ಮತ್ತಾಯ 6:16 - ಕನ್ನಡ ಸತ್ಯವೇದವು J.V. (BSI)16 ಇದಲ್ಲದೆ ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರುವದಕ್ಕಾಗಿ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “ಇದಲ್ಲದೆ ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರಿಬರುವಂತೆ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ಉಪವಾಸ ಮಾಡುವಾಗ ಕಪಟಿಗಳಂತೆ ಮುಖ ಸಪ್ಪೆಮಾಡಬೇಡಿ. ಜನರ ಕಣ್ಣಿಗೆ ತಾವು ಉಪವಾಸಿಗಳೆಂದು ತೋರ್ಪಡಿಸಿಕೊಳ್ಳುವುದಕ್ಕಾಗಿ ಅವರು ಮುಖವನ್ನು ಬಾಡಿಸಿಕೊಳ್ಳುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿಯಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ನೀವು ಉಪವಾಸ ಮಾಡುವಾಗ ನಿಮ್ಮ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿ. ಕಪಟಿಗಳು ಹಾಗೆ ಮಾಡುತ್ತಾರೆ. ಆದರೆ ನೀವು ಕಪಟಿಗಳಂತಿರಬೇಡಿ. ತಾವು ಉಪವಾಸ ಮಾಡುತ್ತಿರುವುದಾಗಿ ಜನರಿಗೆ ತೋರ್ಪಡಿಸಿಕೊಳ್ಳಲು ಅವರು ತಮ್ಮ ಮುಖಗಳನ್ನು ವಿಕಾರಮಾಡಿಕೊಳ್ಳುತ್ತಾರೆ. ಆ ಕಪಟಿಗಳು ತಮಗೆ ಬರತಕ್ಕ ಪ್ರತಿಫಲವನ್ನು ಸಂಪೂರ್ಣವಾಗಿ ಹೊಂದಾಯಿತೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ನೀವು ಉಪವಾಸ ಮಾಡುವಾಗ ಕಪಟಿಗಳಂತೆ ಮುಖ ಸಪ್ಪಗೆ ಮಾಡಿಕೊಳ್ಳಬೇಡಿರಿ, ತಾವು ಉಪವಾಸ ಮಾಡುತ್ತಿದ್ದೇವೆಂದು ಜನರಿಗೆ ತೋರ್ಪಡಿಸಿಕೊಳ್ಳುವುದಕ್ಕಾಗಿ ಅವರು ತಮ್ಮ ಮುಖವನ್ನು ಬಾಡಿಸಿಕೊಂಡಿರುತ್ತಾರೆ. ಅವರು ತಮಗೆ ಬರತಕ್ಕ ಪ್ರತಿಫಲವನ್ನು ಪೂರ್ತಿಯಾಗಿ ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 “ತುಮಿ ಉಪಾಸ್ ಹೊತ್ತ್ಯಾ ತನ್ನಾ, ಕುಸ್ಡ್ಯಾ ಲೊಕಾನಿ ಕರ್ಲ್ಯಾ ಸರ್ಕೆ ತುಮ್ಚೆ ತೊಂಡ್ ಬಾವ್ಲ್ಯಾ ಸರ್ಕೆ ಕರುನ್ ಘೆವ್ನ್ ರ್‍ಹಾವ್‍ನಕಾಸಿ, ಸಗ್ಳೆಜಾನಾಕ್ನಿ ಅಪ್ನಿ ಉಪಾಸ್ ಕರುಕ್ ಲಾಗ್ಲಾ ಮನುನ್ ಕಳುಕ್ ಪಾಜೆ ಮನುನ್ ತೆನಿ ತಸೆ ಕರುನ್ ಘೆವ್ನ್ ರ್‍ಹಾತ್ಯಾತ್. ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ತೆಂಚೆ ಸಗ್ಳೆ ಪ್ರತಿಫಳ್ ತೆಂಕಾ ಗಾವುನ್ ಹೊಲಾ. ಅಧ್ಯಾಯವನ್ನು ನೋಡಿ |