Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 7:26 - ಕನ್ನಡ ಸತ್ಯವೇದವು J.V. (BSI)

26 ಆದರೆ ಈ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದ ಪ್ರತಿಯೊಬ್ಬನು ಉಸುಬಿನ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿಹೀನ ಮನುಷ್ಯನನ್ನು ಹೋಲುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆದರೆ ಈ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದ ಪ್ರತಿಯೊಬ್ಬನು ಮರಳಿನ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿಹೀನನಿಗೆ ಸಮನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನನ್ನ ಈ ಮಾತುಗಳನ್ನು ಕೇಳಿಯೂ ಅದರಂತೆ ನಡೆಯದ ಪ್ರತಿಯೊಬ್ಬನೂ ಮರಳಿನ ಮೇಲೆ ಮನೆ ಕಟ್ಟಿಕೊಂಡ ಬುದ್ಧಿಹೀನನನ್ನು ಹೋಲುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಿಗೆ ವಿಧೇಯನಾಗದವನು ಬುದ್ಧಿಹೀನನಾಗಿದ್ದಾನೆ. ಆ ಬುದ್ಧಿಹೀನನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ, ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಸಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 “ಖರೆ ಜೆ ಕೊನ್ ಹಿ ಮಾಜಿ ಗೊಸ್ಟಿಯಾ ಆಯಿಕ್ತಾ ಅನಿ ತೆಚೆ ಸರ್ಕೆ ಚಲಿನಾ ತೊ ರೆತಿ ವರ್‍ತಿ ಘರ್ ಭಾಂದ್ತಲ್ಯಾ ಎಕ್ ಪಿಶ್ಯಾ ಮಾನ್ಸಾ ಸರ್ಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 7:26
9 ತಿಳಿವುಗಳ ಹೋಲಿಕೆ  

ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದಿರುವವನು ಅಸ್ತಿವಾರವಿಲ್ಲದೆ ನೆಲದ ಮೇಲೆ ಮನೇ ಕಟ್ಟಿದವನಿಗೆ ಸಮಾನನು. ಪ್ರವಾಹವು ಅದಕ್ಕೆ ಬಡಿಯಿತು; ಬಡಿದ ಕೂಡಲೆ ಅದು ಕುಸಿದುಬಿದ್ದು ಪೂರಾ ಹಾಳಾಯಿತು.


ಜ್ಞಾನಿಗಳು ಆಶಾಭಂಗಪಟ್ಟು ಬೆಬ್ಬರಬಿದ್ದು ಸಿಕ್ಕಿಕೊಂಡಿದ್ದಾರೆ; ಇಗೋ, ಯೆಹೋವನ ಮಾತನ್ನು ನಿರಾಕರಿಸಿದರು;


ಅಪ್ರಯೋಜಕನೇ, ಕ್ರಿಯೆಗಳಿಲ್ಲದ ನಂಬಿಕೆಯು ವ್ಯರ್ಥವಾಗಿದೆ ಎಂಬದಕ್ಕೆ ದೃಷ್ಟಾಂತಬೇಕೋ?


ನಿನ್ನ ಗೋತ್ರದವರೂ ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಾಯೇಲ್‍ದೇವರಾದ ಯೆಹೋವನೆಂಬ ನಾನು ಈಗ ತಿಳಿಸುವದೇನಂದರೆ - ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರು ತಿರಸ್ಕಾರಹೊಂದುವರು.


ಜ್ಞಾನವಂತೆಯು ತನ್ನ ಮನೆಯನ್ನು ಕಟ್ಟಿಕೊಳ್ಳುವಳು; ಜ್ಞಾನಹೀನಳು ಅದನ್ನು ಸ್ವಂತ ಕೈಯಿಂದ ಮುರಿದು ಬಿಡುವಳು.


ಅಕಾಲಮರಣವು ಅವರನ್ನು ಅಪಹರಿಸಿತು, ಅವರಿಗೆ ಆಧಾರವಾಗಿದ್ದ ನೆಲವು ನೀರಾಗಿ ಹರಿಯಿತು.


ಆದದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿಯುಳ್ಳ ಮನುಷ್ಯನನ್ನು ಹೋಲುವನು.


ಕಟ್ಟಿದ ಮೇಲೆ ಮಳೆ ಸುರಿಯಿತು; ಹಳ್ಳಗಳು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಬಡಿಯಿತು. ಆದಾಗ್ಯೂ ಅದರ ಅಸ್ತಿವಾರವು ಬಂಡೆಯ ಮೇಲಿದ್ದದರಿಂದ ಅದು ಬೀಳಲಿಲ್ಲ.


ಕಟ್ಟಿದ ಮೇಲೆ ಮಳೆ ಸುರಿಯಿತು; ಹಳ್ಳಗಳು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆಗ ಅದು ಧಡಮ್ಮನೆ ಕಡುಕೊಂಡು ಬಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು