುಗಾಂತರಗಳಲ್ಲಿಯೂ ಅರಸನಾಗಿರುವನು; ಆತನ ದೇಶದಲ್ಲಿ ಅನ್ಯಜನಗಳು ನಿಶ್ಶೇಷರಾದರು.


ನೀನು ನನ್ನ ಸಹನವಾಕ್ಯವನ್ನು ಕಾಪಾಡಿದ್ದರಿಂದ ಭೂನಿವಾಸಿಗಳನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರುವದಕ್ಕಿರುವ ಶೋಧನೆಯ ಸಮಯದಲ್ಲಿ ನಿನ್ನನ್ನು ತಪ್ಪಿಸಿ ಕಾಪಾಡುವೆನು.


ಪಾಪಮಾಡುವವನು ಸೈತಾನನಿಂದ ಹುಟ್ಟಿದವನಾಗಿದ್ದಾನೆ; ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನಲ್ಲಾ. ಸೈತಾನನ ಕೆಲಸಗಳನ್ನು ಲಯ ಮಾಡುವದಕ್ಕೋಸ್ಕರವೇ ದೇವಕುಮಾರನು ಪ್ರತ್ಯಕ್ಷನಾದನು.


ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ; ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.


ಇಸ್ರಾಯೇಲ್ಯರ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ. ಆಮೆನ್. ಆಮೆನ್.


ಇಸ್ರಾಯೇಲ್‍ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ ಎಂಬದೇ. ಅವರು ಹೀಗೆ ಹಾಡಿದ್ದಕ್ಕೆ ಸರ್ವಜನರೂ ಆಮೆನ್ ಎಂದು ಯೆಹೋವನನ್ನು ಸ್ತುತಿಸಿದರು.


ಯಾಬೇಚನು ಇಸ್ರಾಯೇಲ್ ದೇವರಿಗೆ - ನೀನು ನನ್ನನ್ನು ವಿಶೇಷವಾಗಿ ಆಶೀರ್ವದಿಸಿ ನನ್ನ ಪ್ರಾಂತವನ್ನು ವಿಸ್ತರಿಸಿ ನಿನ್ನ ಹಸ್ತದಿಂದ ನನ್ನನ್ನು ಹಿಡಿದು ಯಾವ ವೇದನೆಯೂ ಉಂಟಾಗದಂತೆ ನನ್ನನ್ನು ರಕ್ಷಿಸಬಾರದೇ ಎಂದು ಮೊರೆಯಿಡಲು ದೇವರು ಅವನ ಮೊರೆಯನ್ನು ಲಾಲಿಸಿದನು.


ಯೆಹೋವನೇ ಯುಗಯುಗಾಂತರಗಳಲ್ಲಿಯೂ ಆಳುವನು.


ಈ ಸಂಗತಿಗಳು ಆದ ಮೇಲೆ ದೇವರು ಅಬ್ರಹಾಮನನ್ನು ಪರಿಶೋಧಿಸಿದನು. ಹೇಗಂದರೆ ಆತನು ಅವನನ್ನು - ಅಬ್ರಹಾಮನೇ ಎಂದು ಕರೆಯಲು ಅವನು - ಇಗೋ, ಇದ್ದೇನೆ ಅಂದನು.


ಈತನು ನಮ್ಮನ್ನು ಕೆಟ್ಟದ್ದಾಗಿರುವ ಈಗಿನ ದುಷ್ಟಯುಗದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕೆ ಅನುಸಾರವಾಗಿ ನಮ್ಮ ಪಾಪಗಳ ದೆಸೆಯಿಂದ ತನ್ನನ್ನು ಮರಣಕ್ಕೆ ಒಪ್ಪಿಸಿದನು.


ನಿಶ್ಚಯವಾಗಿ ದೇವರ ವಾಗ್ದಾನಗಳು ಎಷ್ಟಿದ್ದರೂ ಕ್ರಿಸ್ತನಲ್ಲೇ ದೃಢವಾಗುತ್ತವೆ. ಆದಕಾರಣ ದೇವರ ಪ್ರಭಾವವು ಪ್ರಕಾಶವಾಗುವದಕ್ಕೋಸ್ಕರ ಆತನ ಮೂಲಕವಾಗಿ ನಾವು ಆಮೆನ್ ಎಂದು ಹೇಳುತ್ತೇವೆ.


ಪರಾತ್ಪರನಾದ ಯೆಹೋವನು ಭಯಂಕರನಾಗಿದ್ದಾನೆ; ಆತನು ಭೂಲೋಕಕ್ಕೆಲ್ಲಾ ಅಧಿರಾಜನಾಗಿದ್ದಾನೆ.


ಶಾಪವನ್ನುಂಟುಮಾಡುವ ಈ ನೀರು ನಿನ್ನೊಳಗೆ ಸೇರಿ ನಿನ್ನ ಹೊಟ್ಟೆ ಉಬ್ಬುವಂತೆಯೂ ತೊಡೆಗಳು ಕ್ಷೀಣವಾಗಿ ಹೋಗುವಂತೆಯೂ ಮಾಡುವದು ಎಂದು ಹೇಳಬೇಕು. ಅದಕ್ಕೆ ಆ ಸ್ತ್ರೀಯು - ಆಮೆನ್, ಹಾಗೆಯೇ ಆಗಲಿ ಎಂದು ಹೇಳಬೇಕು.


ನಿನಗೆ ಸಂಭವಿಸುವದಕ್ಕಿರುವ ಬಾಧೆಗಳಿಗೆ ಹೆದರಬೇಡ. ಇಗೋ ನೀವು ದುಷ್ಪ್ರೇರಣೆಗೆ ಒಳಗಾಗುವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವದಕ್ಕಿದ್ದಾನೆ; ಮತ್ತು ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವದು. ನೀನು ಸಾಯಬೇಕಾದರೂ ನಂಬಿಗಸ್ತನಾಗಿರು; ನಾನು ನಿನಗೆ ಜೀವವೆಂಬ ಜಯಮಾಲೆಯನ್ನು ಕೊಡುವೆನು.


ಸತ್ತವನಾದೆನು, ಮತ್ತು ಇಗೋ ಯುಗಯುಗಾಂತರಗಳಲ್ಲಿಯೂ ಬದುಕುವವನಾಗಿದ್ದೇನೆ; ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಅವೆ.


ಆದರೆ ನಿಮ್ಮ ಮಾತು ಹೌದಾದರೆ ಹೌದು, ಅಲ್ಲವಾದರೆ ಅಲ್ಲ, ಎಂದಿರಲಿ; ಇದಕ್ಕಿಂತ ಹೆಚ್ಚಾದದ್ದು ಸೈತಾನನಿಂದ ಬಂದದ್ದು.


ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡುಮೃಗಗಳೊಂದಿಗೆ ವಾಸಿಸುವಿ, ದನಗಳಂತೆ ಹುಲ್ಲು ಮೇಯುವದೇ ನಿನಗೆ ಗತಿಯಾಗುವದು, ಆಕಾಶದ ಇಬ್ಬನಿಯು ನಿನ್ನನ್ನು ತೋಯಿಸುವದು; ಪರಾತ್ಪರನು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬದು ನಿನಗೆ ತಿಳಿದುಬರುವದರೊಳಗೆ ಏಳು ವರುಷ ನಿನಗೆ ಹೀಗೆ ಕಳೆಯುವದು.


ನನ್ನಿಂದ ಕಪಟವನ್ನೂ ಸುಳ್ಳುಮಾತನ್ನೂ ತೊಲಗಿಸು, ಬಡತನವನ್ನಾಗಲಿ ಐಶ್ವರ್ಯವನ್ನಾಗಲಿ ಕೊಡದೆ ನನಗೆ ತಕ್ಕಷ್ಟು ಆಹಾರವನ್ನು ಭೋಜನಮಾಡಿಸು.


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ್ದನ್ನೂ ನೀವು ತನ್ನ ಆಜ್ಞೆಗಳನ್ನು ಕೈಕೊಳ್ಳುವವರೋ ಅಲ್ಲವೋ ಎಂದು ತಿಳಿದುಕೊಳ್ಳುವದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.


ನೀನು ಆತ್ಮದಿಂದ ಮಾತ್ರ ದೇವರ ಸ್ತೋತ್ರಮಾಡಿದರೆ ಆ ವರವನ್ನು ಹೊಂದದಿರುವ ಸಭೆಯವನಿಗೆ ನೀನು ಹೇಳಿದ್ದು ತಿಳಿಯದೆ ಇರುವದರಿಂದ ನೀನು ಮಾಡುವ ಕೃತಜ್ಞತಾಸ್ತುತಿಗೆ ಅವನು ಆಮೆನ್ ಎಂದು ಹೇಗೆ ಹೇಳಾನು?


ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಕಾಪಾಡಿಕೊಳ್ಳುವದಕ್ಕೆ ಅವರಿಗೆ ಉಪದೇಶ ಮಾಡಿರಿ. ನೋಡಿರಿ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿವಸ ನಿಮ್ಮ ಸಂಗಡ ಇರುತ್ತೇನೆ ಎಂದು ಹೇಳಿದನು.


ಆದರೆ ರಾಜ್ಯವು ಪರಾತ್ಪರನ ಭಕ್ತರಿಗೆ ಲಭಿಸುವದು, ಅವರೇ ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವರು ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.


ಇಸ್ರಾಯೇಲ್‍ದೇವನಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ; ಸರ್ವಜನರೂ ಆಮೆನ್ ಎನ್ನಲಿ. ಯಾಹುವಿಗೆ ಸ್ತೋತ್ರ!


ಯೆಹೋವನಿಗೆ ಸದಾಕಾಲವೂ ಕೊಂಡಾಟವಾಗಲಿ. ಆಮೆನ್, ಆಮೆನ್.


ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲವೂ ಪ್ರಣಾಮವಿರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್, ಆಮೆನ್.


ಯೆಹೋಯಾದಾವನ ಮಗನಾದ ಬೆನಾಯನು ಅರಸನಿಗೆ - ಹಾಗಾಗಲಿ; ನನ್ನ ಒಡೆಯನಾದ ಅರಸನ ದೇವರಾದ ಯೆಹೋವನು ಅದನ್ನು ಸ್ಥಿರಪಡಿಸಲಿ.


ಆಗ ಇಪ್ಪತ್ತುನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ ಅಡ್ಡಬಿದ್ದು ಸಿಂಹಾಸನದ ಮೇಲೆ ಕೂತಿರುವ ದೇವರಿಗೆ ನಮಸ್ಕಾರ ಮಾಡಿ - ಆಮೆನ್; ಹಲ್ಲೆಲೂಯಾ, ಅಂದರು.


ಇದಲ್ಲದೆ ಆಕಾಶದಲ್ಲಿಯೂ ಭೂವಿುಯ ಮೇಲೆಯೂ ಭೂವಿುಯ ಕೆಳಗೆಯೂ ಸಮುದ್ರದ ಮೇಲೆಯೂ ಇರುವ ಎಲ್ಲಾ ಸೃಷ್ಟಿಗಳು ಅಂದರೆ ಭೂಮ್ಯಾಕಾಶಸಮುದ್ರಗಳೊಳಗೆ ಇರುವದೆಲ್ಲವೂ - ಸಿಂಹಾಸನಾಸೀನನಿಗೂ ಯಜ್ಞದ ಕುರಿಯಾದಾತನಿಗೂ ಸ್ತೋತ್ರ ಮಾನ ಪ್ರಭಾವ ಆಧಿಪತ್ಯಗಳು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ಕೇಳಿದೆನು.


ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ - ಆಮೆನ್ ಎಂಬಾತನು ಅಂದರೆ ನಂಬತಕ್ಕ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಮೂಲನೂ ಆಗಿರುವಾತನು ಹೇಳುವದೇನಂದರೆ -


ಬೇರೆ ಕೆಲವರು ಅಪಹಾಸ್ಯ ಕೊರಡೆಯ ಪೆಟ್ಟು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.


ಸರ್ವಯುಗಗಳ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಏಕದೇವರಿಗೆ ಯುಗಯುಗಾಂತರಗಳಲ್ಲಿಯೂ ಮಾನಪ್ರಭಾವಗಳಿರಲಿ. ಆಮೆನ್.


ಹಾಗಾಗಲಿ, ಯೆಹೋವನು ಹಾಗೇ ಮಾಡಲಿ! ಯೆಹೋವನು ತನ್ನ ಆಲಯದ ಉಪಕರಣಗಳನ್ನೂ ಸೆರೆಹೋದವರೆಲ್ಲರನ್ನೂ ಬಾಬೆಲಿನಿಂದ ಈ ಸ್ಥಳಕ್ಕೆ ಪುನಃ ಬರಮಾಡಿ ನೀನು ನುಡಿದ ಮಾತುಗಳನ್ನು ನೆರವೇರಿಸಲಿ!


ರಾಜ್ಯವು ಯೆಹೋವನದೇ; ಎಲ್ಲಾ ಜನಾಂಗಗಳಿಗೂ ಆತನೇ ಒಡೆಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು