Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 7:28 - ಕನ್ನಡ ಸತ್ಯವೇದವು J.V. (BSI)

28 ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಆ ಜನರ ಗುಂಪುಗಳು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 “ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಆ ಜನರ ಗುಂಪು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಯೇಸುಸ್ವಾಮಿ ಇದೆಲ್ಲವನ್ನು ಹೇಳಿ ಮುಗಿಸಿದರು. ಅವರ ಬೋಧನೆ ಜನರಲ್ಲಿ ಅಮೋಘ ಪ್ರಭಾವವನ್ನು ಬೀರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೇಸು ಉಪದೇಶಿಸಿದ ಈ ಸಂಗತಿಗಳನ್ನು ಕೇಳಿ ಜನರು ಅತ್ಯಾಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ, ಅವರ ಬೋಧನೆಯನ್ನು ಕೇಳಿ ಜನರು ಆಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಜೆಜುನ್ ಹೆ ಸಗ್ಳೆ ಸಾಂಗುನ್ ಸರಲ್ಲ್ಯಾ ತನ್ನಾ ಲೊಕಾಂಚೆ ತಾಂಡೆ ತೆನಿ ಶಿಕ್ವುತಲಿ ರಿತ್ ಬಗುನ್ ಲೈ ಅಜಾಪ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 7:28
18 ತಿಳಿವುಗಳ ಹೋಲಿಕೆ  

ಅಲ್ಲಿ ಸಬ್ಬತ್‍ದಿನದಲ್ಲಿ ಅವರಿಗೆ ಉಪದೇಶ ಮಾಡುತ್ತಿರಲು ಆತನ ಮಾತು ಅಧಿಕಾರವುಳ್ಳದ್ದಾಗಿದ್ದದರಿಂದ ಅವರು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು.


ಜನರು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು; ಯಾಕಂದರೆ ಆತನು ಶಾಸ್ತ್ರಿಗಳಂತೆ ಉಪದೇಶಮಾಡದೆ ಅಧಿಕಾರವಿದ್ದವನಂತೆ ಅವರಿಗೆ ಉಪದೇಶ ಮಾಡುತ್ತಿದ್ದನು.


ಆ ಓಲೇಕಾರರು - ಈ ಮನುಷ್ಯನು ಮಾತಾಡುವ ರೀತಿಯಲ್ಲಿ ಯಾರೂ ಎಂದೂ ಮಾತಾಡಿದ್ದಿಲ್ಲ ಎಂದು ಉತ್ತರಕೊಟ್ಟರು.


ಸಬ್ಬತ್ ದಿನ ಬಂದಾಗ ಆತನು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡುವದಕ್ಕೆ ಪ್ರಾರಂಭಿಸಿದನು. ಎಲ್ಲರು ಕೇಳಿ ಅತ್ಯಾಶ್ಚರ್ಯಪಟ್ಟು - ಇವನಿಗೆ ಈ ಮಾತುಗಳು ಎಲ್ಲಿಂದ ಬಂದಿದ್ದಾವು? ಇವನು ಪಡೆದಿರುವ ಈ ಜ್ಞಾನವೇನು? ಇವನ ಕೈಯಿಂದ ಇಂಥ ಮಹತ್ಕಾರ್ಯಗಳಾಗುವದೇನು?


ಎಲ್ಲರು ಆತನನ್ನು ಹೊಗಳಿ ಆತನ ಬಾಯಿಂದ ಹೊರಡುವ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು ಇವನು ಯೋಸೇಫನ ಮಗನಲ್ಲವೇ ಎಂದು ಮಾತಾಡಿಕೊಂಡರು.


ಯೆಹೂದ್ಯರು ಅದಕ್ಕೆ ಆಶ್ಚರ್ಯಪಟ್ಟು - ವಿದ್ಯಾಭ್ಯಾಸ ಮಾಡದಿರುವ ಈತನಿಗೆ ಶಾಸ್ತ್ರಗಳು ತಿಳಿದಿರುವದು ಹೇಗೆ ಎಂದು ಹೇಳುತ್ತಿದ್ದರು.


ಜನರು ಅದನ್ನು ಕೇಳಿ ಆತನ ಬೋಧನೆಗೆ ಅತ್ಯಾಶ್ಚರ್ಯಪಟ್ಟರು.


ಆದರೆ ಜನರೆಲ್ಲರು ಆತನನ್ನು ಅಂಟಿಕೊಂಡು ಉಪದೇಶವನ್ನು ಗಮನಿಸಿ ಕೇಳುತ್ತಿದ್ದದರಿಂದ ಏನು ಮಾಡಬೇಕೋ ತೋರಲಿಲ್ಲ.


ಅದನ್ನು ಮಹಾಯಾಜಕರೂ ಶಾಸ್ತ್ರಿಗಳೂ ಕೇಳಿ ಅವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಸಂದರ್ಭ ನೋಡುತ್ತಿದ್ದರು; ಯಾಕಂದರೆ ಜನರೆಲ್ಲಾ ಆತನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಆತನಿಗೆ ಹೆದರುತ್ತಿದ್ದರು.


ಯೇಸು ಈ ಮಾತುಗಳನ್ನೆಲ್ಲಾ ಆಡಿ ಮುಗಿಸಿದ ಮೇಲೆ ತನ್ನ ಶಿಷ್ಯರಿಗೆ -


ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಹೇಳಬೇಕಾದದ್ದನ್ನು ಹೇಳಿ ಮುಗಿಸಿದ ಬಳಿಕ ಅಲ್ಲಿಯವರ ಊರುಗಳಲ್ಲಿ ಉಪದೇಶಮಾಡುವದಕ್ಕೂ ಸುವಾರ್ತೆಯನ್ನು ಸಾರುವದಕ್ಕೂ ಅಲ್ಲಿಂದ ಹೊರಟನು.


ನೀನು ಎಲ್ಲಾ ಮನುಷ್ಯರಿಗಿಂತ ಅತಿಸುಂದರನು; ನಿನ್ನ ಮಾತುಗಳು ಬಹಳ ಮಧುರ; ಇದರಿಂದಲೇ ದೈವಾನುಗ್ರಹವು ಯಾವಾಗಲೂ ನಿನ್ನ ಮೇಲಿದೆ ಎಂಬದು ನಿನ್ನ ಬಾಯ ಮಾತುಗಳಿಂದ ಸ್ಪಷ್ಟವಾಗುತ್ತದೆ.


ಯೇಸು ಈ ಮಾತುಗಳನ್ನು ಮುಗಿಸಿದ ಮೇಲೆ ಗಲಿಲಾಯವನ್ನು ಬಿಟ್ಟು ಯೊರ್ದನ್ ಹೊಳೆಯ ಆಚೆ ಪ್ರಯಾಣಮಾಡಿ ಯೂದಾಯ ಪ್ರಾಂತ್ಯಕ್ಕೆ ಬಂದನು.


ಕಟ್ಟಿದ ಮೇಲೆ ಮಳೆ ಸುರಿಯಿತು; ಹಳ್ಳಗಳು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆಗ ಅದು ಧಡಮ್ಮನೆ ಕಡುಕೊಂಡು ಬಿತ್ತು.


ಯಾಕಂದರೆ ಆತನು ಅವರ ಶಾಸ್ತ್ರಿಗಳಂತೆ ಉಪದೇಶ ಮಾಡದೆ ಅಧಿಕಾರವಿದ್ದವನಂತೆ ಅವರಿಗೆ ಉಪದೇಶಮಾಡುತ್ತಿದ್ದನು.


ಆತನು ಆಡಿದ ಮಾತುಗಳನ್ನು ಕೇಳಿದವರೆಲ್ಲರು ಆತನ ಬುದ್ಧಿಗೂ ಉತ್ತರಗಳಿಗೂ ಆಶ್ಚರ್ಯಪಟ್ಟರು.


ಆತನು ತನ್ನ ಮಾತುಗಳನ್ನೆಲ್ಲಾ ಜನರು ಕೇಳುವಂತೆ ಹೇಳಿ ಮುಗಿಸಿದ ಮೇಲೆ ಕಪೆರ್ನೌವಿುಗೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು