Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:25 - ಕನ್ನಡ ಸತ್ಯವೇದವು J.V. (BSI)

25 ಈ ಕಾರಣದಿಂದ - ನಮ್ಮ ಪ್ರಾಣಧಾರಣೆಗೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗೆ ಏನು ಹೊದ್ದುಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬದಾಗಿ ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದದ್ದಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 “ಈ ಕಾರಣದಿಂದ, ನಮ್ಮ ಜೀವನಕ್ಕೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗಾಗಿ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದುದಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 “ನಾನು ಹೇಳುವುದನ್ನು ಕೇಳಿ: ‘ಪ್ರಾಣಧಾರಣೆಗೆ ಏನು ಉಣ್ಣುವುದು, ಏನು ಕುಡಿಯುವುದು; ದೇಹರಕ್ಷಣೆಗೆ ಏನು ಹೊದೆಯುವುದು’ ಎಂದು ಚಿಂತೆಮಾಡಬೇಡಿ. ಊಟಕ್ಕಿಂತ ಪ್ರಾಣ ಉಡುಪಿಗಿಂತ ದೇಹ ಮೇಲಾದುದಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ಆದ್ದರಿಂದ ನಿಮ್ಮ ಪ್ರಾಣಧಾರಣೆಗೆ ಬೇಕಾದ ಆಹಾರಕ್ಕಾಗಲಿ ದೇಹಕ್ಕೆ ಬೇಕಾದ ಬಟ್ಟೆಗಾಗಲಿ ನೀವು ಚಿಂತಿಸಬಾರದು. ಪ್ರಾಣವು ಆಹಾರಕ್ಕಿಂತಲೂ ದೇಹವು ಬಟ್ಟೆಗಿಂತಲೂ ಬಹಳ ಮುಖ್ಯವಾದದ್ದೆಂದು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 “ಆದ್ದರಿಂದ ನಿಮ್ಮ ಜೀವನಕ್ಕಾಗಿ, ಏನು ಊಟಮಾಡಬೇಕು, ಏನು ಕುಡಿಯಬೇಕು ಅಥವಾ ನಿಮ್ಮ ದೇಹಕ್ಕೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವೂ ವಸ್ತ್ರಕ್ಕಿಂತ ದೇಹವೂ ಮೇಲಾದದ್ದಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 “ತೆಚೆಸಾಟ್ನಿ ಮಿಯಾ ತುಮ್ಕಾ ಸಾಂಗ್ತಾ, ತುಮಿ ಬಾಳ್ವಿ ಕರುಕ್ ಪೊಟಾಕ್ ಖಾತಲ್ಯಾ ಅನಿ ಫಿತಲ್ಯಾ ವಿಶಯಾತ್, ನಾಜಾಲ್ಯಾರ್ ಆಂಗಾರ್ ನೆಸ್ತಲ್ಯಾ ಕಪ್ಡ್ಯಾಂಚ್ಯಾ ವಿಶಯಾತ್ ಯವ್ಜುನಕಾಶಿ, ಖಾತಲ್ಯಾಚ್ಯಾನ್ಕಿ ಜಿವ್ ಕವ್ಡ್ಯಾಕಿ ಕಿಮ್ತಿಚೊ ಹೊಯ್ ಕಾಯ್ ನ್ಹಯ್? ಅನಿ ಕಪ್ಡ್ಯಾಂಚ್ಯಾನ್ಕಿ ಆಂಗ್ ಕವ್ಡ್ಯಾಕಿ ಕಿಮ್ತಿಚೆ ಹೊಯ್ ಕಾಯ್ ನ್ಹಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:25
22 ತಿಳಿವುಗಳ ಹೋಲಿಕೆ  

ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯಪಡಿಸಿರಿ.


ನಿಮ್ಮ ಚಿಂತೆಯನ್ನೆಲ್ಲಾ ಆತನ ಮೇಲೆ ಹಾಕಿರಿ, ಆತನು ನಿಮಗೋಸ್ಕರ ಚಿಂತಿಸುತ್ತಾನೆ.


ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ; ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೇ?


ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು; ಆತನು ನಿನ್ನನ್ನು ಉದ್ಧಾರಮಾಡುವನು. ನೀತಿವಂತನನ್ನು ಎಂದಿಗೂ ಕದಲಗೊಡಿಸನು.


ಹೀಗಿರುವದರಿಂದ - ಏನು ಊಟಮಾಡಬೇಕು, ಏನು ಕುಡಿಯಬೇಕು, ಏನು ಹೊದ್ದುಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ.


ಆದರೆ ಅವರು ನಿಮ್ಮನ್ನು ಒಪ್ಪಿಸಿಕೊಡುವಾಗ ಹೇಗೆ ಮಾತಾಡಬೇಕು, ಏನು ಹೇಳಬೇಕು ಎಂದು ಚಿಂತೆಮಾಡಬೇಡಿರಿ; ಆಡತಕ್ಕ ಮಾತು ಆ ಗಳಿಗೆಯಲ್ಲಿ ನಿಮಗೆ ಸೂಚನೆಯಾಗುವದು.


ಆದರೆ ನೀವು ಚಿಂತೆಯಿಲ್ಲದವರಾಗಿರಬೇಕೆಂಬದು ನನ್ನ ಇಷ್ಟ. ಮದುವೆಯಿಲ್ಲದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ.


ಆದದರಿಂದ ನಾಳಿನ ವಿಷಯವಾಗಿ ಚಿಂತೆಮಾಡಬೇಡಿರಿ; ನಾಳಿನ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವದು. ಆ ಹೊತ್ತಿನ ಕಾಟ ಆ ಹೊತ್ತಿಗೆ ಸಾಕು.


ಯುದ್ಧಕ್ಕೆ ಹೋಗುವ ಸೈನಿಕನು ಲೋಕ ವ್ಯವಹಾರದಲ್ಲಿ ಸಿಕ್ಕಿಕೊಳ್ಳದೆ ತನ್ನನ್ನು ಸೈನ್ಯದಲ್ಲಿ ಸೇರಿಸಿಕೊಂಡವನನ್ನು ಮೆಚ್ಚಿಸುವದಕ್ಕೆ ಪ್ರಯಾಸ ಪಡುತ್ತಿರುವನಲ್ಲವೇ.


ಬೇರೆ ಕೆಲವರು ವಾಕ್ಯವನ್ನು ಕೇಳಿದ ಮೇಲೆ ಬರಬರುತ್ತಾ ಈ ಜೀವಮಾನದಲ್ಲಿ ಆಗುವ ಚಿಂತೆ ಐಶ್ವರ್ಯ ಭೋಗಗಳಿಂದ ಅಡಗಿಸಲ್ಪಟ್ಟು ಫಲವನ್ನು ಮಾಗಿಸುವದಿಲ್ಲ; ಇವರೇ ಮುಳ್ಳುಗಿಡಗಳಲ್ಲಿ ಬೀಜ ಬಿದ್ದ ನೆಲವಾಗಿರುವವರು.


ಒಬ್ಬನು ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ ಐಶ್ವರ್ಯದಿಂದುಂಟಾಗುವ ಮೋಸವೂ ಆ ವಾಕ್ಯವನ್ನು ಅಡಗಿಸಿಬಿಡುವದರಿಂದ, ಫಲವನ್ನು ಕೊಡದೆ ಇರುತ್ತಾನೆ; ಇವನೇ ಮುಳ್ಳುಗಿಡಗಳಲ್ಲಿ ಬೀಜ ಬಿದ್ದ ನೆಲವಾಗಿರುವವನು.


ಅವರು ನಿಮ್ಮನ್ನು ಸಭಾಮಂದಿರಗಳ ಅಧ್ಯಕ್ಷರ ಮುಂದಕ್ಕೂ ಅಧಿಕಾರಿಗಳ ಮುಂದಕ್ಕೂ ಅಧಿಪತಿಗಳ ಮುಂದಕ್ಕೂ ಹಿಡುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರಕೊಡಬೇಕು? ಏನು ಹೇಳಬೇಕು ಎಂದು ಚಿಂತೆಮಾಡಬೇಡಿರಿ.


ನಿಮ್ಮನ್ನು ಹಿಡುಕೊಂಡುಹೋಗಿ ಒಪ್ಪಿಸುವಾಗ ಏನು ಹೇಳಬೇಕು ಎಂದು ಮುಂಚಿತವಾಗಿ ಚಿಂತೆಮಾಡಬೇಡಿರಿ; ಆ ಗಳಿಗೆಯಲ್ಲಿ ನಿಮಗೆ ಸೂಚನೆಯಾಗುವಂಥ ಮಾತನ್ನೇ ಆಡಿರಿ; ಮಾತಾಡುವವರು ನೀವಲ್ಲ, ಪವಿತ್ರಾತ್ಮನೇ.


ಮಹಾಪದವಿಯನ್ನು ನಿರೀಕ್ಷಿಸಿಕೊಳ್ಳುತ್ತೀಯೋ? ನಿರೀಕ್ಷಿಸಬೇಡ; ಆಹಾ, ನಾನು ನರಜನ್ಮದವರೆಲ್ಲರಿಗೂ ಕೇಡನ್ನುಂಟುಮಾಡುವೆನು; ಆದರೆ ನೀನು ಎಲ್ಲಿಗೆ ಹೋದರೂ ಪ್ರಾಣವೊಂದನ್ನೇ ಬಾಚಿಕೊಂಡುಹೋಗುವದಕ್ಕೆ ನಿನಗೆ ಅವಕಾಶಕೊಡುವೆನು. ಇದು ಯೆಹೋವನಾದ ನನ್ನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು