Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:23 - ಕನ್ನಡ ಸತ್ಯವೇದವು J.V. (BSI)

23 ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ದೇಹವೆಲ್ಲಾ ಕತ್ತಲಾಗಿರುವದು. ಹಾಗಾದರೆ ನಿನ್ನೊಳಗಿರುವ ಬೆಳಕೇ ಕತ್ತಲಾದರೆ ಆ ಕತ್ತಲು ಎಷ್ಟೆನ್ನಬೇಕು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ದೇಹವೆಲ್ಲಾ ಕತ್ತಲಾಗಿರುವುದು. ನಿನ್ನೊಳಗಿರುವ ಬೆಳಕೇ ಕತ್ತಲಾದರೆ ಆ ಕತ್ತಲು ಎಷ್ಟು ಮಹತ್ತರವಾಗಿರಬೇಕು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನಿನ್ನೊಳಗಿರುವ ಬೆಳಕೇ ಕತ್ತಲೆಯಾದಲ್ಲಿ ಅದೆಂತಹ ಕರಾಳ ಕತ್ತಲೆಯಾಗಿರಬಹುದು!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದರೆ ನಿನ್ನ ಕಣ್ಣು ಕೆಟ್ಟಿದ್ದರೆ, ನಿನ್ನ ಶರೀರವೆಲ್ಲ ಕತ್ತಲೆಯಿಂದ (ಪಾಪದಿಂದ) ತುಂಬಿರುವುದು. ನಿನ್ನಲ್ಲಿರುವ ಒಂದೇ ಬೆಳಕು ನಿಜವಾಗಿಯೂ ಕತ್ತಲಾದರೆ, ಆಗ ನೀನು ಕಗ್ಗತ್ತಲಲ್ಲಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ, ನಿನ್ನ ದೇಹವೆಲ್ಲಾ ಕತ್ತಲಾಗಿರುವುದು. ನಿನ್ನಲ್ಲಿರುವ ಬೆಳಕೇ ಕತ್ತಲಾಗಿರುವುದಾದರೆ ಅದು ಎಂತಹ ಕಾರ್ಗತ್ತಲಲ್ಲವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಜರ್‍ಕಡತ್ ತುಮ್ಚೆ ಡೊಳೆ ಸಮಾ ನಾತ್ ತುಮ್ಚೆ ಆಂಗ್ ಕಾಳ್ಕಾತ್ ರ್‍ಹಾತಾ. ತೆಚೆಸಾಟ್ನಿ ತುಮ್ಚ್ಯಾ ಭುತ್ತುರ್‍ಲೊ ಉಜ್ವೊಡುಚ್ ಕಾಳೊಕ್ ಹೊಲೊ ತರ್ ತೊ ಕಾಳೊಕ್ ಕವ್ಡೊ ದಾಟ್ ರ್‍ಹಾತಾ ಅಸಿಲ್!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:23
22 ತಿಳಿವುಗಳ ಹೋಲಿಕೆ  

ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿದ್ದಾನೆ, ಕತ್ತಲೆಯಲ್ಲಿ ನಡೆದುಕೊಳ್ಳುತ್ತಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕಾಣದ ಹಾಗೆ ಮಾಡಿದ್ದರಿಂದ ತಾನು ಎಲ್ಲಿಗೆ ಹೋಗುತ್ತಾನೋ ಅವನಿಗೆ ತಿಳಿಯದು.


ಕಣ್ಣು ದೇಹಕ್ಕೆ ದೀಪವಾಗಿದೆ; ಹೀಗಿರುವಲ್ಲಿ ನಿನ್ನ ಕಣ್ಣು ನೆಟ್ಟಗಿದ್ದರೆ ನಿನ್ನ ದೇಹವೆಲ್ಲಾ ಬೆಳಕಾಗಿರುವದು.


ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲರಿಯರು.


ತಾನೇ ಜ್ಞಾನಿಯೆಂದೆಣಿಸಿಕೊಳ್ಳುವವನನ್ನು ನೋಡು; ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನಿಡಬಹುದು.


ಅವರು ನಿಷ್ಪ್ರಯೋಜನವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ; ಅವರ ಮನಸ್ಸು ಮೊಬ್ಬಾಗಿ ಹೋಗಿದೆ, ಅವರು ತಮ್ಮ ಹೃದಯದ ಕಾಠಿಣ್ಯದ ನಿವಿುತ್ತದಿಂದಲೂ ತಮ್ಮಲ್ಲಿರುವ ಅಜ್ಞಾನದ ನಿವಿುತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ.


ಪ್ರಾಕೃತಮನುಷ್ಯನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ ಹುಚ್ಚುಮಾತಾಗಿ ತೋರುತ್ತವೆ; ಅವು ಆತ್ಮವಿಚಾರದಿಂದ ತಿಳಿಯ ತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸಲಾರನು.


ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚರಾದರು.


ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕ್ರಿಸ್ತನಲ್ಲಿದ್ದು ಬೆಳಕಾಗಿದ್ದೀರಿ.


ಆತನು - ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೇ ಕೊಟ್ಟದೆ, ಉಳಿದವರಿಗೆ ಕಣ್ಣಿದ್ದರೂ ನೋಡದಂತೆಯೂ, ಕಿವಿಯಿದ್ದರೂ ತಿಳುಕೊಳ್ಳದಂತೆಯೂ ಸಾಮ್ಯರೂಪವಾಗಿ ಹೇಳಲಾಗುತ್ತದೆ.


ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸುವ ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವದಿಲ್ಲ.


ನನ್ನ ಬದುಕನ್ನು ನಾನು ಬೇಕಾದ ಹಾಗೆ ಮಾಡಬಹುದಲ್ಲವೋ? ನಾನು ಒಳ್ಳೆಯವನಾಗಿರುವದು ನಿನ್ನ ಕಣ್ಣನ್ನು ಒತ್ತುತ್ತದೋ ಎಂದು ಹೇಳಿದನು.


ಸೂಳೆಗಾರಿಕೆ ಕಳ್ಳತನ ಕೊಲೆ ಹಾದರ ದ್ರವ್ಯಾಶೆ ಕೆಡುಕುತನ ಮೋಸ ಬಂಡತನ ಹೊಟ್ಟೇಕಿಚ್ಚು ಬೈಗಳು ಸೊಕ್ಕು ಬುದ್ಧಿಗೇಡಿತನ ಇವೇ ಮೊದಲಾದವುಗಳ ಕೆಟ್ಟ ಆಲೋಚನೆಗಳು ಹೊರಡುತ್ತವೆ.


ನಿನ್ನ ಕಣ್ಣು ದೇಹಕ್ಕೆ ದೀಪವಾಗಿದೆ; ನಿನ್ನ ಕಣ್ಣು ನೆಟ್ಟಗಿರುವಾಗ ಅದರಂತೆ ನಿನ್ನ ದೇಹವೆಲ್ಲಾ ಬೆಳಕಾಗಿರುವದು; ಅದು ಕೆಟ್ಟದ್ದಾಗಿರುವಾಗ ಅದರಂತೆ ನಿನ್ನ ದೇಹವು ಕತ್ತಲಾಗಿರುವದು. ಆದದರಿಂದ ನಿನ್ನೊಳಗಿರುವ ಬೆಳಕೇ ಕತ್ತಲಾಗಿದೆಯೋ ಏನೋ ನೋಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು