Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:6 - ಕನ್ನಡ ಸತ್ಯವೇದವು J.V. (BSI)

6 ಆದರೆ ನೀನು ಪ್ರಾರ್ಥನೆಮಾಡಬೇಕಾದರೆ ನಿನ್ನ ಏಕಾಂತವಾದ ಕೋಣೆಯೊಳಗೆ ಹೋಗಿ ಬಾಗಲನ್ನು ಮುಚ್ಚಿಕೊಂಡು ಅಂತರಂಗದಲ್ಲಿಯೂ ಇರುವ ನಿನ್ನ ತಂದೆಗೆ ಪ್ರಾರ್ಥನೆಮಾಡು; ಅಂತರಂಗದಲ್ಲಿ ನಡೆಯುವದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀನು ಪ್ರಾರ್ಥನೆಮಾಡುವಾಗ ನಿನ್ನ ಕೋಣೆಯೊಳಗೆ ಹೋಗಿ ಬಾಗಿಲನ್ನು ಮುಚ್ಚಿಕೊಂಡು ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೊಠಡಿಗೆ ಹೋಗು; ಬಾಗಿಲನ್ನು ಮುಚ್ಚು; ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀವು ಪ್ರಾರ್ಥನೆ ಮಾಡಬೇಕಾದರೆ, ನಿಮ್ಮ ಕೋಣೆಯೊಳಗೆ ಹೋಗಿ ಬಾಗಿಲನ್ನು ಮುಚ್ಚಿಕೊಂಡು ನಿಮಗೆ ಕಾಣದಿರುವ ನಿಮ್ಮ ತಂದೆಗೆ ಪ್ರಾರ್ಥಿಸಿ. ರಹಸ್ಯದಲ್ಲಿ ನಡೆಯುವ ಕಾರ್ಯಗಳನ್ನು ನೋಡಬಲ್ಲ ನಿಮ್ಮ ತಂದೆಯು ನಿಮಗೆ ಪ್ರತಿಫಲವನ್ನು ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ನೀನು ಪ್ರಾರ್ಥನೆ ಮಾಡುವಾಗ, ನಿನ್ನ ಕೋಣೆಯೊಳಗೆ ಹೋಗಿ, ಬಾಗಿಲನ್ನು ಮುಚ್ಚಿ ಅದೃಶ್ಯವಾಗಿರುವ ನಿನ್ನ ತಂದೆಗೆ ಪ್ರಾರ್ಥನೆ ಸಲ್ಲಿಸು. ಆಗ ರಹಸ್ಯದಲ್ಲಿ ನಡೆಯುವುದನ್ನು ಕಾಣುವ ನಿನ್ನ ತಂದೆ ನಿನಗೆ ಪ್ರತಿಫಲ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಖರೆ ತುಮಿ ಮಾಗ್ನಿ ಕರ್‍ತಾನಾ, ತುಮ್ಚ್ಯಾ ಖೊಲಿತ್ ಭುತ್ತುರ್ ಜಾವಾ ದಾರ್ ಧಾಪಾ, ಅನಿ ದಿಸಿನಸಲ್ಲ್ಯಾ ತುಮ್ಚ್ಯಾ ಬಾಬಾಕ್ಡೆ ಮಾಗಾ, ಅನಿ ತುಮಿ ಕೊನಾಕ್ಬಿ ಗೊತ್ತ್ ನಸ್ತಾನಾ ಕರಲ್ಲೆ ಬಗಟಲ್ಲೊ ಸರ್‍ಗಾ ವೈಲೊ ತುಮ್ಚೊ ಬಾಬಾ ತುಮ್ಕಾ ಪ್ರತಿಫಳ್ ದಿತಾ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:6
17 ತಿಳಿವುಗಳ ಹೋಲಿಕೆ  

ಯಾರೂ ಒಳಗೆ ಬಾರದಂತೆ ಆ ಕೋಣೆಯ ಬಾಗಲನ್ನು ಮುಚ್ಚಿಕೊಂಡು ಯೆಹೋವನನ್ನು ಪ್ರಾರ್ಥಿಸಿದನು.


ಆತನು ಜನರ ಗುಂಪುಗಳನ್ನು ಕಳುಹಿಸಿ ಬಿಟ್ಟ ಮೇಲೆ ಪ್ರಾರ್ಥನೆಮಾಡುವದಕ್ಕೆ ಏಕಾಂತವಾಗಿ ಬೆಟ್ಟವನ್ನು ಹತ್ತಿದನು. ಮತ್ತು ಹೊತ್ತು ಮುಳುಗಿದ ಮೇಲೆ ಒಬ್ಬನೇ ಅಲ್ಲಿ ಇದ್ದನು.


ಆಗ ಅವರು ಬೇಡುವದರೊಳಗೆ ಸದುತ್ತರವನ್ನು ದಯಪಾಲಿಸುವೆನು; ಅವರು ಹೇಳುತ್ತಿರುವಾಗಲೇ ಕೇಳುವೆನು.


ಪೇತ್ರನು ಅವರೆಲ್ಲರನ್ನು ಹೊರಕ್ಕೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥನೆಮಾಡಿ ಶವದ ಕಡೆಗೆ ತಿರುಗಿಕೊಂಡು - ತಬಿಥಾ, ಏಳು ಅಂದನು. ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕೂತುಕೊಂಡಳು.


ನನ್ನ ಜನರೇ, ಬನ್ನಿರಿ, ನಿಮ್ಮ ನಿಮ್ಮ ಕೋಣೆಗಳಲ್ಲಿ ಸೇರಿ ಬಾಗಿಲು ಮುಚ್ಚಿಕೊಳ್ಳಿರಿ; ದೈವರೋಷವು ತೀರುವ ತನಕ ಒಂದು ಕ್ಷಣ ಅವಿತುಕೊಳ್ಳಿರಿ.


ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ.


ಹೀಗೆ ಮಾಡಿದರೆ ನೀನು ಉಪವಾಸಿಯೆಂದು ಜನರಿಗೆ ಕಾಣದೆ ಹೋದಾಗ್ಯೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಉಪವಾಸಿಯೆಂದು ಕಾಣಿಸಿಕೊಳ್ಳುವಿ. ಅಂತರಂಗದಲ್ಲಿ ನಡೆಯುವದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.


ಮರುದಿನ ಅವರು ಪ್ರಯಾಣಮಾಡಿ ಆ ಊರಿನ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಮಧ್ಯಾಹ್ನದಲ್ಲಿ ಪ್ರಾರ್ಥನೆ ಮಾಡುವದಕ್ಕಾಗಿ ಮಾಳಿಗೆಯನ್ನು ಹತ್ತಿದನು.


ಅಂತರಂಗದಲ್ಲಿ ನಡೆಯುವದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.


ಹೀಗಿರಲಾಗಿ ಯಾವ ತಂದೆಯಿಂದ ಭೂಪರಲೋಕಗಳಲ್ಲಿರುವ ಪ್ರತಿಜನವೂ ಹೆಸರು ತೆಗೆದುಕೊಳ್ಳುತ್ತದೋ ಆ ತಂದೆಯ ಮುಂದೆ ನಾನು ಮೊಣಕಾಲೂರಿಕೊಂಡು -


ಶರೀರಭಾವವನ್ನು ಅನುಸರಿಸುವವರು ಅದಕ್ಕೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ. ಪವಿತ್ರಾತ್ಮನನ್ನನುಸರಿಸುವವರು ಪವಿತ್ರಾತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.


ಅದಕ್ಕೆ ಕೊರ್ನೇಲ್ಯನು - ನಾನು ನಾಲ್ಕು ದಿವಸಗಳ ಹಿಂದೆ ಮಧ್ಯಾಹ್ನದ ಮೇಲೆ ಮೂರು ಗಂಟೆಗೆ ನಡೆಯತಕ್ಕ ದೇವರ ಪ್ರಾರ್ಥನೆಯನ್ನು ಇಷ್ಟು ಹೊತ್ತಿನವರೆಗೂ ನನ್ನ ಮನೆಯಲ್ಲಿ ಮಾಡುತ್ತಿದ್ದಾಗ ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತುಕೊಂಡು -


ನತಾನಯೇಲನು - ನನ್ನನ್ನು ನೀನು ಹೇಗೆ ಬಲ್ಲೆ? ಎಂದು ಯೇಸುವನ್ನು ಕೇಳಿದ್ದಕ್ಕೆ ಆತನು - ಫಿಲಿಪ್ಪನು ನಿನ್ನನ್ನು ಕರೆಯುವದಕ್ಕಿಂತ ಮುಂಚೆ ನೀನು ಆ ಅಂಜೂರದ ಮರದ ಕೆಳಗೆ ಇದ್ದಾಗ ನಿನ್ನನ್ನು ನೋಡಿದೆನು ಅಂದನು.


ಯೇಸು ಆಕೆಗೆ - ನನ್ನನ್ನು ಹಿಡಿಯಬೇಡ; ಯಾಕಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ - ನಾನು ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ಏರಿಹೋಗುತ್ತೇನೆ ಎಂದು ಅವರಿಗೆ ಹೇಳು ಅಂದನು.


ಹೀಗೆ ಅವನ ತಲೆಯ ಮೇಲೆ ಕೆಂಡಸುರಿದಂತಾಗುವದು; ಯೆಹೋವನೇ ನಿನಗೆ ಪ್ರತಿಫಲಕೊಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು