ಮತ್ತಾಯ 7:13 - ಕನ್ನಡ ಸತ್ಯವೇದವು J.V. (BSI)13 ಇಕ್ಕಟ್ಟಾದ ಬಾಗಲಿನಿಂದ ಒಳಕ್ಕೆ ಹೋಗಿರಿ. ನಾಶಕ್ಕೆ ಹೋಗುವ ಬಾಗಲು ದೊಡ್ಡದು, ದಾರಿ ಅಗಲವು; ಅದರಲ್ಲಿ ಹೋಗುವವರು ಬಹು ಜನ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 “ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗಿರಿ. ನಾಶಕ್ಕೆ ಹೋಗುವ ಬಾಗಿಲು ದೊಡ್ಡದು, ದಾರಿ ವಿಶಾಲವಾದುದು; ಅದರಲ್ಲಿ ಹೋಗುವವರು ಬಹು ಜನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 “ಕಿರಿದಾದ ಬಾಗಿಲಿನಿಂದಲೇ ಒಳಕ್ಕೆ ಹೋಗಿರಿ. ಏಕೆಂದರೆ ವಿನಾಶಕ್ಕೆ ಒಯ್ಯುವ ಬಾಗಿಲು ಹಿರಿದು; ಅದರ ಮಾರ್ಗ ಸರಾಗ; ಅದನ್ನು ಹಿಡಿಯುವವರು ಅನೇಕರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ಇಕ್ಕಟ್ಟಾದ ಬಾಗಿಲಿನ ಮೂಲಕ ಪರಲೋಕರಾಜ್ಯವನ್ನು ಪ್ರವೇಶಿಸಿರಿ. ನರಕಕ್ಕೆ ಹೋಗುವ ದಾರಿ ದೊಡ್ಡದು, ಬಾಗಿಲು ಬಹಳ ವಿಶಾಲ. ಅನೇಕ ಜನರು ಆ ಬಾಗಿಲಲ್ಲಿ ಪ್ರವೇಶಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ಇಕ್ಕಟ್ಟಾದ ಬಾಗಿಲಿನಿಂದ ಪ್ರವೇಶಿಸಿರಿ. ಏಕೆಂದರೆ ನಾಶಕ್ಕೆ ಒಯ್ಯುವ ಬಾಗಿಲು, ಅಗಲವೂ ಅದರ ಮಾರ್ಗವು ವಿಶಾಲವೂ ಆಗಿವೆ; ಅದರೊಳಗೆ ಪ್ರವೇಶಿಸುವವರು ಅನೇಕರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 “ಬಾರಿಕ್ಲ್ಯಾ ದಾರಾತ್ನಾ ಭುತ್ತುರ್ ಜಾಂವಾ, ಕಶ್ಯಾಕ್ ಮಟ್ಲ್ಯಾರ್ ನರ್ಕಾಕ್ ಜಾತಲೆ ದಾರ್ ಲೈ ರುಂದ್ ಥೈ ಜಾತಲೊ ರಸ್ತೊಬಿ ಲೈ ಸಸಾರಾಚೊ, ಅನಿ ಲೈ ಜಾನಾ ತ್ಯಾ ರಸ್ತ್ಯಾನ್ ಜಾತ್ಯಾತ್. ಅಧ್ಯಾಯವನ್ನು ನೋಡಿ |