Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:34 - ಕನ್ನಡ ಸತ್ಯವೇದವು J.V. (BSI)

34 ಆದದರಿಂದ ನಾಳಿನ ವಿಷಯವಾಗಿ ಚಿಂತೆಮಾಡಬೇಡಿರಿ; ನಾಳಿನ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವದು. ಆ ಹೊತ್ತಿನ ಕಾಟ ಆ ಹೊತ್ತಿಗೆ ಸಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆದುದರಿಂದ ನಾಳಿನ ವಿಷಯವಾಗಿ ಚಿಂತೆ ಮಾಡಬೇಡಿರಿ; ನಾಳಿನ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವುದು. ಆ ಹೊತ್ತಿನ ಪಾಡೇ ಆ ಹೊತ್ತಿಗೆ ಸಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಆದುದರಿಂದ ನಾಳೆಯ ಚಿಂತೆ ನಿಮಗೆ ಬೇಡ. ನಾಳೆಯ ಚಿಂತೆ ನಾಳೆಗೇ ಇರಲಿ. ಇಂದಿನ ಪಾಡೇ ಇಂದಿಗೆ ಸಾಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆದ್ದರಿಂದ ನಾಳೆಗಾಗಿ ಚಿಂತಿಸಬೇಡಿ. ಪ್ರತಿದಿನವು ತನ್ನದೇ ಆದ ಎಷ್ಟೋ ಕಷ್ಟಗಳನ್ನು ಹೊಂದಿರುತ್ತದೆ. ನಾಳೆಯು ಸಹ ತನ್ನದೇ ಆದ ಚಿಂತೆಗಳನ್ನು ಹೊಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆದ್ದರಿಂದ, ನಾಳೆಯ ವಿಷಯವಾಗಿ ಚಿಂತಿಸಬೇಡಿರಿ. ನಾಳೆಯ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವುದು, ಆ ದಿನದ ಪಾಡು ಆ ದಿನಕ್ಕೆ ಸಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ತಸೆಮನುನ್ ಉದ್ದ್ಯಾಚ್ಯಾ ವಿಶಯಾತ್ ಯವ್ಜನ್ ಕರುನಕಾಸಿ, ಹರಿಎಕ್ ದಿಸಾಚಿ ಅಪ್ನಾಚಿಚ್ ಮಟಲ್ಲಿ ಕವ್ಡಿಕಿ ಕಸ್ಟಾ ಹಾತ್. ಉದ್ದ್ಯಾಚ್ಯಾ ದಿಸಾಕ್ ಮನುನ್ ಹೊತ್ತಿ ಯವ್ಜನ್ ಉದ್ದ್ಯಾಕ್ ಹಾಯ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:34
20 ತಿಳಿವುಗಳ ಹೋಲಿಕೆ  

ಈ ಕಾರಣದಿಂದ - ನಮ್ಮ ಪ್ರಾಣಧಾರಣೆಗೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗೆ ಏನು ಹೊದ್ದುಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬದಾಗಿ ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದದ್ದಲ್ಲವೇ.


ಶಾಂತಿಯನ್ನು ನಿಮಗೆ ಬಿಟ್ಟುಹೋಗುತ್ತೇನೆ, ನನ್ನಲ್ಲಿರುವಂಥ ಶಾಂತಿಯನ್ನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಿಂದ ನಾನು ನಿಮಗೆ ಕೊಡುವದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.


ನೀವು ನನ್ನಲ್ಲಿದ್ದು ಮನಶ್ಶಾಂತಿಯನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟ ಉಂಟು; ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ ಎಂದು ಹೇಳಿದನು.


ನಮ್ಮ ಅನುದಿನದ ಆಹಾರವನ್ನು ಪ್ರತಿದಿನವೂ ದಯಪಾಲಿಸು.


ದಿನದಿನವು ಹೊಸಹೊಸದಾಗಿ ಒದಗುತ್ತವೆ; ನಿನ್ನ ಸತ್ಯಸಂಧತೆಯು ದೊಡ್ಡದು.


ನಮ್ಮ ಅನುದಿನದ ಆಹಾರವನ್ನು ಈ ಹೊತ್ತೂ ದಯಪಾಲಿಸು.


ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕೆಂಬದಾಗಿ ಎಚ್ಚರಿಕೆಯ ಮಾತನ್ನು ಹೇಳಿ ಕ್ರಿಸ್ತನಂಬಿಕೆಯಲ್ಲಿ ಸ್ಥಿರವಾಗಿರ್ರಿ ಎಂದು ಅವರನ್ನು ಧೈರ್ಯಗೊಳಿಸಿದರು.


ನಿಮ್ಮ ಕೋಟೆಯ ಬಾಗಲುಗಳಿಗೆ ಕಬ್ಬಿಣದ ಮತ್ತು ತಾಮ್ರದ ಅಗುಳಿಗಳು ಇರುವವು; ನೀವು ಇರುವವರೆಗೂ ನಿಮಗೆ ಬಲವು ಇರುವದು.


ಚಿಂತೆಮಾಡಿಮಾಡಿ ಒಂದು ಮೊಳ ಉದ್ದ ಬೆಳೆಯುವದು ನಿಮ್ಮಲ್ಲಿ ಯಾರಿಂದಾದೀತು?


ಸ್ವಾವಿುಯು ಆಕೆಗೆ - ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯವಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ.


ಅವರು ನಿಮ್ಮನ್ನು ಸಭಾಮಂದಿರಗಳ ಅಧ್ಯಕ್ಷರ ಮುಂದಕ್ಕೂ ಅಧಿಕಾರಿಗಳ ಮುಂದಕ್ಕೂ ಅಧಿಪತಿಗಳ ಮುಂದಕ್ಕೂ ಹಿಡುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರಕೊಡಬೇಕು? ಏನು ಹೇಳಬೇಕು ಎಂದು ಚಿಂತೆಮಾಡಬೇಡಿರಿ.


ಇದಲ್ಲದೆ ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ - ಈ ಕಾರಣದಿಂದ ಪ್ರಾಣಧಾರಣೆಗೆ ಏನು ಊಟಮಾಡಬೇಕು? ದೇಹರಕ್ಷಣೆಗೆ ಏನು ಹೊದ್ದುಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬದಾಗಿ ನಿಮಗೆ ಹೇಳುತ್ತೇನೆ.


ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯಪಡಿಸಿರಿ.


ನಿಮ್ಮ ಚಿಂತೆಯನ್ನೆಲ್ಲಾ ಆತನ ಮೇಲೆ ಹಾಕಿರಿ, ಆತನು ನಿಮಗೋಸ್ಕರ ಚಿಂತಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು