Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:31 - ಕನ್ನಡ ಸತ್ಯವೇದವು J.V. (BSI)

31 ಹೀಗಿರುವದರಿಂದ - ಏನು ಊಟಮಾಡಬೇಕು, ಏನು ಕುಡಿಯಬೇಕು, ಏನು ಹೊದ್ದುಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಹೀಗಿರುವುದರಿಂದ, ‘ಏನು ಊಟಮಾಡಬೇಕು, ಏನು ಕುಡಿಯಬೇಕು, ಏನು ಧರಿಸಿಕೊಳ್ಳಬೇಕು’ ಎಂದು ಚಿಂತೆಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆದುದರಿಂದ ತಿನ್ನಲು ಏನು? ಕುಡಿಯಲು ಏನು? ಉಡಲು ಏನು? ಎಂದು ಪೇಚಾಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “‘ನಾವು ಏನು ತಿನ್ನಬೇಕು? ಏನು ಕುಡಿಯಬೇಕು? ಏನನ್ನು ಧರಿಸಬೇಕು?’ ಎಂದು ಚಿಂತಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆದ್ದರಿಂದ, ‘ಏನು ಊಟಮಾಡಬೇಕು? ಏನು ಕುಡಿಯಬೇಕು ಮತ್ತು ಏನು ಧರಿಸಬೇಕು?’ ಎಂದು ಚಿಂತಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 “ತೆಚೆಸಾಟ್ನಿ ಅಮಿ ಕಾಯ್ ಖಾತಲೆ? ಕಾಯ್ ಫಿತಲೆ? ಕಾಯ್ ನೆಸ್ತಲೆ? ಮನುನ್ ಯವ್ಜುನಕಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:31
16 ತಿಳಿವುಗಳ ಹೋಲಿಕೆ  

ನಿಮ್ಮ ಚಿಂತೆಯನ್ನೆಲ್ಲಾ ಆತನ ಮೇಲೆ ಹಾಕಿರಿ, ಆತನು ನಿಮಗೋಸ್ಕರ ಚಿಂತಿಸುತ್ತಾನೆ.


ಏನು ಊಟಮಾಡಬೇಕು? ಏನು ಕುಡಿಯಬೇಕು ಎಂದು ತವಕಪಡಬೇಡಿರಿ ಮತ್ತು ಅನುಮಾನ ಪಡಬೇಡಿರಿ.


ಮನುಷ್ಯನು ರೊಟ್ಟಿತಿಂದ ಮಾತ್ರದಿಂದ ಬದುಕುವದಿಲ್ಲ, ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಬದುಕುವನು ಎಂದು ಬರೆದದೆ ಅಂದನು.


ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು; ಆತನು ನಿನ್ನನ್ನು ಉದ್ಧಾರಮಾಡುವನು. ನೀತಿವಂತನನ್ನು ಎಂದಿಗೂ ಕದಲಗೊಡಿಸನು.


ಶಿಷ್ಯರು - ಇಷ್ಟು ಜನರನ್ನು ತೃಪ್ತಿಪಡಿಸಲಾಗುವಷ್ಟು ರೊಟ್ಟಿ ಈ ಅಡವಿಯಲ್ಲಿ ನಮಗೆ ಎಲ್ಲಿಂದ ಬಂದೀತು? ಅನ್ನಲು


ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.


ಅಮಚ್ಯನು ದೇವರ ಮನುಷ್ಯನನ್ನು - ಹಾಗಾದರೆ ನಾನು ಇಸ್ರಾಯೇಲ್ ಸೈನ್ಯಕ್ಕೋಸ್ಕರ ನೂರು ತಲಾಂತುಗಳನ್ನು ಕೊಟ್ಟ ವಿಷಯದಲ್ಲಿ ಮಾಡುವದೇನು ಎಂದು ಕೇಳಲು ಅವನು ಯೆಹೋವನು ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿನಗೆ ಕೊಡಬಲ್ಲನು ಅಂದನು.


ತನ್ನಲ್ಲಿ ಭಯಭಕ್ತಿಯುಳ್ಳವರಿಗೆ ಆಹಾರವನ್ನು ಕೊಟ್ಟಿದ್ದಾನೆ; ತನ್ನ ಒಡಂಬಡಿಕೆಯನ್ನು ಯಾವಾಗಲೂ ನೆನಪಿನಲ್ಲಿಡುವನು.


ಈ ಕಾರಣದಿಂದ - ನಮ್ಮ ಪ್ರಾಣಧಾರಣೆಗೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗೆ ಏನು ಹೊದ್ದುಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬದಾಗಿ ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದದ್ದಲ್ಲವೇ.


ಚಿಂತೆಮಾಡಿಮಾಡಿ ಒಂದು ಮೊಳ ಉದ್ದ ಬೆಳೆಯುವದು ನಿಮ್ಮಲ್ಲಿ ಯಾರಿಂದಾದೀತು?


ಸ್ವಾವಿುಯು ಆಕೆಗೆ - ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯವಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ.


ಅವರು ನಿಮ್ಮನ್ನು ಸಭಾಮಂದಿರಗಳ ಅಧ್ಯಕ್ಷರ ಮುಂದಕ್ಕೂ ಅಧಿಕಾರಿಗಳ ಮುಂದಕ್ಕೂ ಅಧಿಪತಿಗಳ ಮುಂದಕ್ಕೂ ಹಿಡುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರಕೊಡಬೇಕು? ಏನು ಹೇಳಬೇಕು ಎಂದು ಚಿಂತೆಮಾಡಬೇಡಿರಿ.


ಇದಲ್ಲದೆ ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ - ಈ ಕಾರಣದಿಂದ ಪ್ರಾಣಧಾರಣೆಗೆ ಏನು ಊಟಮಾಡಬೇಕು? ದೇಹರಕ್ಷಣೆಗೆ ಏನು ಹೊದ್ದುಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬದಾಗಿ ನಿಮಗೆ ಹೇಳುತ್ತೇನೆ.


ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯಪಡಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು