Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:33 - ಕನ್ನಡ ಸತ್ಯವೇದವು J.V. (BSI)

33 ಹೀಗಿರುವದರಿಂದ, ನೀವು ಮೊದಲು ದೇವರ ರಾಜ್ಯಕ್ಕಾಗಿಯೂ ನೀತಿಗಾಗಿಯೂ ತವಕಪಡಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ನೀವಾದರೋ ಮೊದಲು ದೇವರ ಸಾಮ್ರಾಜ್ಯಕ್ಕಾಗಿ, ಅವರ ಸತ್ಸಂಬಂಧಕ್ಕಾಗಿ ತವಕಪಡಿ. ಇದರೊಂದಿಗೆ ಅವೆಲ್ಲವೂ ನಿಮಗೆ ನೀಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆದ್ದರಿಂದ ನೀವು ದೇವರ ರಾಜ್ಯಕ್ಕಾಗಿ ಮತ್ತು ಆತನ ಚಿತ್ತಕ್ಕನುಸಾರವಾಗಿ ಕಾರ್ಯಗಳನ್ನು ಮಾಡಲು ಬಹಳ ತವಕಪಡಬೇಕು. ಆಗ ನಿಮಗೆ ಅಗತ್ಯವಾದ ಉಳಿದವುಗಳನ್ನು ಸಹ ಕೊಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ನೀವು ಮೊದಲು ದೇವರ ರಾಜ್ಯವನ್ನೂ ಅದರ ನೀತಿಯನ್ನೂ ಹುಡುಕಿರಿ. ಆಗ ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಅದ್ದಿ ತುಮಿ ದೆವಾಕ್ ಕಾಯ್ ಪಾಜೆ ತೆ ಕರಾ, ಅನಿ ಸರ್‍ಗಾಚ್ಯಾ ರಾಜಾಚಿ ವಾಟ್ ಹುಡ್ಕಾ. ತನ್ನಾ ತುಮ್ಕಾ ಗರಜ್ ಹೊತ್ತೆ ಸಗ್ಳೆಬಿ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:33
51 ತಿಳಿವುಗಳ ಹೋಲಿಕೆ  

ನೀವಾದರೋ ದೇವರ ರಾಜ್ಯಕ್ಕಾಗಿ ತವಕಪಡಿರಿ; ಇದರ ಕೂಡ ಅವೂ ನಿಮಗೆ ದೊರಕುವವು.


ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರಿಗೆ ತೃಪ್ತಿಯಾಗುವದು.


ದುಡಿಯಿರಿ; ಕೆಟ್ಟುಹೋಗುವ ಆಹಾರಕ್ಕಾಗಿ ದುಡಿಯಬೇಡಿರಿ, ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿ ದುಡಿಯಿರಿ; ಇಂಥ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ಇದಕ್ಕಾಗಿ ತಂದೆಯಾದ ದೇವರು ಆತನನ್ನು ನೇವಿುಸಿ ಮುದ್ರೆಹಾಕಿದ್ದಾನೆ ಅಂದನು.


ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ನೀತಿಯೂ ಸಮಾಧಾನವೂ ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.


ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ; ಈವರೆಗೂ ನೀತಿವಂತನು ದಿಕ್ಕಿಲ್ಲದೆ ಬಿದ್ದಿರುವದನ್ನಾಗಲಿ ಅವನ ಸಂತತಿಯವರು ಭಿಕ್ಷೆಬೇಡಿ ತಿನ್ನುವದನ್ನಾಗಲಿ ನೋಡಲಿಲ್ಲ.


ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.


ಮತ್ತು ನನ್ನ ಹೆಸರಿನ ನಿವಿುತ್ತ ಮನೆಗಳನ್ನಾಗಲಿ ಅಣ್ಣತಮ್ಮಂದಿರನ್ನಾಗಲಿ ಅಕ್ಕತಂಗಿಯರನ್ನಾಗಲಿ ತಂದೆಯನ್ನಾಗಲಿ ತಾಯಿಯನ್ನಾಗಲಿ ಮಕ್ಕಳನ್ನಾಗಲಿ ಭೂವಿುಯನ್ನಾಗಲಿ ಬಿಟ್ಟುಬಿಟ್ಟಿರುವವರೆಲ್ಲರಿಗೆ ಅನೇಕ ಪಾಲು ಹೆಚ್ಚಾಗಿ ಸಿಕ್ಕುವದು; ಮತ್ತು ಅವರು ನಿತ್ಯಜೀವಕ್ಕೆ ಬಾಧ್ಯರಾಗುವರು.


ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?


ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು; ಅದಕ್ಕೆ ಇಹಪರಗಳಲ್ಲಿಯೂ ಜೀವವಾಗ್ದಾನ ಉಂಟು.


ನಾವು ಆತನಲ್ಲಿ ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಪಾಪಜ್ಞಾನವಿಲ್ಲದ ಆತನನ್ನು ನಮಗೋಸ್ಕರ ಪಾಪ ಸ್ವರೂಪಿಯಾಗ ಮಾಡಿದನು.


ಹೇಗಂದರೆ ದೇವರಿಂದ ದೊರಕುವ ನೀತಿಯು ಅದರಲ್ಲಿ ತೋರಿಬರುತ್ತದೆ. ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ಪ್ರಕಟಿಸುವಂಥದಾಗಿದೆ.


ಇದರಲ್ಲಿ ನನ್ನ ಉದ್ದೇಶವೇನಂದರೆ - ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು ನೇಮನಿಷ್ಠೆಗಳ ಫಲವಾಗಿರುವ ಸ್ವನೀತಿಯನ್ನಾಶ್ರಯಿಸದೆ ಕ್ರಿಸ್ತನನ್ನು ನಂಬುವದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿ ಕಾಣಿಸಿಕೊಳ್ಳಬೇಕೆಂಬದೇ.


ನೀವು ಕ್ರಿಸ್ತ ಯೇಸುವಿನಲ್ಲಿರುವದು ಆತನಿಂದಲೇ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿ ಶುದ್ಧೀಕರಣ ವಿಮೋಚನೆಗಳಿಗೆ ಕಾರಣನೂ ಆದನು.


ಅಂದಿನಿಂದ ಯೇಸು - ಪರಲೋಕರಾಜ್ಯವು ಸಮೀಪಿಸಿತು; ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.


ಪರಲೋಕರಾಜ್ಯವು ಸಮೀಪವಾಯಿತು; ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಯೂದಾಯದ ಅಡವಿಯಲ್ಲಿ ಸಾರಿ ಹೇಳುತ್ತಾ ಬಂದನು.


ದೇವರು ನ್ಯಾಯವಾದ ತೀರ್ಪುಮಾಡುತ್ತಾನೆಂಬದಕ್ಕೆ ನಿಮ್ಮ ತಾಳ್ಮೆಯು ಸ್ಪಷ್ಟವಾದ ನಿದರ್ಶನವಾಗಿದೆ. ಯಾವ ದೇವರಾಜ್ಯಕ್ಕೋಸ್ಕರ ನೀವು ಕಷ್ಟವನ್ನನುಭವಿಸುತ್ತೀರೋ ಅದಕ್ಕೆ ನೀವು ಯೋಗ್ಯರಾಗಬೇಕೆಂಬದೇ ದೇವರ ಅಭಿಪ್ರಾಯ.


ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.


ಯಾವ ಅಡ್ಡಿಯೂ ಇಲ್ಲದೆ ತುಂಬಾ ಧೈರ್ಯದಿಂದ ದೇವರ ರಾಜ್ಯವನ್ನು ಪ್ರಸಿದ್ಧಿಪಡಿಸುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿ ಉಪದೇಶಮಾಡುತ್ತಾ ಇದ್ದನು.


ಮತ್ತು ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ದೇವರು ನಿಮಗೆ ಧಾರಾಳವಾಗಿ ಅನುಗ್ರಹಿಸುವನು.


ಆಗ ಎಲೀಯನು ಆಕೆಗೆ - ಹೆದರಬೇಡ; ನೀನು ಹೇಳಿದಂತೆ ಮಾಡು, ಆದರೆ ಮೊದಲು ಅದರಿಂದ ನನಗೋಸ್ಕರ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ; ತರುವಾಯ ನಿನಗೂ ನಿನ್ನ ಮಗನಿಗೂ ಮಾಡಿಕೋ.


ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರ ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವದೇನಂದರೆ -


ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.


ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲ್ಯರು ನೆಮ್ಮದಿಯಾಗಿ ವಾಸಿಸುವರು; ಯೆಹೋವ ಚಿದ್ಕೇನು [ಅಂದರೆ ಯೆಹೋವನೇ ನಮ್ಮ ಸದ್ಧರ್ಮ] ಎಂಬ ಹೆಸರು ಅವನಿಗಾಗುವದು.


ಯೆಹೋವನಲ್ಲಿ ಮಾತ್ರ ಸತ್ಯಕಾರ್ಯಗಳೂ ಶಕ್ತಿಯೂ ಉಂಟು; ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಮರೆಹೊಗುವರು;


ಪೌಲನಾಗಲಿ ಅಪೊಲ್ಲೋಸನಾಗಲಿ ಕೇಫನಾಗಲಿ, ಲೋಕವಾಗಲಿ ಜೀವವಾಗಲಿ ಮರಣವಾಗಲಿ, ಈಗಿನ ಸಂಗತಿಗಳಾಗಲಿ ಮುಂದಣ ಸಂಗತಿಗಳಾಗಲಿ ಸಮಸ್ತವೂ ನಿಮ್ಮದೇ;


ಇಗೋ, ಇಷ್ಟು ದಿವಸ ನಿಮ್ಮಲ್ಲಿ ಸಂಚಾರಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ಕಾಣುವದಿಲ್ಲವೆಂದು ಬಲ್ಲೆನು.


ಅವನ ಮನೆಯಲ್ಲಿ ಧನೈಶ್ವರ್ಯಗಳಿರುವವು; ಅವನ ನೀತಿಯು ಸದಾಕಾಲವೂ ಫಲಿಸುತ್ತಿರುವದು.


ನನ್ನಲ್ಲಿ ಧನಘನತೆಗಳೂ ಶ್ರೇಷ್ಠಸಂಪತ್ತೂ ನೀತಿಯೂ ಇರುತ್ತವೆ.


ಯೆಹೋವನು ನೀತಿವಂತನನ್ನು ಹಸಿವೆಗೊಳಿಸನು; ದುಷ್ಟನ ಆಶೆಯನ್ನು ಭಂಗಪಡಿಸುತ್ತಾನೆ.


ಯಥಾರ್ಥವಂತರನ್ನು ದುರ್ಮಾರ್ಗಕ್ಕೆ ಎಳೆಯುವವನು ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು; ನಿರ್ದೋಷಿಗಳಿಗೋ ಸುಖವು ಸೊತ್ತಾಗುವದು.


ಜ್ಞಾನಿಯ ಬುದ್ಧಿಯು ಅವನ ಬಲಗಡೆಯಿರುವದು, ಅಜ್ಞಾನಿಯ ಬುದ್ಧಿಯು ಅವನ ಎಡಗಡೆಯಿರುವದು.


ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಹಾರೈಸಿದ್ದೇವೆ, ಹೌದು, ನಮ್ಮ ಆತ್ಮದಲ್ಲಿ ನಿನ್ನನ್ನು ತವಕದಿಂದ ಹುಡುಕಿದ್ದೇವೆ. ನೀನು ಲೋಕದಲ್ಲಿ ನ್ಯಾಯಕಾರ್ಯಗಳನ್ನು ನಡಿಸುವಾಗ ಭೂನಿವಾಸಿಗಳು ಧರ್ಮಜ್ಞಾನವನ್ನು ಪಡೆದುಕೊಳ್ಳುವರು.


ಜ್ಞಾನವೂ ತಿಳುವಳಿಕೆಯೂ ರಕ್ಷಣ ಕಾರ್ಯಸಮೃದ್ಧಿಯೂ ಇರುವದರಿಂದ ನಿನ್ನ ಕಾಲದಲ್ಲಿ ಸ್ಥೈರ್ಯವಿರುವದು; ಯೆಹೋವನ ಮೇಲಣ ಭಯಭಕ್ತಿಯು ನಿನಗೆ ನಿಧಿಯಾಗುವದು.


ಯೇಸು ಅವರಿಗೆ - ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವಾಗ ನನ್ನನ್ನು ಹಿಂಬಾಲಿಸಿರುವ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು