Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 7:21 - ಕನ್ನಡ ಸತ್ಯವೇದವು J.V. (BSI)

21 ನನ್ನನ್ನು ಸ್ವಾಮೀ, ಸ್ವಾಮೀ ಅನ್ನುವವರೆಲ್ಲರು ಪರಲೋಕರಾಜ್ಯದಲ್ಲಿ ಸೇರುವರೆಂದು ನೆನಸಬೇಡಿರಿ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನೇ ಪರಲೋಕರಾಜ್ಯಕ್ಕೆ ಸೇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ನನ್ನನ್ನು ‘ಸ್ವಾಮೀ, ಸ್ವಾಮೀ,’ ಎನ್ನುವ ಪ್ರತಿಯೊಬ್ಬನೂ ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸನು. ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತಾನುಸಾರ ನಡೆಯುವವನು ಮಾತ್ರ ಅದನ್ನು ಪ್ರವೇಶಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “‘ನಾನು ಪ್ರಭುವಿನವನು’ ಎಂದು ಹೇಳಿದ ಮಾತ್ರಕ್ಕೆ ಮನುಷ್ಯನು ಪರಲೋಕರಾಜ್ಯಕ್ಕೆ ಪ್ರವೇಶಿಸಲು ಸಾಧ್ಯವಿಲ್ಲ. ಪರಲೋಕದಲ್ಲಿರುವ ನನ್ನ ತಂದೆಯ ಇಷ್ಟದಂತೆ ಮಾಡುವವರೇ ಪರಲೋಕರಾಜ್ಯಕ್ಕೆ ಪ್ರವೇಶಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ನನ್ನನ್ನು, ‘ಸ್ವಾಮೀ, ಸ್ವಾಮೀ,’ ಎಂದು ಹೇಳುವವರೆಲ್ಲರೂ ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ. ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ಅದರಲ್ಲಿ ಪ್ರವೇಶಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಮಾಕಾ ಧನಿಯಾ, ಧನಿಯಾ ಮನುನ್ ಬಲ್ವುತಲೆ ಸಗ್ಳೆ ಜಾನಾ ಸರ್ಗಾಚ್ಯಾ ರಾಜಾತ್ ಭುತ್ತುರ್ ಜವ್ಕ್ ಹೊಯ್ನಾ, ಜೆ ಕೊನ್ ಮಾಜ್ಯಾ ಬಾಬಾಚ್ಯಾ ಯವ್ಜನಿ ಸರ್ಕೆ ಹಾಯ್ ತೆಚ್ ಕರ್‍ತಾ ತೊ ಸರ್‍ಗಾಚ್ಯಾ ರಾಜಾತ್ ಭುತ್ತುರ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 7:21
49 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರ ಕೇಳಿದ ಮಾತ್ರದಿಂದಲೇ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗುವದಿಲ್ಲ; ಅದನ್ನು ಅನುಸರಿಸುವವರೇ ನೀತಿವಂತರೆಂದು ನಿರ್ಣಯಿಸಲ್ಪಡುವರು.


ಇದಲ್ಲದೆ ನೀವು ನನ್ನನ್ನು ಸ್ವಾಮೀ ಸ್ವಾಮೀ ಅಂತ ಕರೆದು ನಾನು ಹೇಳುವದನ್ನು ನಡಿಸದೆ ಇರುವದೇಕೆ?


ವಾಕ್ಯದ ಪ್ರಕಾರ ನಡೆಯುವವರಾಗಿರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಬೇಡಿರಿ.


ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು ಎಂದು ಕೂಗಿದಳು. ಆತನು - ಹಾಗನ್ನಬೇಡ, ದೇವರ ವಾಕ್ಯವನ್ನು ಕೇಳಿ ಅದಕ್ಕೆ ಸರಿಯಾಗಿ ನಡಕೊಳ್ಳುವವರೇ ಧನ್ಯರು ಅಂದನು.


ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯರೂ ಸತ್ಕಾರ್ಯಗಳಿಗೆಲ್ಲಾ ಅಪ್ರಯೋಜಕರೂ ಆಗಿರುವದರಿಂದ ದೇವರನ್ನು ಅರಿಯೆವೆಂದು ತಮ್ಮ ಕಾರ್ಯಗಳಿಂದಲೇ ಹೇಳಿದಂತಾಯಿತು.


ಹೀಗಿರಲಾಗಿ ಆ ವಿಶ್ರಾಂತಿಯಲ್ಲಿ ಕೆಲವರು ಸೇರಬೇಕೆಂಬುವ ಮಾತು ಇನ್ನೂ ಇರುವದರಿಂದಲೂ ಮೊದಲು ಶುಭವರ್ತಮಾನವನ್ನು ಕೇಳಿದವರು ಅವಿಧೇಯರಾದ ಕಾರಣ ಅದರಲ್ಲಿ ಸೇರದೆಹೋದದ್ದರಿಂದಲೂ


ನಿತ್ಯ ಜೀವವು ಸಿಕ್ಕಬೇಕೆಂಬದೇ ನನ್ನ ತಂದೆಯ ಚಿತ್ತವಾಗಿದೆ; ಮತ್ತು ನಾನು ಕಡೇದಿನದಲ್ಲಿ ಅವನನ್ನು ಎಬ್ಬಿಸುವೆನು ಎಂದು ಹೇಳಿದನು.


ಜಯಶಾಲಿಗೆ ಹೀಗೆ ಶುಭ್ರವಸ್ತ್ರಗಳನ್ನು ಹೊದಿಸುವರು. ಜೀವಬಾಧ್ಯರ ಪಟ್ಟಿಯಿಂದ ಅವನ ಹೆಸರನ್ನು ನಾನು ಅಳಿಸಿಬಿಡದೆ ಅವನು ನನ್ನವನೆಂದು ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಒಪ್ಪುವೆನು.


ಯಾಕಂದರೆ ಶರೀರದಲ್ಲಿ ಬಾಧೆಪಟ್ಟವನು ಪಾಪದ ವಶದಿಂದ ತಪ್ಪಿಸಿಕೊಂಡವನಾಗಿ ಉಳಿದಿರುವ ತನ್ನ ಜೀವಮಾನಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವದಕ್ಕೆ ಪ್ರಯತ್ನಮಾಡುವನು.


ನೀವು ತನ್ನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಯನ್ನು ನಿಮಗೆ ಅನುಗ್ರಹಿಸಲಿ. ಆತನು ಯೇಸು ಕ್ರಿಸ್ತನ ಮೂಲಕ ತನಗೆ ಸಮರ್ಪಕವಾದದ್ದನ್ನು ನಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.


ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ ತಂಗಿಯೂ ತಾಯಿಯೂ ಆಗಬೇಕು ಅಂದನು.


ತಮ್ಮ ನಿಲುವಂಗಿಗಳನ್ನು ತೊಳಕೊಂಡವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಬಾಗಿಲುಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.


ಅದಕ್ಕೆ ಯೇಸು - ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮನಿಂದಲೂ ಹುಟ್ಟದಿದ್ದರೆ ದೇವರ ರಾಜ್ಯಕ್ಕೆ ಸೇರಲಾರನು.


ಅವರಿಗೆ - ನೀವು ತಿರುಗಿಕೊಂಡು ಚಿಕ್ಕ ಮಕ್ಕಳಂತೆ ಆಗದೆ ಹೋದರೆ ನೀವು ಪರಲೋಕರಾಜ್ಯದಲ್ಲಿ ಸೇರುವದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಆತನ ಚಿತ್ತದಂತೆ ನಡೆಯುವದಕ್ಕೆ ಯಾರಿಗೆ ಮನಸ್ಸದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದದ್ದೋ ನಾನೇ ಕಲ್ಪಿಸಿ ಹೇಳಿದ್ದೋ ಗೊತ್ತಾಗುವದು.


ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತಕ್ಕನುಸಾರವಾದದ್ದು ಅಂದರೆ ಉತ್ತಮವಾದದ್ದೂ ಮೆಚ್ಚಿಕೆಯಾದದ್ದೂ ದೋಷವಿಲ್ಲದ್ದೂ ಯಾವ ಯಾವದೆಂದು ವಿವೇಚಿಸಿ ತಿಳುಕೊಳ್ಳುವಿರಿ.


ದೇವರ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ ತಂಗಿಯೂ ತಾಯಿಯೂ ಆಗಬೇಕು ಅಂದನು.


ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ; ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿ ಬಂದ ದೇವರ ಚಿತ್ತ.


ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಪ್ರಕಾರ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆಮಾಡದೆ ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಮನಃಪೂರ್ವಕವಾಗಿ ನಡಿಸಿರಿ.


ತಿಳಿಯದೆ ಮಾತಾಡುವ ಮೂಢಜನರ ಬಾಯನ್ನು ನೀವು ಒಳ್ಳೇ ನಡತೆಯಿಂದ ಕಟ್ಟಬೇಕೆಂಬದೇ ದೇವರ ಚಿತ್ತ.


ಅವನ ಧಣಿಯು - ಭಲಾ, ನಂಬಿಗಸ್ತನಾದ ಒಳ್ಳೇ ಆಳು ನೀನು; ಸ್ವಲ್ಪ ಕೆಲಸದಲ್ಲಿ ನಂಬಿಗಸ್ತನಾಗಿದ್ದಿ, ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಧಣಿಯ ಸೌಭಾಗ್ಯದಲ್ಲಿ ಸೇರು ಅಂದನು.


ದೇವರ ಚಿತ್ತವೇನಂದರೆ ನೀವು ಶುದ್ಧರಾಗಿ ಇರಬೇಕೆಂಬದೇ. ಆದದರಿಂದ ಹಾದರಕ್ಕೆ ದೂರವಾಗಿರಬೇಕು.


ಕ್ರಿಸ್ತ ಯೇಸುವಿನ ದಾಸನಾಗಿರುವ ನಿಮ್ಮ ಊರಿನ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ; ಇವನು ಪ್ರಾರ್ಥನೆ ಮಾಡುವಾಗೆಲ್ಲಾ ನಿಮಗೋಸ್ಕರ ಹೋರಾಡಿ ನೀವು ಪ್ರವೀಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ವಿಜ್ಞಾಪನೆ ಮಾಡುತ್ತಾನೆ.


ಮನೇಯಜಮಾನನು ಎದ್ದು ಕದಾ ಹಾಕಿಕೊಂಡ ಮೇಲೆ ನೀವು ಹೊರಗೆ ನಿಂತುಕೊಂಡು ಕದತಟ್ಟಿ - ಸ್ವಾಮೀ, ನಮಗೆ ತೆರೆಯಿರಿ ಎಂದು ಹೇಳುವದಕ್ಕೆ ತೊಡಗುವಾಗ ಅವನು - ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ ಅಂದಾನು.


ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕೆಂಬದಾಗಿ ಎಚ್ಚರಿಕೆಯ ಮಾತನ್ನು ಹೇಳಿ ಕ್ರಿಸ್ತನಂಬಿಕೆಯಲ್ಲಿ ಸ್ಥಿರವಾಗಿರ್ರಿ ಎಂದು ಅವರನ್ನು ಧೈರ್ಯಗೊಳಿಸಿದರು.


ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಒಂಟೆಯು ಸೂಜೀಕಣ್ಣಿನಲ್ಲಿ ನುಗ್ಗುವದು ಸುಲಭ ಅಂದನು.


ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕಿತ್ತು ಬಿಸಾಡು; ಎರಡು ಕಣ್ಣುಳ್ಳವನಾಗಿದ್ದು ನರಕದಲ್ಲಿ ಹಾಕಿಸಿಕೊಳ್ಳುವದಕ್ಕಿಂತ ಒಂದೇ ಕಣ್ಣುಳ್ಳವನಾಗಿದ್ದು ದೇವರ ರಾಜ್ಯದಲ್ಲಿ ಸೇರುವದು ನಿನಗೆ ಉತ್ತಮ.


ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವದು ಸುಲಭ ಎಂದು ನಿಮಗೆ ತಿರಿಗಿ ಹೇಳುತ್ತೇನೆ ಅಂದನು.


ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಸಹೋದರನಿಗೆ ಮನಃಪೂರ್ವಕವಾಗಿ ಕ್ಷವಿುಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು.


ನನ್ನ ಮೇಲೆ ದ್ವೇಷಮಾಡುವವನು ನನ್ನ ತಂದೆಯ ಮೇಲೆಯೂ ದ್ವೇಷಮಾಡುವವನಾಗಿದ್ದಾನೆ.


ತಿರಿಗಿ ಎರಡನೆಯ ಸಾರಿ ಹೋಗಿ - ನನ್ನ ತಂದೆಯೇ, ನಾನು ಕುಡಿದ ಹೊರತು ಈ ಪಾತ್ರೆ ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಎಂದು ಪ್ರಾರ್ಥನೆಮಾಡಿದನು.


ಅದಕ್ಕೆ ಯೇಸು - ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಈ ಗುಟ್ಟು ನಿನಗೆ ತಿಳಿಸಿದವನು ನರಮನುಷ್ಯನಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ತಿಳಿಸಿದನು.


ಅವನು ಕಬ್ಬಿಣದ ಕೋಲಿನಿಂದ ಅವರನ್ನು ಆಳುವನು; ಮಣ್ಣಿನ ಮಡಿಕೆಗಳು ಒಡೆಯುವಂತೆ ಅವರ ಬಲ ಮುರಿದು ಹೋಗುವದು.


ನೀವು ನನ್ನನ್ನು ಅರಿತಿದ್ದರೆ ನನ್ನ ತಂದೆಯನ್ನೂ ಅರಿಯುತ್ತಿದ್ದಿರಿ; ಈಗಿನಿಂದ ಆತನನ್ನು ಅರಿತುಕೊಂಡಿದ್ದೀರಿ; ಆತನನ್ನು ನೋಡಿದ್ದೀರಲ್ಲಾ ಎಂದು ಹೇಳಿದನು.


ಅದಕ್ಕೆ ಯೇಸು - ನನ್ನ ತಂದೆಯು ಇಂದಿನವರೆಗೂ ಕೆಲಸಮಾಡುತ್ತಾನೆ, ನಾನೂ ಕೆಲಸಮಾಡುತ್ತೇನೆ ಅಂದನು.


ಸ್ವಲ್ಪ ಮುಂದೆ ಹೋಗಿ ಬೋರಲಬಿದ್ದು - ನನ್ನ ತಂದೆಯೇ, ಸಾಧ್ಯವಾಗಿದ್ದರೆ ಈ ಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಹೇಗೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ ಎಂದು ದೇವರನ್ನು ಪ್ರಾರ್ಥಿಸಿದನು.


ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡಬಾರದು ನೋಡಿರಿ; ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಲಿದ್ದಾರೆ ಎಂದು ನಿಮಗೆ ಹೇಳುತ್ತೇನೆ.


ಇದಲ್ಲದೆ ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳತಕ್ಕ ಯಾವದಾದರೂ ಒಂದು ಕಾರ್ಯದ ವಿಷಯವಾಗಿ ಭೂಲೋಕದಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವದೆಂದು ನಿಮಗೆ ಹೇಳುತ್ತೇನೆ.


ಅವರು ಕೊಂಡುಕೊಳ್ಳಲಿಕ್ಕೆ ಹೋದಾಗ ಮದಲಿಂಗನು ಬಂದನು. ಸಿದ್ಧವಾಗಿದ್ದವರು ಅವನ ಸಂಗಡ ಮದುವೆಯ ಮನೆಯೊಳಕ್ಕೆ ಹೋದರು. ಬಾಗಿಲು ಮುಚ್ಚಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು