Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 7:22 - ಕನ್ನಡ ಸತ್ಯವೇದವು J.V. (BSI)

22 ಸ್ವಾಮೀ, ಸ್ವಾಮೀ, ನಿನ್ನ ಹೆಸರಿನ ಮೇಲೆ ನಾವು ಬೋಧನೆ ಹೇಳಲಿಲ್ಲವೇ? ನಿನ್ನ ಹೆಸರಿನ ಮೇಲೆ ದೆವ್ವಗಳನ್ನು ಬಿಡಿಸಲಿಲ್ಲವೇ? ನಿನ್ನ ಹೆಸರಿನ ಮೇಲೆ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಆ ದಿನದಲ್ಲಿ ಎಷ್ಟೋ ಜನರು ನನಗೆ ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಕರ್ತನೇ, ಕರ್ತನೇ, ನಿನ್ನ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ನಿನ್ನ ಹೆಸರಿನಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ತೀರ್ಪಿನ ದಿನದಲ್ಲಿ ಎಷ್ಟೋ ಜನರು ನನಗೆ ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ತೀರ್ಪಿನ ದಿನದಂದು, ‘ಸ್ವಾಮೀ, ಸ್ವಾಮೀ, ನಿಮ್ಮ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿಮ್ಮ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೆ? ನಿಮ್ಮ ಹೆಸರಿನಲ್ಲಿ ಹಲವಾರು ಮಹತ್ಕಾರ್ಯಗಳನ್ನು ಮಾಡಲಿಲ್ಲವೇ?’ ಎಂದು ಅನೇಕರು ನನಗೆ ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಕೊನೆಯ ದಿನಗಳಲ್ಲಿ ಅನೇಕರು ನನಗೆ, ‘ನೀನೇ ನಮ್ಮ ಪ್ರಭು! ನಿನ್ನ ವಿಷಯವಾಗಿ ನಾವು ಬೋಧಿಸಿದೆವು. ನಿನ್ನ ಹೆಸರಿನ ಮೂಲಕ ದೆವ್ವಗಳನ್ನು ಬಿಡಿಸಿದೆವು ಮತ್ತು ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆವು’ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆ ದಿನದಲ್ಲಿ, ‘ಕರ್ತದೇವರೇ, ಕರ್ತದೇವರೇ, ನಿಮ್ಮ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ನಿಮ್ಮ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ನಿಮ್ಮ ಹೆಸರಿನಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ?’ ಎಂದು ಅನೇಕರು ನನಗೆ ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಝಡ್ತಿ ದಿತಲೊ ದಿಸ್ ಯೆಲ್ಲ್ಯಾ ತನ್ನಾ ಲೈ ಜಾನಾ, ಧನಿಯಾ, ಧನಿಯಾ, ತುಜ್ಯಾ ನಾವಾನ್ ಅಮಿ ದೆವಾಚಿ ಬರಿ ಖಬರ್ ಸಾಂಗ್ಲಾಂವ್, ತುಜ್ಯಾ ನಾವಾನ್ ಅಮಿ ಗಿರೆ ಕಾಡ್ಲಾಂವ್ ಅನಿ ಲೈ ಅಜಾಪಾ ಕರ್ಲಾಂವ್! ಮನುನ್ ಸಾಂಗ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 7:22
23 ತಿಳಿವುಗಳ ಹೋಲಿಕೆ  

ಇದರ ನಿವಿುತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶದಲ್ಲಿಟ್ಟಿರುವದನ್ನು ಆತನು ಆ ದಿನಕ್ಕಾಗಿ ಕಾಪಾಡುವದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.


ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗೆ ಸಿದ್ಧವಾಗಿದೆ; ಅದನ್ನು ನೀತಿಯುಳ್ಳ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು; ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.


ಇದನ್ನು ಅವನು ತನ್ನಷ್ಟಕ್ಕೆ ತಾನೇ ಹೇಳಲಿಲ್ಲ; ಆದರೆ ತಾನು ಆ ವರುಷದ ಮಹಾಯಾಜಕನಾಗಿದ್ದದರಿಂದ ದೇವಪ್ರೇರಣೆಯಿಂದ ಮಾತಾಡಿ ಯೇಸು ಆ ಜನಕ್ಕೋಸ್ಕರ ಸಾಯುವದಕ್ಕಿದ್ದನೆಂದು ಹೇಳಿದನು.


ದೇವರ ಮಾತುಗಳನ್ನು ಕೇಳುವವನಾಗಿಯೂ ಪರವಶವಾಗಿ ಕಣ್ಣು ತೆರೆದು ಸರ್ವಶಕ್ತನ ದರ್ಶನವನ್ನು ಹೊಂದುವವನಾಗಿಯೂ ಇರುವ ಪುರುಷನಿಗುಂಟಾದ ದೇವೋಕ್ತಿ.


ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ; ನೀವು ಕತ್ತಲೆಯಲ್ಲಿರುವವರಲ್ಲ.


ಆ ದಿವಸದಲ್ಲಿ ಅಂಥ ಊರಿನ ಗತಿಯು ಸೊದೋಮೂರಿನ ಗತಿಗಿಂತಲೂ ಕಠಿಣವಾಗಿರುವದು ಎಂದು ನಿಮಗೆ ಹೇಳುತ್ತೇನೆ.


ತರುವಾಯ ಉಳಿದ ಕನ್ಯೆಯರು ಸಹ ಬಂದು - ಸ್ವಾಮೀ, ಸ್ವಾಮೀ, ನಮಗೆ ತೆರೆಯಿರಿ ಅಂದರು.


ಇದಲ್ಲದೆ ಆ ದಿನದ ವಿಷಯವೂ ಆ ಗಳಿಗೆಯ ವಿಷಯವೂ ನನ್ನ ತಂದೆಯೊಬ್ಬನಿಗೆ ತಿಳಿಯುವದೇ ಹೊರತು ಮತ್ತಾರಿಗೂ ತಿಳಿಯದು; ಪರಲೋಕದಲ್ಲಿರುವ ದೂತರಿಗೂ ತಿಳಿಯದು, ಮಗನಿಗೂ ತಿಳಿಯದು.


ನನ್ನನ್ನು ಸ್ವಾಮೀ, ಸ್ವಾಮೀ ಅನ್ನುವವರೆಲ್ಲರು ಪರಲೋಕರಾಜ್ಯದಲ್ಲಿ ಸೇರುವರೆಂದು ನೆನಸಬೇಡಿರಿ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನೇ ಪರಲೋಕರಾಜ್ಯಕ್ಕೆ ಸೇರುವನು.


ಸಾಮಾನ್ಯರ ಗರ್ವವು ಕುಗ್ಗುವದು, ಮುಖಂಡರ ಅಹಂಕಾರವೂ ತಗ್ಗುವದು, ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ಸಾಮಾನ್ಯರ ಗರ್ವದೃಷ್ಟಿಯು ತಗ್ಗಿಹೋಗುವದು, ಮುಖಂಡರ ಅಹಂಕಾರವು ಕುಗ್ಗಿಹೋಗುವದು, ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ಅವನು ಆ ದಿನದಲ್ಲಿ ಕರ್ತನಿಂದ ಕರುಣೆಯನ್ನು ಹೊಂದುವಂತೆ ಕರ್ತನು ಅವನಿಗೆ ದಯಪಾಲಿಸಲಿ. ಎಫೆಸದಲ್ಲಿಯೂ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.


ನ್ಯಾಯವಿಚಾರಣೆಯ ದಿವಸದಲ್ಲಿ ಅಂಥ ಊರಿನ ಗತಿಯು ಸೊದೋಮ್ ಗೊಮೋರಗಳ ಸೀಮೆಯ ಗತಿಗಿಂತಲೂ ಕಠಿಣವಾಗಿರುವದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಹತವಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ವಿುದ್ಯಾನ್ಯರ ಐದು ಮಂದಿ ರಾಜರು ಇದ್ದರು. ಅದಲ್ಲದೆ ಬೆಯೋರನ ಮಗನಾದ ಬಿಳಾಮನನ್ನು ಕಡಿದುಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು