Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 7:29 - ಕನ್ನಡ ಸತ್ಯವೇದವು J.V. (BSI)

29 ಯಾಕಂದರೆ ಆತನು ಅವರ ಶಾಸ್ತ್ರಿಗಳಂತೆ ಉಪದೇಶ ಮಾಡದೆ ಅಧಿಕಾರವಿದ್ದವನಂತೆ ಅವರಿಗೆ ಉಪದೇಶಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಏಕೆಂದರೆ ಆತನು ಅವರ ಶಾಸ್ತ್ರಿಗಳಂತೆ ಉಪದೇಶಿಸದೆ ಅಧಿಕಾರವಿದ್ದವನಂತೆ ಅವರಿಗೆ ಉಪದೇಶಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಏಕೆಂದರೆ, ಅವರ ಧರ್ಮಶಾಸ್ತ್ರಿಗಳಂತೆ ಬೋಧಿಸದೆ ಯೇಸು ಅಧಿಕಾರ ವಾಣಿಯಿಂದ ಪ್ರಬೋಧಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಏಕೆಂದರೆ, ಆತನು ಧರ್ಮೋಪದೇಶಕರಂತೆ ಉಪದೇಶಿಸದೆ ಅಧಿಕಾರವಿದ್ದವನಂತೆ ಉಪದೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಏಕೆಂದರೆ, ಯೇಸು ಅವರ ನಿಯಮ ಬೋಧಕರಂತೆ ಬೋಧಿಸದೆ, ಅಧಿಕಾರವಿದ್ದವರಂತೆ ಬೋಧಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಕಶ್ಯಾಕ್ ಮಟ್ಲ್ಯಾರ್, ತೊ ಮೊಯ್ಜೆಚಿ ಶಾಸ್ತರಾ ಶಿಕ್ವುತಲ್ಯಾಂಚ್ಯಾ ಸರ್ಕೆ ಶಿಕ್ವಿನಶಿ, ಎಕ್ ಅದಿಕಾರ್ ಹೊತ್ತ್ಯಾ ಮಾನ್ಸಾ ಸರ್ಕೆ ಶಿಕ್ವುಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 7:29
23 ತಿಳಿವುಗಳ ಹೋಲಿಕೆ  

ಆಗ ಯೇಸು ಅವರಿಗೆ - ಇದನ್ನೆಲ್ಲಾ ಯಾವ ಅಧಿಕಾರದಿಂದ ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವದಿಲ್ಲ ಎಂದು ಹೇಳಿದನು. ಆಗ ಆತನು ಜನರಿಗೆ ಒಂದು ಸಾಮ್ಯವನ್ನು ಹೇಳುವದಕ್ಕೆ ತೊಡಗಿದನು.


ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವದಕ್ಕೆ ನಾನು ಬಲ್ಲವನಾಗುವಂತೆ ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ; ಬೆಳಬೆಳಗೂ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಜಾಗರಗೊಳಿಸುತ್ತಾನೆ.


ಅವನ ಮಾತಿನಲ್ಲಿ ಕಂಡುಬಂದ ಜ್ಞಾನವನ್ನೂ ಪವಿತ್ರಾತ್ಮ ಶಕ್ತಿಯನ್ನೂ ಎದುರಿಸಲಾರದೆ ಹೋದರು.


ಯಾಕಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರುನಿಲ್ಲುವದಕ್ಕೂ ಎದುರುಮಾತಾಡುವದಕ್ಕೂ ಆಗದಂಥ ಬಾಯನ್ನೂ ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.


ಆಗ ಯೇಸು ಹತ್ತರಕ್ಕೆ ಬಂದು - ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.


ಆದರೆ ನಾನು ನಿಮಗೆ ಹೇಳುವದೇನಂದರೆ - ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಿಂಸೆ ಪಡಿಸುವವರಿಗೋಸ್ಕರ ದೇವರನ್ನು ಪ್ರಾರ್ಥಿಸಿರಿ.


ಆದರೆ ನಾನು ನಿಮಗೆ ಹೇಳುವದೇನಂದರೆ - ಹಾದರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವದಕ್ಕೆ ಕಾರಣನಾಗುತ್ತಾನೆ ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರಮಾಡಿದವನಾಗಿದ್ದಾನೆ.


ಆದರೆ ನಾನು ನಿಮಗೆ ಹೇಳುವದೇನಂದರೆ - ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾದನು.


ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಹೆಚ್ಚಿನದಾಗದಿದ್ದರೆ ನೀವು ಪರಲೋಕರಾಜ್ಯದಲ್ಲಿ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.


ನಾನಾದರೋ ಯೆಹೋವನ ಆತ್ಮಾವೇಶದಿಂದ ಬಲಪರಾಕ್ರಮನ್ಯಾಯಭರಿತನಾಗಿ ಯಾಕೋಬಿಗೆ ಅದರ ದ್ರೋಹವನ್ನು ಇಸ್ರಾಯೇಲಿಗೆ ಅದರ ಪಾಪವನ್ನು ಸಾರಲು ಶಕ್ತನಾಗಿದ್ದೇನೆ.


ರಾಜನ ಮಾತಿಗೆ ಅಧಿಕಾರವುಂಟು; ಏನು ಮಾಡುತ್ತೀ ಎಂದು ಅವನನ್ನು ಯಾರು ತಾನೇ ಕೇಳಬಹುದು?


ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಆ ಜನರ ಗುಂಪುಗಳು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟವು.


ಆತನು ಬೆಟ್ಟದಿಂದಿಳಿದು ಬರುವಾಗ ಜನರು ಗುಂಪುಗುಂಪಾಗಿ ಆತನ ಹಿಂದೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು