Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 7:1 - ಕನ್ನಡ ಸತ್ಯವೇದವು J.V. (BSI)

1 ತೀರ್ಪುಮಾಡಬೇಡಿರಿ; ಹಾಗೆ ನಿಮಗೂ ತೀರ್ಪಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ತೀರ್ಪುಮಾಡಬೇಡಿರಿ; ಹಾಗೆ ನಿಮಗೂ ತೀರ್ಪಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ನೀವು ಇತರರ ಬಗ್ಗೆ ತೀರ್ಪುಕೊಡಬೇಡಿ; ಆಗ ದೇವರು ನಿಮ್ಮ ಬಗ್ಗೆ ತೀರ್ಪುಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಬೇರೆಯವರಿಗೆ ತೀರ್ಪು ನೀಡಬೇಡಿ. ಆಗ ದೇವರೂ ನಿಮಗೆ ತೀರ್ಪು ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ತೀರ್ಪುಮಾಡಬೇಡಿರಿ, ಆಗ ನಿಮಗೂ ಸಹ ತೀರ್ಪಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 “ದುಸ್ರ್ಯಾಂಚಿ ನಿತ್ ಕರುನಕಾಸಿ, ತನ್ನಾ ತುಮ್ಚಿಬಿ ನಿತ್ ಕರುನ್ ಹೊತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 7:1
13 ತಿಳಿವುಗಳ ಹೋಲಿಕೆ  

ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವದಿಲ್ಲ; ಬಿಡಿಸಿರಿ, ಆಗ ನಿಮ್ಮನ್ನೂ ಬಿಡಿಸುವರು;


ಇದಲ್ಲದೆ ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ಯೋಚಿಸುವದೇಕೆ?


ಕಪಟಿಯೇ, ಮೊದಲು ನಿನ್ನ ಕಣ್ಣಿನೊಳಗಿಂದ ತೊಲೆಯನ್ನು ತೆಗೆದುಹಾಕಿಕೋ; ಆಮೇಲೆ ನಿನ್ನ ಸಹೋದರನ ಕಣ್ಣಿನೊಳಗಿಂದ ರವೆಯನ್ನು ತೆಗೆಯುವದಕ್ಕೆ ಚೆನ್ನಾಗಿ ಕಾಣಿಸುವದು.


ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.


ನನ್ನ ಸಹೋದರರೇ, ಬೋಧಕರಾದ ನಮಗೆ ಕಠಿನವಾದ ತೀರ್ಪು ಆಗುವದೆಂದು ತಿಳಿದುಕೊಂಡು ಬಹುಮಂದಿ ಬೋಧಕರಾಗಬೇಡಿರಿ.


ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು - ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ ಎಂದು ಹೇಳಿದ್ದಾರಲ್ಲಾ; ಅವರಿಗಂತು ಅವಮಾನವಾಗುವದು.


ಅವರು ಆತನನ್ನು ಬಿಡದೆ ಕೇಳುತ್ತಿರುವಾಗ ಆತನು ನೆಟ್ಟಗೆ ಕೂತುಕೊಂಡು ಅವರಿಗೆ - ನಿಮ್ಮಲ್ಲಿ ಪಾಪವಿಲ್ಲದವನು ಯಾರೋ ಅವನೇ ಮೊದಲು ಆಕೆಯ ಮೇಲೆ ಕಲ್ಲನ್ನು ಹಾಕಲಿ ಎಂದು ಹೇಳಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು